ಬಹುಭಾಷಾ ನಟಿ ಕೀರ್ತಿ ಸುರೇಶ್ ನಿರ್ದೇಶಕರೊಬ್ಬರನ್ನು ಓಡಾಡಿಸಿಕೊಂಡು ಹೊಡೆದಿದ್ದಾರೆ. ಮಾತ್ರವಲ್ಲದೆ, ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಂದಹಾಗೆಯೇ ಕೀರ್ತಿ ಸುರೇಶ್ ತಮಾಷೆಗಾಗಿ ಈ ರೀತಿ ಮಾಡಿದ್ದು, ತೆಲುಗಿನ ಖ್ಯಾತ ನಟರೊಬ್ಬರಿಗೂ ಹೊಡೆಯಲಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.
ಕೀರ್ತಿ ಸುರೇಶ್ ಸದ್ಯ ‘ರಂಗ್ ದೇ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ವೆಂಕಿ ಅಟ್ಲೂರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಸದ್ಯ ಈ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಚಿತ್ರೀಕರಣದ ಬಿಡುವಿನ ವೇಳೆ ಕೀರ್ತಿ ಸುರೇರ್ಶ್ ನಿರ್ದೇಶಕ ವೆಂಕಿ ಅಟ್ಲೂರಿ ಅವರನ್ನು ಓಡಾಡಿಸಿಕೊಂಡು ಹೊಡೆದಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ಈ ತಮಾಷೆಯ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ. ಜೊತೆಗೆ ತಮ್ಮ ಮುಂದಿನ ಟಾರ್ಗೆಟ್ ನಟ ನಿತಿನ್ ಎಂದು ಹೇಳಿದ್ದಾರೆ.
View this post on Instagram
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ