ಬೆಂಗಳೂರು: ಸರ್ಜಾ ಕುಟುಂಬಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ಕೆಲ ತಿಂಗಳ ಹಿಂದಷ್ಟೇ ಗಂಡ ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡಿದ್ದ ನಟಿ ಮೇಘನಾ ರಾಜ್ ಈಗ ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಸರ್ಜಾ ಕುಟುಂಬಕ್ಕೆ ಜೂನಿಯರ್ ಸರ್ಜಾ ಅವರ ಆಗಮನವಾಗಿದೆ. ವೈದ್ಯರು ಡೇಟ್ ಕೊಟ್ಟ ಹಿನ್ನೆಲೆಯಲ್ಲಿ ಮೇಘನಾ ರಾಜ್ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಗ್ಗೆ 11:07ಕ್ಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಇತ್ತೀಚೆಗಷ್ಟೇ ಚಿರಂಜೀವಿ ಸರ್ಜಾ ಜನ್ಮದಿನ ಆಚರಣೆ ಮಾಡಿತ್ತು ಸರ್ಜಾ ಕುಟುಂಬ. ಅದೇ ದಿನವೇ ಮೇಘನಾಗೆ ಹೆರಿಗೆ ಆಗಲಿದೆ ಎಂದು ಹೇಳಲಾಗಿತ್ತು. ಆದರೆ ಕೆಲ ದಿನ ಬಿಟ್ಟು ಜೂನಿಯರ್ ಚಿರು ಆಗಮಿಸಿದ್ದಾನೆ. ವಿಶೇಷ ಎಂದರೆ, ಇಂದು ಚಿರು ಸರ್ಜಾ- ಮೇಘನಾ ನಿಶ್ಚಿತಾರ್ಥದ ದಿನ. ಅದೇ ದಿನವೇ ಮೇಘನಾಗೆ ಮಗುವಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ