ಕರಾವಳಿಯ ಕಾಂತಾರ (Kantara) ಸಿನಿಮಾ (Cinema) ದೊಡ್ಡಮಟ್ಟದಲ್ಲಿ ಸಂಚಲನ ಮೂಡಿಸಿರುವುದು ಎಲ್ಲರಿಗೂ ಗೊತ್ತು. ಕರ್ನಾಟಕದಲ್ಲಿ ಮಾತ್ರವಲ್ಲ ದೇಶ-ವಿದೇಶದಲ್ಲಿ ಸಿನಿಮಾ ಸಖತ್ ಹಿಟ್ ಆಗಿ ಹೊರಹೊಮ್ಮಿದೆ. ಈಗ ಮತ್ತೊಂದು ಕರಾವಳಿ (Coastal Karnataka) ಕುರಿತ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಹೌದು. ಕರಾವಳಿಯಲ್ಲಿ ನಡೆದ ನಿಜ ಘಟನೆಗಳನ್ನು (Real Incident) ಆಧರಿಸಿ ಈ ಸಿನಿಮಾ ಮಾಡಲಾಗಿದೆ. ಈಗ ಸಿನಿಮಾದ ರಿಲೀಸ್ ಡೇಟ್ ಕೂಡಾ ಅನೌನ್ಸ್ ಆಗಿದೆ. ಖ್ಯಾತ ನಿರ್ದೇಶಕ ಮಂಸೋರೆ (Manso Re) ಅವರ ಬಹುನಿರೀಕ್ಷಿತ ಸಿನಿಮಾ ‘19.20.21’ ರಿಲೀಸ್ ಡೇಟ್ ಫೈನಲ್ ಆಗಿದೆ. ಟೀಸರ್ (Teaser) ಮೂಲಕ ಸಿನಿ ಪ್ರೇಕ್ಷಕರಲ್ಲಿ ನಿರೀಕ್ಷೆ ಮೂಡಿಸಿರುವ ಈ ಚಿತ್ರ ಮಾರ್ಚ್ 3ರಂದು ಬಿಡುಗಡೆಯಾಗುತ್ತಿದೆ.
ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿತ್ತು. ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಹಾಗೂ ನಾದಬ್ರಹ್ಮ ಹಂಸಲೇಖ ಟ್ರೈಲರ್ ಬಿಡುಗಡೆ ಮಾಡಿದ್ದಾರೆ.
ಕರಾವಳಿಯಲ್ಲಿ ನಡೆದ ನೈಜ್ಯ ಘಟನೆಯೇ ಸಿನಿಮಾಗೆ ಸ್ಫೂರ್ತಿ
ಸಿನಿಮಾ ಕುರಿತು ನಿರ್ದೇಶಕ ಮಂಸೋರೆ ಮಾತನಾಡಿದ್ದು ಮೂವಿ ಬಗ್ಗೆ ಕೆಲವೊಂದು ವಿಚಾರಗಳನ್ನು ರಿವೀಲ್ ಮಾಡಿದ್ದಾರೆ. ಇದು ನೈಜ ಘಟನೆ ಆಧರಿಸಿದ ಸಿನಿಮಾ. ಕರಾವಳಿಯಲ್ಲಿ 20 ವರ್ಷ ಸಮುದಾಯವೊಂದು ಅನುಭವಿಸಿದ ನೋವು, ಹೋರಾಟ ಈ ಸಿನಿಮಾ ಮಾಡಲು ಸ್ಪೂರ್ತಿ ನೀಡಿದೆ ಎಂದಿದ್ದಾರೆ.
ಸಿನಿಮಾಗಾಗಿ 9 ವರ್ಷದಿಂದ ಅಧ್ಯಯನ
ಈ ಸಿನಿಮಾ ಮಾಡಲು ಒಂಭತ್ತು ವರ್ಷದಿಂದ ಅಧ್ಯಯನ ಮಾಡಿ ಮಾಹಿತಿ ಸಂಗ್ರಹಿಸಿದ್ದೇನೆ. 2021ರಲ್ಲಿ ಈ ಘಟನೆಗೆ ಸಂಬಂಧಿಸಿದ ಮಹತ್ವದ ತೀರ್ಪು ಬಂತು. ಅಮೇಲೆಯೇ ಸಿನಿಮಾ ಮಾಡಲು ನಿರ್ಧಾರ ಮಾಡಿದೆವು. ನಾನು, ವೀರೇಂದ್ರ ಮಲ್ಲಣ್ಣ ಮತ್ತು ಸಂತೋಷ್ ಮೂರು ಜನ ಈ ಘಟನೆಗೆ ಸಂಬಂಧಿಸಿದ ಮಾಹಿತ ಕಲೆ ಹಾಕಿ ಸ್ಕ್ರಿಪ್ಟ್ ಮಾಡಿದ್ದೇವೆ ಎಂದಿದ್ದಾರೆ.
ಸಮುದಾಯದ ಒಬ್ಬ ಹುಡುಗ ಹೋರಾಟ ಮಾಡಿದ ಕಥೆ ಈ ಸಿನಿಮಾದಲ್ಲಿದೆ. ದೇವರಾಜ್ ನಿರ್ಮಾಪಕರಾಗಿದ್ದು ಸತ್ಯ ಹೆಗ್ಡೆ ಸಹ ನಿರ್ಮಾಪಕರಾಗಿದ್ದಾರೆ. ಮಾರ್ಚ್ 3ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: Kichcha Sudeep: ಕಿಚ್ಚನಿಗೂ ಇತ್ತು ಮೋದಿ ಭೇಟಿಗೆ ಆಹ್ವಾನ! ಸುದೀಪ್ ಯಾಕೆ ಹೋಗಿಲ್ಲ?
ಹಂಸಲೇಖ ಅವರೂ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಸಂವಿಧಾನದ ಹಿನ್ನೆಲೆ ಇಟ್ಟುಕೊಂಡು ಟೈಟಲ್ ಇಟ್ಟಿರೋದು ಭಾರತೀಯ ಚಿತ್ರರಂಗದಲ್ಲಿ ಇದೆ ಮೊದಲು. ಇತ್ತೀಚೆಗೆ ಸಂವಿಧಾನವನ್ನು ರಕ್ಷಿಸಲು ಎಲ್ಲರೂ ಮುಂದೆ ನಿಂತಿದ್ದಾರೆ. ಇದೇ ರೀತಿಯ ಇನ್ನಷ್ಟು ಉತ್ತಮ ಸಿನಿಮಾಗಳನ್ನು ಮಂಸೋರೆ ಮಾಡಲಿ ಎಂದು ನಿರ್ದೇಶಕರಿಗೆ ಹಾಗೂ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಚಿತ್ರದಲ್ಲಿ ಯಾರ್ಯಾರಿದ್ದಾರೆ?
ಚಿತ್ರದಲ್ಲಿ ರಂಗಭೂಮಿ ಕಲಾವಿದ ಶೃಂಗ ಬಿ. ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಬಾಲಾಜಿ ಮನೋಹರ್, ಸಂಪತ್, ಎಂ.ಡಿ ಪಲ್ಲವಿ, ವಿಶ್ವಕರ್ಣ, ಮಹದೇವ್ ಹಡಪದ್, ಉಗ್ರಂ ಸಂದೀಪ್ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶಿವು ಬಿ. ಕೆ. ಕುಮಾರ್ ಛಾಯಾಗ್ರಹಣ ಮಾಡಿದ್ದು, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ ಒದಗಿಸಿದ್ದಾರೆ.
ಬಿಂದು ಮಾಲಿನಿ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ ಮತ್ತು ಅವಿನಾಶ್ ಜಿ ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕಥೆ, ಕಿರಣ್ ಕಾವೇರಪ್ಪ ಸಾಹಿತ್ಯ ಚಿತ್ರಕ್ಕಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ