ಸ್ಯಾಂಡಲ್ವುಡ್ ರಾಕಿ ಬಾಯ್ ಕಣ್ಣೀರಿಟ್ಟ ಪ್ರಸಂಗ ನಡೆದಿದ್ದು, ಈ ವಿಚಾರವನ್ನು ನಟಿ ರಾಧಿಕಾ ಪಂಡಿತ್ ತಮ್ಮ ಇನ್ಸ್ಟಾಗ್ರಾಂ ಪೇಜ್ನಲ್ಲಿ ಹೇಳಿಕೊಂಡಿದ್ದಾರೆ.
ಇತ್ತೀಚೆಗೆ ಯಶ್ ದಂಪತಿ ತಮ್ಮ ಮುದ್ದಿನ ಮಗಳು ಐರಾಗೆ ಕಿವಿ ಚುಚ್ಚಿಸಿದ್ದಾರೆ. ಈ ವೇಳೆ ಯಶ್ ಕಣ್ಣೀರು ಹಾಕಿದ್ದಾರೆ. ರಾಕಿಂಗ್ ಸ್ಟಾರ್ ಮೊಟ್ಟ ಮೊದಲ ಬಾರಿಗೆ ಕಣ್ಣೀರು ಹಾಕಿದ್ದನ್ನು ನೋಡಿದೆ ಎಂದು ರಾಧಿಕಾ ಪಂಡಿತ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.
ರಾಕಿಂಗ್ ದಂಪತಿಗಳು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಮೊದಲ ಮಗು ಐರಾಗೆ ಎಂಟು ತಿಂಗಳು ತುಂಬಿದ್ದು. ಈ ಸಂದರ್ಭ ಮಗುವಿನ ಕಿವಿ ಚುಚ್ಚಿಸುವ ಸಂಪ್ರದಾಯವೊಂದಿಗೆ. ಹಾಗಾಗಿ, ಐರಾಳ ಕಿವಿ ಚುಚ್ಚಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ. ಹೆತ್ತವರಿಗೆ ನಿಜಕ್ಕೂ ಕಷ್ಟದ ದಿನಗಳಲ್ಲಿ ಇದು ಒಂದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕೆ.ಜಿ.ಎಫ್-2 ಚಿತ್ರದ ಶೂಟಿಂಗ್ಗೆ ತಡೆಯಾಜ್ಞೆ ನೀಡಿದ ಕೋರ್ಟ್; ಚಿತ್ರೀಕರಣ ಸ್ಥಗಿತ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ