ಕಿಚ್ಚ ಸುದೀಪ್ (Kiccha Sudeep) ಸದ್ಯ ವಿಕ್ರಾಂತ್ರ ರೋಣ (Vikrant Rona) ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಪ್ಯಾನ್ ಇಂಡಿಯಾ (Pan India) ಸಿನಿಮಾವಾಗಿರುವ ವಿಕ್ರಂತ್ ರೋಣ ಪ್ರಚಾರ ಕಾರ್ಯ ದೆಹಲಿ ಸೇರಿದಂತೆ ಹಲವೆಡೆ ಭರ್ಜರಿಯಾಗಿ ನಡೆಯುತ್ತಿದೆ. ಈ ಮಧ್ಯೆ ಪ್ರಚಾರ ಕಾರ್ಯದಲ್ಲಿ ಕಿಚ್ಚನ ಒಂದು ಮಾತು ಕನ್ನಡಿಗರಲ್ಲಿ ಅಭಿಮಾನ ಹೆಚ್ಚು ಮಾಡಿದೆ. ಎಲ್ಲರಿಗೂ ಗೊತ್ತಿರುವಂತೆ ಕಿಚ್ಚನಿಗೆ ಕನ್ನಡಾಭಿಮಾನ ಬಹಳ ಹೆಚ್ಚು. ಈ ಮೊದಲು ಹಿಂದಿ ರಾಷ್ಟ್ರಭಾಷೆಯ ಕುರಿತು ಬಾಲಿವುಡ್ ನಟ (Bollywood Actor) ಅಜಯ್ ದೇವಗನ್ ಜೊತೆಗಿನ ಟ್ವೀಟ್ ವಾರ್ ಬಗ್ಗೆ ಗೊತ್ತಿದೆ. ಇದೀಗ ಸ್ಟೇಜ್ ಮೇಲೆ ಕನ್ನಡದ ಬಗ್ಗೆ ಅವರ ಮಾತು ಫುಲ್ ವೈರಲ್ ಆಗುತ್ತಿದೆ.
ಕನ್ನಡ್ ಅಲ್ಲ ಕನ್ನಡ ಎಂದ ಕಿಚ್ಚ
ಹೌದು, ನಿನ್ನೆ ವಿಕ್ರಾಂತ್ ರೋಣ ಸಿನಿಮಾದ ಪ್ರಚಾರ ಕಾರ್ಯದ ಭಾಗವಾಗಿ ಎಲ್ಲರಿಗೂ ಗೊತ್ತಿರುವಂತೆ ವಿಶ್ವದಾದ್ಯಂತ ಸದ್ಯ ಹೆಚ್ಚು ಚಾಲ್ತಿಯಲ್ಲಿರುವ NFT ಅನ್ನು ವಿಕ್ರಾಂತ್ ರೋಣ ಚಿತ್ರದಲ್ಲಿಯೂ ಬಹಳಸಲಾಗುತ್ತಿದೆ, ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸುದ್ದಿಗೋಷ್ಠಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ NFT ಅನ್ನು ಪ್ರತಿನಿಧಿಸುವ ವ್ಯಕ್ತಿಯೊಬ್ಬರು ಸಿನಿಮಾ ಬಗ್ಗೆ ಹಾಗೂ ಕನ್ನಡ ಸಿನಿ ರಂಗದ ಬಗ್ಗೆ ಮಾತನಾಡುವಾಗ ಕನ್ನಡ್ ಎಂದು ಹೇಳಿದ್ದಾರೆ. ಸಾಮಾನ್ಯವಾಗಿ ಕನ್ನಡ ಭಾಷೆ ಬರದ ಹಲವಾರು ಜನರು ಕನ್ನಡ ಎಂದು ಉಚ್ಛರಣೆ ಮಾಡುವುದಿಲ್ಲ, ಕನ್ನಡ್ ಎನ್ನುತ್ತಾರೆ. ಹಾಗೆಯೇ ಈ ವ್ಯಕ್ತಿ ಸಹ ಹಾಗೆಯೇ ಹೇಳಿದ್ದಾರೆ. ಅದಕ್ಕೆ ಕಿಚ್ಚ ಅದು ಕನ್ನಡ್ ಅಲ್ಲ ಕನ್ನಡ ಎಂದು ಹೇಳಿಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಕಿಚ್ಚನ ಈ ನಡೆಗೆ ಫುಲ್ ಖುಷ್ ಆಗಿದ್ದಾರೆ.
ಕನ್ನಡ್ ಅಲ್ಲ, ಅದು ಕನ್ನಡ💖#kannadaactors #VikrantRona 🤗 pic.twitter.com/Wl2s5JpPoY
— Manushri (@Manushri15) July 17, 2022
ಇದನ್ನೂ ಓದಿ: ಅದ್ಧೂರಿಯಾಗಿ ಫಾರ್ಮ್ ಹೌಸ್ ನಿರ್ಮಾಣ ಮಾಡ್ತಿದ್ದಾರೆ ಜೂ ಎನ್ಟಿಆರ್, ಹೆಂಡತಿಗೆ ಭರ್ಜರಿ ಗಿಫ್ಟ್ ಕೊಡ್ತಾರಂತೆ ನಟ!
ಸುದೀಪ್ ಹೇಳಿಕೆಗೆ ಪ್ರತಿಕ್ರಿಯಿಸಿದ ಬಾಲಿವುಡ್ ನಟ ಅಜಯ್ ದೇವಗನ್, “ಸಹೋದರ ಕಿಚ್ಚ ಸುದೀಪ್, ನಿಮ್ಮ ಪ್ರಕಾರ ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲವೇ? ಅಲ್ಲ ಎಂದಾದರೆ ನೀವು ನಿಮ್ಮ ಮಾತೃಭಾಷೆಯ ಚಲನಚಿತ್ರಗಳನ್ನು ಹಿಂದಿಯಲ್ಲಿ ಏಕೆ ಡಬ್ ಮಾಡಿ, ಬಿಡುಗಡೆ ಮಾಡುತ್ತೀರಿ? ಅಂತ ಪ್ರಶ್ನಿಸಿದ್ದರು. ಅಲ್ಲದೇ, “ಹಿಂದಿ ನಮ್ಮ ಮಾತೃಭಾಷೆ ಮತ್ತು ರಾಷ್ಟ್ರೀಯ ಭಾಷೆಯಾಗಿತ್ತು, ಮತ್ತು ಯಾವಾಗಲೂ ಅದು ರಾಷ್ಟ್ರ ಭಾಷೆಯಾಗಿಯೇ ಇರುತ್ತದೆ. ಜನ ಗಣ ಮನ…” ಅಂತ ಟ್ವೀಟ್ ಮಾಡಿದ್ದರು.
ಇದನ್ನೂ ಓದಿ: ಥ್ಯಾಂಕ್ಯೂ ಹೇಳೋಕೆ ನಾಚಿಕೆ ಪಡ್ಬಾರ್ದು ಅಂದ ನಾಗ ಚೈತನ್ಯ, ಸಿನಿಮಾ ಪ್ರಮೋಷನ್ನಲ್ಲಿ ಫುಲ್ ಬ್ಯುಸಿ ನಟ
ವಿಕ್ರಾಂತ್ ರೋಣ ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿ
ವಿಕ್ರಾಂತ್ ರೋಣ ಸಿನಿಮಾ ವಿಚಾರಕ್ಕೆ ಬಂದರೆ ಸುದೀಪ್ ವಿಕ್ರಾಂತ್ ರೋಣ ಸಿನಿಮಾದ ಪ್ರಚಾರಕ್ಕಾಗಿ ದೆಹಲಿಗೆ ತೆರಳಿದ್ದಾರೆ. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿದ್ದಾರೆ. ಇದಲ್ಲದೇ ಸುದೀಪ್ ದೆಹಲಿಯ ಇಂಡಿಯಾ ಗೇಟ್ ಗೂ ಭೇಟಿ ಕೊಟ್ಟಿದ್ದು, ಉತ್ತರ ಭಾರತದಾದ್ಯಂತ ವಿಕ್ರಾಂತ್ ರೋಣ ಸಿನಿಮಾ ಪ್ರಚಾರ ಮಾಡಲಿದ್ದಾರಂತೆ. ಕೆಜಿಎಪ್ ಬಳಿಕ ಕನ್ನಡ ಚಿತ್ರರಂಗದಿಂದ ಬರುತ್ತಿರೋ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಚಿತ್ರವಾಗಿದ್ದು, ಅನೂಪ್ ಭಂಡಾರಿ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರಕ್ಕೆ ಜಾಕ್ ಮಂಜು ಬಂಡವಾಳ ಹೂಡಿದ್ದಾರೆ.ಚಿತ್ರವು ಜುಲೈ 28 ಕ್ಕೆ ವಿಶ್ವದಾದ್ಯಂತ ಬಿಡುಗಡೆ ಆಗಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ