ಸ್ಯಾಂಡಲ್ವುಡ್ ನಟ, ಆ ದಿನಗಳು ಚೇತನ್ ಕುಮಾರ್ (Chethan Kumar) ಅವರು ಸದಾ ಒಂದಲ್ಲೊಂದು ವಿವಾದ ಮಾಡುತ್ತಲೇ ಇರುತ್ತಾರೆ. ಅವರ ಹೇಳಿಕೆಗಳು, ಟ್ವೀಟ್, ಸೋಷಿಯಲ್ ಮೀಡಿಯಾ (Social Media) ಪೋಸ್ಟ್ಗಳು ಸುದ್ದಿಯಾಗದೇ ಹೋಗುವುದೇ ಇಲ್ಲ. ಪ್ರತಿಬಾರಿ ಅವರು ಏನೋ ಹೇಳಿದಾಗ ಅದು ದೊಡ್ಡ ವಿವಾದವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ನಡೆದ ಬೆಳವಣಿಗೆ ಮಾತ್ರ ಅವರನ್ನು ಸಂಕಷ್ಟಕ್ಕೆ ದೂಡಿದೆ. ಅರೆಸ್ಟ್ ಆಗಿದ್ದ ನಟನ ವೀಸಾವನ್ನು ಕೇಂದ್ರ ಸರ್ಕಾರ (Central Govt) ರದ್ದು ಮಾಡಿದ ಬೆನ್ನಲ್ಲೇ ಈ ಘಟನೆಯ ಬಗ್ಗೆ ದೊಡ್ಡ ಚರ್ಚೆ ಶುರುವಾಗಿತ್ತು. ಸ್ವತಃ ಚೇತನ್ ಈ ಬಗ್ಗೆ ಅಪ್ಡೇಟ್ ಕೊಟ್ಟಿದ್ದರು. ಈಗ ಕಾಂತಾರ ನಟ ಕಿಶೋರ್ ಅವರೂ ಪ್ರತಿಕ್ರಿಯಿಸಿದ್ದಾರೆ.
ಕಿಶೋರ್ ಹೇಳಿದ್ದೇನು?
ಹಿಂದುತ್ವ’ ಅನ್ನುವ ಪದ ವರ್ತಮಾನದ ರಾಜಕೀಯ ಪರಿಸ್ಥಿತಿಯಲ್ಲಿ ಹಿಂದೂ ಧರ್ಮ ಅಲ್ಲ. ನಿಜವಾದ ಹಿಂದೂ ಧರ್ಮ, ಸಕಲರನ್ನೂ ಒಳಗೊಂಡ ವಸುಧೆಯೇ ಒಂದು ಕುಟುಂಬವೆಂದು ನೋಡುವ ವಿಶಾಲ ಮನೋಸ್ಥಿತಿ.
ಆದರೆ ‘ಹಿಂದುತ್ವ’ ಎನ್ನುವ ಪದ ಬಳಕೆಯಾಗುತ್ತಿರುವುದು ಒಂದು ಪಕ್ಷದ, ಒಂದು ಸಂಘದ, ಅಧಿಕಾರಕ್ಕಾಗಿ ಒಡೆದಾಳುವ, ಪರದ್ವೇಷದ, ಮೂಲಭೂತವಾದಿ ವೈದಿಕ ಸಂಪ್ರದಾಯದ ಸಂಕುಚಿತ ಪರಿಕಲ್ಪನೆಯಾಗಿಯಷ್ಟೆ.
ಹಾಗಾಗಿ ಈ ಜೀವ ವಿರೋಧಿ ರಾಜಕೀಯದ ಟೀಕೆಯಿಂದ ಹಿಂದೂಗಳಿಗೆಲ್ಲರಿಗೂ ಅಪಮಾನವಾಯಿತೆನ್ನುವುದು ಎಷ್ಟು ಉಚಿತ??
ಹಾಗೆ ಅವಮಾನ ಪಡಲೇಬೇಕೆಂದರೆ ವೈದಿಕ ಪರಂಪರೆ ಇಂದಿಗೂ ಪ್ರತಿಪಾದಿಸುತ್ತಿರುವ ನಮ್ಮಲ್ಲೇ ಇರುವ ಜಾತಿ ಪದ್ಧತಿ, ಅಸ್ಪೃಶ್ಯತೆ, ಲಿಂಗ ಬೇಧ ಇವುಗಳಿಂದಲ್ಲವೇ?
ನಮ್ಮ ತಪ್ಪುಗಳನ್ನು ಎತ್ತಿ ತೋರಿಸುವ ನಮ್ಮದೇ ಜನರನ್ನು ನಿಂದಿಸುವ, ಆರೋಪಿಸುವ, ಜೈಲಿಗೆ ಹಾಕುವ ಅಥವಾ ಗಡೀಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು ಆ ನಿಟ್ಟಿನಲ್ಲಿ ನಮ್ಮನ್ನು ನಾವು ತಿದ್ದಿಕೊಂಡು ಹಿಂದೂ ಧರ್ಮವನ್ನು ಎಲ್ಲರಿಗೂ ಮಾದರಿಯಾಗಿಸಬೇಕಲ್ಲವೇ? ಎಂದು ಕಿಶೋರ್ ಅವರು ಇನ್ಸ್ಟಾಗ್ರಾಮ್ನಲ್ಲಿ ಸುದೀರ್ಘ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ.
ಇದನ್ನೂ ಓದಿ: Actor Chethan: ಅಮೆರಿಕಾಗೆ ಹೋಗಲ್ಲ, ಇಲ್ಲಿಯೇ ಇರ್ತೀನಿ! ಕೇಂದ್ರ ಸರ್ಕಾರದಿಂದ ನಟ ಚೇತನ್ ವೀಸಾ ರದ್ದು
ಸ್ಯಾಂಡಲ್ವುಡ್ ಚಿತ್ರರಂಗದ ನಟ ಆದಿನಗಳು ಖ್ಯಾತಿಯ ನಟ ಚೇತನ್ ಅವರ ವಿಸಾವನ್ನು ಕೇಂದ್ರ ಸರ್ಕಾರ ರದ್ದು ಗೊಳಿಸಿರುವ ವಿಚಾರ ಈಗ ರಿವೀಲ್ ಆಗಿದೆ. ವಿಸಾ ರದ್ದಾಗಿರುವ ಬಗ್ಗೆ ಚೇತನ್ ಅವರಿಗೆ ಕೇಂದ್ರ ಗೃಹ ಇಲಾಖೆ ನೋಟಿಸ್ ಕೂಡಾ ಕಳುಹಿಸಿದೆ. ವಿಸಾ ರದ್ದಾಗಿರುವ ಬಗ್ಗೆ ನಟ ಚೇತನ್ ಸುದ್ದಿಗೋಷ್ಠಿ ಕರೆದಿದ್ದರು.
23 ವರ್ಷ ಅಮೆರಿಕಾದಲ್ಲಿಯೇ ಇದ್ದ ನಟ
23 ವರ್ಷ ನಾನು ಇದ್ದಿದ್ದು, ಓದಿದ್ದು ಅಮೆರಿಕಾದಲ್ಲಿ. ಆ ನಂತರ ಸೇವೆ ಸಲ್ಲಿಸಲು ಭಾರತಕ್ಕೆ ಬಂದೆ. ಆದಾದ ನಂತರ ಸಿನಿಮಾ ಸೇರಿದಂತೆ ಸಾಕಷ್ಟು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹೋರಾಟ ಮಾಡಿ ಆದಿವಾಸಿಗಳಿಗಾಗಿ 528 ಮನೆಗಳನ್ನ ಕಟ್ಟಿಸಿದ್ದೇವೆ. ನಮ್ಮ ಸಿದ್ದಾಂತ, ಅಂಬೇಡ್ಕರ್ ವಾದ, ಪೆರಿಯರ್ ವಾದ ಸರ್ಕಾರಕ್ಕೆ ಇಷ್ಟವಾಗಿಲ್ಲ ಎಂದಿದ್ದಾರೆ.
ಸತ್ಯದ ಟ್ವೀಟ್ ಮಾಡಿದ್ದಕ್ಕೆ ಮೂರು ದಿನ ಜೈಲು
ಬ್ರಹ್ಮಣ್ಯ ಲಾಭೀ ಎನ್ನುವ ಮಾತು ಹೇಳಿದ್ದಕ್ಕೆ 295A ಕೇಸ್ ಹಾಕಿದ್ದಾರೆ. ಗನ್ಮ್ಯಾನ್ನನ್ನು ಒಂದುವರೆ ವರ್ಷದ ಹಿಂದೆಯೇ ತೆಗೆದಿದ್ದಾರೆ. ಒಂದು ಸತ್ಯದ ಟ್ವೀಟ್ ಮಾಡಿದ್ದಕ್ಕೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಅಂತ ಮೂರು ದಿನ ಜೈಲಿಗೆ ಕಳಿಸಿದ್ದರು ಎಂದಿದ್ದಾರೆ. OcI(ಒವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ )ನನಗೆ ನೀಡಿದ್ದಾರೆ. ಇದರಲ್ಲಿ ಮತ ಹಾಕೋದು, ಚುನಾವಣೆ ನಿಲ್ಲುವುದು, ಸರ್ಕಾರಿ ನೌಕರನಾಗಿ ಕೆಲಸ ಮಾಡೋದು ಬಿಟ್ಟರೆ ಎಲ್ಲ ಹಕ್ಕು ನನಗೆ ಇದೆ ಎಂದಿದ್ದಾರೆ.
ಇದೀಗ ಈ ಎಲ್ಲ ಘಟನೆಗಳ ಬಗ್ಗೆ ನಟ ಕಿಶೋರ್ ಪ್ರತಿಕ್ರಿಯಿಸಿದ್ದು ಅವರು ತಟಸ್ಥವಾಗಿ ಈ ಎಲ್ಲ ಬೆಳವಣಿಗೆಗಳನ್ನು ಅವಲೋಕಿಸಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ