ಕನ್ನಡ ಸೇರಿದಂತೆ ತೆಲುಗು, ಮಲಯಾಳಂ ಮತ್ತು ಸಾಕಷ್ಟು ತಮಿಳು ಚಿತ್ರಗಳಲ್ಲಿ ಅಭಿನಯಿಸಿರುವ ಹಿರಿಯ ನಟಿ ಕವಿತಾ ಅವರ ಪತಿ ದಶರಥ ರಾಜ್ ಇಂದು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೇವಲ 15 ದಿನಗಳಲ್ಲಿ ಗಂಡ ಮತ್ತು ಮಗ ಇಬ್ಬರೂ ಸಾವನ್ನಪ್ಪಿರುವುದು ಕವಿತಾ ಅವರಿಗೆ ದಿಗ್ಭ್ರಮೆ ಮೂಡಿಸಿದೆ. ಕವಿತಾ ಕೆಲವು ದಿನಗಳ ಹಿಂದಷ್ಟೇ ಕೊರೋನಾ ಸೋಂಕಿನಿಂದಾಗಿ ತಮ್ಮ ಮಗನನ್ನು ಕಳೆದುಕೊಂಡಿದ್ದರು. ಅವರ ಮಗ ಸಂಜಯ್ ರೂಪ್ಗೆ ಕೊರೋನಾ ಸೋಂಕು ತಗುಲಿತ್ತು. ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಜೂನ್ 15ರಂದು ಸಂಜಯ್ ಅಸುನೀಗಿದ್ದರು.
ಬಳಿಕ ಕವಿತಾ ಅವರ ಪತಿ ದಶರಥ ರಾಜ್ ಅವರಿಗೂ ಕೋವಿಡ್ ಪಾಸಿಟಿವ್ ಆಗಿತ್ತು. ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳಿದಿದ್ದಾರೆ . ಅವರ ಪರಿಸ್ಥಿತಿ ತೀರಾ ಗಂಭೀರವಾಗಿದ್ದು, ಕೊರೋನಾ ಸೋಂಕಿನಿಂದ ತೀರಾ ಕೃಷರಾಗಿದ್ದರು ಎಂದು ವರದಿಗಳು ತಿಳಿಸಿವೆ.
ತಮ್ಮ ಮಗನ ಸಾವಿನ ನೋವಿಂದ ಹೊರಬರುವ ಮುನ್ನವೇ ಕವಿತಾ ಅವರಿಗೆ ಗಂಡನ ಸಾವು ಮತ್ತೊಂದು ಆಘಾತ ತರಿಸಿದೆ. ಗಂಡ-ಮಗ ಇಬ್ಬರನ್ನೂ ಕಳೆದುಕೊಂಡು ಕವಿತಾ ಮತ್ತಷ್ಟು ನೊಂದಿದ್ದಾರೆ. ಎರಡು ವಾರಗಳಲ್ಲಿ ಎರಡು ಸಾವುಗಳನ್ನು ಕಂಡ ಕವಿತಾ ಮನೆಯವರು ಮಮ್ಮಲ ಮರುಗಿದ್ದಾರೆ.
ಇದನ್ನೂ ಓದಿ:Gold Price Today: ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಇಂತಿದೆ..!
ಕುಟುಂಬಸ್ಥರು ಕಣ್ಣೀರಾಕುತ್ತಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ. 15 ದಿನಗಳ ಅಂತರದಲ್ಲಿ 2 ಸಾವನ್ನು ಕಂಡ ಕವಿತಾ ದಿಗ್ಭ್ರಮೆಗೊಂಡಿದ್ದಾರೆ. ಇಡೀ ದಕ್ಷಿಣ ಭಾರತ ಚಲನಚಿತ್ರ ವಾಣಿಕ್ಯ ಮಂಡಳಿ ದಶರಥ ರಾಜ್ ಅವರ ಸಾವಿಗೆ ಕಂಬನಿ ಮಿಡಿದಿದೆ.
ಖ್ಯಾತ ಹಾಗೂ ಹಿರಿಯ ನಟಿ ಕವಿತಾ ತಮ್ಮ 11ನೇ ವಯಸ್ಸಿನಲ್ಲೇ ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದಾರೆ. 1976ರಲ್ಲಿ ಕೆ.ವಿಶ್ವನಾಥ್ ನಿರ್ದೇಶನದ ‘ಸಿರಿ ಸಿಸಿ ಮುವ್ವಾ‘ ಚಿತ್ರದಲ್ಲಿ ಅಭಿನಯಿಸಿದ್ದಾರೆ. ತೆಲುಗು, ತಮಿಳು, ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಸುಮಾರು 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕವಿತಾ ನಟಿಸಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ ಕವಿತಾ ಅವರ ಪರಿಚಯ ಇಲ್ಲ ಎನ್ನುವವರೇ ಇಲ್ಲ.
ಇದನ್ನೂ ಓದಿ:BWSSB: ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ಮತ್ತು ನಾಳೆ ಕಾವೇರಿ ನೀರು ಬರಲ್ಲ
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ