ಕೇವಲ ಸ್ಯಾಂಡಲ್ವುಡ್ನಲ್ಲಿ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗ ಬಹು ನಿರೀಕ್ಷೆಯ ‘ಕೆಜಿಎಫ್ 2’ ಸಿನಿಮಾಕ್ಕೆ ಕಾದುಕುಳಿತಿದೆ. ಈಗಾಗಲೇ ಕ್ಲೈಮ್ಯಾಕ್ಸ್ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ. ಡಿಸೆಂಬರ್ 21 ರಂದು ಬೆಳಗ್ಗೆ 10.08 ಕ್ಕೆ ಕೆಜಿಎಫ್ ಚಿತ್ರಕ್ಕೆ ಸಂಬಂಧಿಸಿದಂತೆ ಹೊಸ ವಿಚಾರವನ್ನು ಅನೌನ್ಸ್ ಮಾಡುವುದಾಗಿ ಹೇಳಿಕೊಂಡಿದ್ದ ಚಿತ್ರತಂಡ ಕೊನೆಗೂ ಹೊಸ ವಿಚಾರವೊಂದನ್ನು ರಿವೀಲ್ ಮಾಡಿದ್ದು ಯಶ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದೆ. ಹೌದು, ದೊಡ್ಡ ಅಪ್ಡೇಟ್ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಇಂದು ಬೆಳಗ್ಗೆ ಕೆಜಿಎಫ್ ಚಿತ್ರತಂಡ ಬಿಗ್ ಸರ್ಪ್ರೈಸ್ ನೀಡಿದೆ.
ಮುಂಬರುವ ಜನವರಿ 8ಕ್ಕೆ ಕೆಜಿಎಫ್ ಚಾಪ್ಟರ್-2 ಟೀಸರ್ ಬಿಡುಗಡೆಯಾಗಲಿದೆ ಎಂದು ಪ್ರಶಾಂತ್ ನೀಲ್ ಘೋಷಿಸಿದ್ದಾರೆ. ಈ ಮೂಲಕ ಕೆಜಿಎಫ್ ಚಾಪ್ಟರ್- 1 ಸಿನಿಮಾ ಬಿಡುಗಡೆಯಾದ ಎರಡು ವರ್ಷಗಳಿಗೆ ಸರಿಯಾಗಿ ಇಂದು ಮತ್ತೊಂದು ದೊಡ್ಡ ಉಡುಗೊರೆ ನೀಲ್ ಅವರು ನೀಡಿದ್ದಾರೆ.
Anupama Parameswaran: ನಾನು ತುಂಬಾ ಚಿಕ್ಕ ಹುಡುಗಿ, ನನ್ನ ಬಳಿ ಆ ರೀತಿ ಕೇಳಬೇಡಿ ಎಂದ ಅನುಪಮಾ ಪರಮೇಶ್ವರನ್
'ಸಾಮ್ರಾಜ್ಯದ ಒಂದು ಝಲಕ್.. ಇದಕ್ಕಾಗಿ ಒಂದು ವರ್ಷ ಹೆಚ್ಚಿನ ಸಮಯ ಹಿಡಿಯಿತು. ಆದರೆ ನಾವು ಇನ್ನಷ್ಟು ಬಲಿಷ್ಟವಾಗಿ, ದೊಡ್ಡದಾಗಿ ಆಗಮಿಸುತ್ತಿದ್ದೇವೆ. ಜನವರಿ 8ರಂದು ಬೆಳಗ್ಗೆ 10 ಗಂಟೆ 18 ನಿಮಿಷಕ್ಕೆ ಸರಿಯಾಗಿ ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನಲ್ನಲ್ಲಿ ಕೆಜಿಎಫ್ ಚಾಪ್ಟರ್-2 ಟೀಸರ್ ಬಿಡುಗಡೆ ಆಗಲಿದೆ' ಎಂದು ಪ್ರಶಾಂತ್ ನೀಲ್ ಟ್ವೀಟ್ ಮಾಡಿದ್ದಾರೆ.
A glance into the Empire 💥
It might have taken a year longer for this, but we are coming stronger, bigger & deadlier!#KGFChapter2TeaserOnJan8 at 10:18 AM on @hombalefilms youtube.@VKiragandur @TheNameIsYash @duttsanjay @TandonRaveena @SrinidhiShetty7 @BasrurRavi @bhuvangowda84 pic.twitter.com/evCn5jiBkn
— Prashanth Neel (@prashanth_neel) December 21, 2020
ನಿನ್ನೆಯಷ್ಟೇ ಕೆಜಿಎಫ್ ಚಾಪ್ಟರ್ 2 ಚಿತ್ರೀಕರಣ ಮುಗಿಸಿದ್ದ ಚಿತ್ರತಂಡ ಕುಂಬಳಕಾಯಿ ಹೊಡೆದಿತ್ತು. ಇದೀಗ ಟೀಸರ್ ಬಿಡುಗಡೆ ದಿನಾಂಕ ಹಾಗೂ ಸಮಯವನ್ನು ಅನೌನ್ಸ್ ಮಾಡುವ ಮೂಲಕ ಮತ್ತಷ್ಟು ಕುತೂಹಲ ಹೆಚ್ಚಾಗುವಂತೆ ಮಾಡಿದೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ಈ ಚಿತ್ರವನ್ನು ನಿರ್ಮಿಸುತ್ತಿದ್ದು ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಶಾಂತ್ ಸಿಂಗ್ ತಂದೆ!
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ 2020ರಲ್ಲಿಯೇ ಈ ಸಿನಿಮಾ ತೆರೆಕಾಣಬೇಕಿತ್ತು. ಆದರೆ ಕೊರೊನಾ ವೈರಸ್ ಹಾವಳಿಯಿಂದ ಉಂಟಾದ ಲಾಕ್‌ಡೌನ್‌ನಿಂದಾಗಿ ಚಿತ್ರದ ಕೆಲಸಗಳು ಸ್ಥಗಿತಗೊಂಡಿದ್ದರಿಂದ ರಿಲೀಸ್ ತಡವಾಗಿದೆ. 2021 ಏಪ್ರಿಲ್ ವೇಳೆಗೆ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ