ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ (KGF) ಸಿನಿಮಾ ಖ್ಯಾತಿಯ ತಾತ ಎಂದೇ ಫೇಮಸ್ ಆಗಿರುವ ಹಿರಿಯ ನಟ ಮೃತಪಟ್ಟಿದ್ದಾರೆ. ಅನಾರೋಗ್ಯದ ಕಾರಣ ಆಸ್ಪತ್ರೆಗೆ (Hopitalized) ದಾಖಲಾದ ಕೃಷ್ಣೋಜಿ ರಾವ್ (Krishna G Rao) ಅವರು ಐಸಿಯುನಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದರು. ಕೆಜಿಎಫ್ ಹಾಗೂ ಕೆಜಿಎಫ್ 2 ಸಿನಿಮಾದಲ್ಲಿ ಯಶ್ ಜೊತೆ ನಟಿಸಿ ದೊಡ್ಡ ಹೆಸರು ಮಾಡಿದ್ದ ಇವರು ಬೆಂಗಳೂರಿನ (Bengaluru) ಸೀತಾ ಸರ್ಕಲ್ ಬಳಿಯ ವಿನಾಯಕ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಹಿರಿಯ ನಟನ ಸಾವಿನ ಸುದ್ದಿ ಅವರ ಅಭಿಮಾನಿಗಳಲ್ಲಿ ಬೇಸರ ತಂದಿದೆ. ಸಂಬಂಧಿಕರ ಮನೆಗೆ ಹೋಗಿದ್ದ ಕೃಷ್ಣೋಜಿ ರಾವ್ ಅವರನ್ನು ಸುಸ್ತಾದ ಕಾರಣ ಮಧ್ಯರಾತ್ರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರೋ ಕೃಷ್ಣೋಜಿ ರಾವ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ.
ಕೆಜಿಎಫ್ ತಾತ ಎಂದೇ ಫೇಮಸ್ ಆಗಿರುವ ಸ್ಯಾಂಡಲ್ವುಡ್ ನಟ ಕೃಷ್ಣ ಜಿ ರಾವ್ ಅವರು ಕೆಜಿಎಫ್ ಮಾತ್ರವಲ್ಲದೆ ನ್ಯಾನೋ ನಾರಾಯಣಪ್ಪ ಸಿನಿಮಾದಲ್ಲಿಯೂ ಪ್ರಮುಖ ಪಾತ್ರ ಮಾಡಿದ್ದಾರೆ. ಕೆಜಿಎಫ್ ತಾತನ ಪಾತ್ರದ ನಂತರ ರಾವ್ ಪ್ರಸಿದ್ಧರಾದರು. ತುಮಕೂರಿನ ಪಾವಗಡ ಮೂಲದ ರಾವ್ ಸುಮಾರು ನಾಲ್ಕು ದಶಕಗಳಿಂದ ಸ್ಯಾಂಡಲ್ವುಡ್ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ನ್ಯಾನೋ ನಾರಾಯಣಪ್ಪ
ರೊಮ್ಯಾಂಟಿಕ್ ಕಾಮಿಡಿ ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ಮಾಡುವ ಮೂಲಕ ನ್ಯಾನೋ ನಾರಾಯಣಪ್ಪ ಸಿನಿಮಾದಲ್ಲಿ ಅವರು ತಮ್ಮ ಜೀವಿತಾವಧಿಯ ಮಹತ್ವಾಕಾಂಕ್ಷೆಯ ಕನಸೊಂದನ್ನು ಸಾಕಾರಗೊಳಿಸಿಕೊಂಡಿದ್ದಾರೆ. ನಾನು ನನ್ನ ಗುರು ಎಂದು ಗೌರವಿಸುವ ಶಂಕರ್ ನಾಗ್ ಅವರ ಬಳಿ ಕೆಲಸ ಮಾಡುವ ಅವಕಾಶ ಸಿಕ್ಕಿತು. ನಾನು ಕನ್ನಡ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸುತ್ತಿದ್ದೇನೆ. ಆದರೆ ಕೆಜಿಎಫ್ ಸಿನಿಮಾ ನನಗೆ ಖ್ಯಾತಿ ತಂದುಕೊಟ್ಟಿತು ಎಂದಿದ್ದರು ನಟ.
ಈ ಸಿನಿಮಾದಲ್ಲಿ ನಾಯಕನಾಗಿ ನನ್ನನ್ನು ಆಯ್ಕೆ ಮಾಡಿದ್ದಕ್ಕಾಗಿ ನಿರ್ದೇಶಕ ಕುಮಾರ್ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ರಾವ್ ಅವರು ಈ ಹಿಂದೆ ಹೇಳಿದ್ದರು. ಈ ಮೂವಿ ಕನ್ನಡ ಮತ್ತು ತೆಲುಗಿನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.
ಇದನ್ನೂ ಓದಿ: KGF Actor Hospitalized: ಕೆಜಿಎಫ್ ತಾತ ಆಸ್ಪತ್ರೆಗೆ ದಾಖಲು, ಐಸಿಯುವಿನಲ್ಲಿ ಚಿಕಿತ್ಸೆ
ಕೆಮಿಸ್ಟ್ರಿ ಆಫ್ ಕರಿಯಪ್ಪ ಮತ್ತು ಕ್ರಿಟಿಕಲ್ ಕೀರ್ತನೆಗಳು ಚಿತ್ರಗಳಿಗೆ ಮೆಗಾಫೋನ್ ನಿರ್ವಹಿಸಿದ ಕುಮಾರ್ ಕೃಷ್ಣ ಜಿ ರಾವ್ ಅವರ ಸಿನಿಮಾಗೆ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಈ ಚಿತ್ರದ ಸ್ಕ್ರಿಪ್ಟ್ ಬೆಂಗಳೂರಿನಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದೆ.
ಸ್ಕ್ರಿಪ್ಟ್ ಬರೆಯುವಾಗ ಅದರಲ್ಲಿ ನೈಜತೆ ತರಲು ನಾನು ನನ್ನ ಕೈಲಾದಷ್ಟು ಪ್ರಯತ್ನಿಸಿದ್ದೇನೆ. ನನ್ನ ಹಿಂದಿನ ಚಿತ್ರಗಳಿಗಿಂತ ಈ ಸಿನಿಮಾ ವಿಭಿನ್ನವಾಗಿದೆ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಇದರಲ್ಲಿ ಕಾಮಿಡಿ ಮತ್ತು ಎಮೋಷನ್ ಇದೆ ಎಂದು ನಿರ್ದೇಶಕ ಕುಮಾರ್ ಹೇಳಿದರು, ತೆಲುಗು ಆವೃತ್ತಿಯು ಡಬ್ಬಿಂಗ್ ಆವೃತ್ತಿಯಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ