ಇನ್ಸ್ಟಾಗ್ರಾಂ ಖಾತೆಯಿಂದ ಹೊರ ಬಂದ ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್; ಅಷ್ಟಕ್ಕೂ ಕಾರಣವೇನು?
Priya Prakash Varrier: ಪ್ರಿಯಾ ವಾರಿಯರ್ ಇನ್ಸ್ಟಾಗ್ರಾಂ ಖಾತೆಯಲ್ಲಿ ಅನೇಕ ಫಾಲೋವರ್ಸ್ಗಳನ್ನು ಹೊಂದಿದ್ದರು. ಮಾತ್ರವಲ್ಲದೆ ಒಂದೇ ದಿನದಲ್ಲಿ ಆರು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ಗಳನ್ನು ಪಡೆದಿದ್ದರು. ಹೀಗೆ ಒಂದು ದಿನದಲ್ಲಿ ಇಷ್ಟೊಂದು ಫಾಲೋವರ್ಸ್ಗಳನ್ನು ಹೊಂದಿದ್ದ ಮೂರನೇ ಸೆಲೆಬ್ರಿಟಿ ಎಂಬುದಾಗಿ ಗುರುತಿಸಿಕೊಂಡಿದ್ದರು ಪ್ರಿಯಾ ವಾರಿಯರ್.
ಕಣ್ಸನ್ನೆ ಮೂಲಕ ಸಾಕಷ್ಟು ಯುವಕರ ನಿದ್ದೆ ಗೆಡಿಸಿದ್ದ ಮಲಯಾಳಂನ ಖ್ಯಾತ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ತಮ್ಮ ಇನ್ಸ್ಟಾಗ್ರಾಂ ಖಾತೆಯನ್ನು ಡಿ-ಆಕ್ಟಿವೇಟ್ ಮಾಡಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಸಾಕಷ್ಟು ಫಾಲೋವರ್ಸ್ ಹೊಂದಿದ್ದ ಅವರು ಏಕಾಏಕಿ ಈ ನಿರ್ಣಯವನ್ನು ತೆಗೆದುಕೊಂಡಿದಕ್ಕೆ ಅಭಿಮಾನಿಗಳು ಬೇಸರ ಹೊರಹಾಕಿದ್ದಾರೆ. ಪ್ರಿಯಾ ವಾರಿಯರ್ ‘ಒರು ಆಧಾರ್ ಲವ್‘ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆನಂತರ ಸಾಕಷ್ಟು ಸಿನಿಮಾಗಳ ಆಫರ್ಗಳು ಕೂಡ ಬಂದವು, ಹಲವಾರು ಸಿನಿಮಾಗಳಲ್ಲಿ ಪ್ರಿಯಾ ವಾರಿಯರ್ ನಟಿಸಿದ್ದಾರೆ. ಕನ್ನಡದ ಎರಡು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಹೀಗಿರುವಾಗ ಪ್ರಿಯಾ ವಾರಿಯರ್ ಇನ್ಸ್ಟಾಗ್ರಾಂ ಖಾತೆಯಲ್ಲಿ ಅನೇಕ ಫಾಲೋವರ್ಸ್ಗಳನ್ನು ಹೊಂದಿದ್ದರು. ಮಾತ್ರವಲ್ಲದೆ ಒಂದೇ ದಿನದಲ್ಲಿ ಆರು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ಗಳನ್ನು ಪಡೆದಿದ್ದರು. ಹೀಗೆ ಒಂದು ದಿನದಲ್ಲಿ ಇಷ್ಟೊಂದು ಫಾಲೋವರ್ಸ್ಗಳನ್ನು ಹೊಂದಿದ್ದ ಮೂರನೇ ಸೆಲೆಬ್ರಿಟಿ ಎಂಬುದಾಗಿ ಗುರುತಿಸಿಕೊಂಡಿದ್ದರು ಪ್ರಿಯಾ ವಾರಿಯರ್.
ಇನ್ಸ್ಟಾಗ್ರಾಂ ಖಾತೆಯನ್ನು ಡಿಲೀಟ್ ಮಾಡಲು ಕಾರಣ?
7 ಲಕ್ಷಕ್ಕೂ ಅಧಿಕ ಫಾಲೋವರ್ಸ್ಗಳನ್ನು ಹೊಂದಿದ್ದ ಪ್ರಿಯಾ ವಾರಿಯರ್ ಶನಿವಾರದಂದು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಡಿಲೀಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಟ್ರೋಲ್ ಆಗುತ್ತಿದ್ದ ಕಾರಣಕ್ಕಾಗಿ ಪ್ರಿಯಾ ವಾರಿಯರ್ ಈ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನಲಾಗಿದೆ.