Vikrant Rona: ರಾ, ರಾ ರಕ್ಕಮ್ಮ ಎಂದ ಕಿಚ್ಚ - ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ಲಕ್ಷ ಲಕ್ಷ ವೀಕ್ಷಣೆ

Lyrical Song: ಒಂದೊಂದು ಭಾಷೆಯಲ್ಲಿ ಒಂದೊಂದು ದಿನ ಲಿರಿಕಲ್ ಹಾಡು ಬಿಡುಗಡೆಯಾಗುತ್ತಿದ್ದು, ಇವತ್ತು ಕನ್ನಡದ ಹಾಡು ಬಿಡುಗಡೆಯಾಗಿದೆ. ರಾ ರಾ ರುಕ್ಕಮ್ಮ ಹೆಸರಿನ ಈ ಸಾಂಗ್ ಕೇಳಿ ಅಭಿಮಾನಿಗಳು ಫುಲ್ ಖುಷಿಯಾಗಿದ್ದು, ಕನ್ನಡದ ಮಟ್ಟಿಗೆ ಮೈಲ್ ಸ್ಟೋನ್ ಆಗಲಿದೆ ಎಂದು ಹೇಳಿದ್ದಾರೆ.

ವಿಕ್ರಂತ್ ರೋಣ

ವಿಕ್ರಂತ್ ರೋಣ

  • Share this:
ವಿಕ್ರಾಂತ್ ರೋಣ (Vikrant Rona) ಇಡೀ ಕನ್ನಡ ಚಿತ್ರರಂಗ ಈ ಸಿನಿಮಾ ನೋಡಲು ತುದಿಗಾಲಿನಲ್ಲಿ ನಿಂತಿದೆ. ಅದರಲ್ಲೂ ಕಿಚ್ಚ (Kiccha) ನ ಅಭಿಮಾನಿಗಳು (Fans) ಮೊದಲು ಸಿನಿಮಾ ರಿಲೀಸ್ (Release) ಆಗಲಿ ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ. ರಂಗಿತರಂಗ ಮೂಲಕ ಕಮಾಲ್ ಮಾಡಿದ್ದ ಅನೂಪ್ ಭಂಡಾರಿ (Anup Bhandari) ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಅದರ ಜೊತೆಗ ಈ ಸಿನಿಮಾ 3ಡಿ(3D)ಯಲ್ಲಿ ತೆರೆಕಾಣುತ್ತಿರುವುದು ಮತ್ತೊಂದು ವಿಶೇಷ. ಪೋಸ್ಟರ್ (Poster), ಟೀಸರ್(Teaser)ಗಳಿಂದಲೇ ಸಾಕಷ್ಟು ಸದ್ದು ಮಾಡಿರುವ ಈ ಚಿತ್ರದ ಮೊದಲ ಲಿರಿಕಲ್ ಹಾಡು ಬಿಡುಗಡೆಯಾಗಿದ್ದು, ಈಗಾಗಲೇ ಲಕ್ಷ ಲಕ್ಷ ವೀಕ್ಷಣೆ ಪಡೆದಿದೆ.

ಒಂದೊಂದು ಭಾಷೆಯಲ್ಲಿ ಒಂದೊಂದು ದಿನ ಲಿರಿಕಲ್ ಹಾಡು ಬಿಡುಗಡೆಯಾಗುತ್ತಿದ್ದು, ಇವತ್ತು ಕನ್ನಡದ ಹಾಡು ಬಿಡುಗಡೆಯಾಗಿದೆ. ರಾ ರಾ ರುಕ್ಕಮ್ಮ ಹೆಸರಿನ ಈ ಸಾಂಗ್ ಕೇಳಿ ಅಭಿಮಾನಿಗಳು ಫುಲ್ ಖುಷಿಯಾಗಿದ್ದು, ಕನ್ನಡದ ಮಟ್ಟಿಗೆ ಮೈಲ್ ಸ್ಟೋನ್ ಆಗಲಿದೆ ಎಂದು ಹೇಳಿದ್ದಾರೆ.


ಇನ್ನು ಹಾಡು ಬಿಡುಗಡೆಯಾಗುವ ಕುರಿತು ಕಿಚ್ಚ ಸುದೀಪ್ ತಮ್ಮ ಸಾಮಾಜಿಕ ಜಾಲಾತಾಣದ ಖಾತೆಯಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳ ಕಾತರಕ್ಕೆ ತೆರೆಬಿದ್ದಿದೆ. ಇನ್ನು ಹಿಂದಿಯಲ್ಲಿ ಮೇ 24ಕ್ಕೆ ಮಧ್ಯಾಹ್ನ 01.05 ಕ್ಕೆ ಬಿಡುಗಡೆಯಾಗುತ್ತಿದ್ದು, ತೆಲುಗಿನಲ್ಲಿ ಮೇ 24 ರಂದು ಮಧ್ಯಾಹ್ನ 01.05ಕ್ಕೆ ಈ ಹಾಡು ಬಿಡುಗಡೆಯಾಗಲಿದೆ ಎಂದು ಕಿಚ್ಚ ಮಾಹಿತಿ ನೀಡಿದ್ದಾರೆ.

ಇನ್ನು ತಮಿಳಿನಲ್ಲಿ ಮೇ 26ರಂದು ಮಧ್ಯಾಹ್ನ 01.05ಕ್ಕೆ ಹಾಗೂ ಮಲಯಾಳಂನಲ್ಲಿ ಮೇ 27 ರಂದು 01.05ಕ್ಕೆ ಈ ಲಿರಿಕಲ್ ಹಾಡು ರಿಲೀಸ್ ಆಗುತ್ತಿದೆ ಎಂದು ಸುದೀಪ್ ತಿಳಿಸಿದ್ದಾರೆ. ಇನ್ನು ಅಭಿಮಾನಿಗಳು ಈ ಎಲ್ಲಾ ಭಾಷೆಯ ಹಾಡನ್ನು ಲಹರಿ ಮ್ಯೂಸಿಕ್​ನಲ್ಲಿ ಕೇಳಬಹುದಾಗಿದೆ.

ಇದನ್ನೂ ಓದಿ: 3 ದಿನಕ್ಕೆ ಕಾರ್ತಿಕ್ ಆರ್ಯನ್​ ಚಿತ್ರದ ಭರ್ಜರಿ ಗಳಿಕೆ - ಮುಳುಗುತ್ತಿದ್ದ ಬಾಲಿವುಡ್​ ಆಸರೆಯಾಯ್ತು ಚಿತ್ರ

ಕಳೆದ ವರ್ಷ ಚಿತ್ರದ ಫಸ್ಟ್ ಲುಕ್ ಅನ್ನು ದೇಶಾದ್ಯಂತ ಥಿಯೇಟರ್‌ಗಳಲ್ಲಿ 3D ನಲ್ಲಿ ಬಿಡುಗಡೆ ಮಾಡಿ, ಪ್ರೇಕ್ಷಕರ ನಿರೀಕ್ಷೆ ಹೆಚ್ಚು ಮಾಡಿತ್ತು. ಕನ್ನಡ, ಹಿಂದಿ, ತಮಿಳು, ಮಲಯಾಳಂ, ತೆಲುಗಿನಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ. ಅಲ್ಲದೇ ಅರೇಬಿಕ್, ಜರ್ಮನ್, ರಷ್ಯನ್, ಮ್ಯಾಂಡರಿನ್ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದ್ದು, ಕಿಚ್ಚನ ಸಿನಿ ಜರ್ನಿಯಲ್ಲಿ ದಾಖಲೆಯ ಚಿತ್ರವಾಗುವುದರಲ್ಲಿ ಅನುಮಾನವಿಲ್ಲ.

ಕಿಚ್ಚನ ಸಿನಿಮಾ ಇದೇ ಮೊದಲ ಬಾರಿಗೆ ಇಡೀ ವಿಶ್ವದಾದ್ಯಂತ ಗ್ರ್ಯಾಂಡ್ ಆಗಿ ರಿಲೀಸ್ ಆಗುತ್ತಿದೆ. ಅಲ್ಲದೆ, 3ಡಿಯಲ್ಲಿ ಸಿನಿಮಾ ರಿಲೀಸ್ ಆಗುತ್ತಿರುವುದರಿಂದ ಎಲ್ಲೆಡೆ ಕುತೂಹಲ ಹೆಚ್ಚಾಗಿದೆ. ಈಗಾಗಲೇ ಓವರ್‌ಸೀನ್ ಸಿನಿಮಾ ರೈಟ್ಸ್ ಅನ್ನು 'ಒನ್ ಟ್ವೆಂಟಿ 8 ಮೀಡಿಯಾ' ಭಾರಿ ಮೊತ್ತಕ್ಕೆ ಪಡೆದುಕೊಂಡಿದೆ. ಇವರೇ ವಿಶ್ವದಾದ್ಯಂತ 'ವಿಕ್ರಾಂತ್ ರೋಣ' ಸಿನಿಮಾವನ್ನು ರಿಲೀಸ್ ಮಾಡಲಿದ್ದಾರೆ. 'ಒನ್ ಟ್ವೆಂಟಿ 8 ಮೀಡಿಯಾ' ಸುಮಾರು 1.3 ಮಿಲಿಯನ್‌ಗೆ ಓವರ್‌ಸೀಸ್ ಹಕ್ಕುಗಳನ್ನು ಪಡೆದುಕೊಂಡಿದೆ. ಅಂದರೆ, ಭಾರತದ 10 ಕೋಟಿ ರೂಪಾಯಿಗೆ ಸೇಲ್ ಆಗಿದೆ ಎನ್ನಲಾಗಿದೆ.

ವಿಕ್ರಾಂತ್ ರೋಣ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ ಮತ್ತು ಸಿನಿಮಾ ಯಾವಾಗ ಥಿಯೇಟರ್‌ಗಳಿಗೆ ಬರಲಿದೆ ಎಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವಾಗ, ಎಲ್ಲರಿಗೂ ಗುಡ್ ನ್ಯೂಸ್ ಸಿಕ್ಕಿದೆ. ಬಹು ನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರ ಜು.28ರಂದು ರಿಲೀಸ್ ಆಗಲಿದೆ ಎಂದು ಚಿತ್ರತಂಡ ರಿಲೀಸ್ ಡೇಟ್ ಬಹಿರಂಗ ಮಾಡಿದೆ.

ಇದನ್ನೂ ಓದಿ: ರಾಧಿಕಾ-ಯಶ್ ಮಗಳ ಹೊಸಾ ಫೋಟೋ ನೋಡಿ, ಎಷ್ಟೊಂದು ಮುದ್ದು!

ಕಿಚ್ಚನಿಗೆ ಸಲ್ಲು ಸಾಥ್

ಕೆಜಿಎಫ್ 2 ನಂತರ ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ ಬಾಲಿವುಡ್ ಅಂಗಳದಲ್ಲಿ ಮೆರೆಯಲು ಸಿದ್ದವಾಗಿದ್ದು, ಕಿಚ್ಚನಿಗೆ ಬಾಲಿವುಡ್ನಲ್ಲಿ ಸಲ್ಮಾನ್ ಖಾನ್ ಸಹಾಯ ದೊರೆದಿದೆ. ವಿಕ್ರಾಂತ್ ರೋಣ ಸಿನಿಮಾವನ್ನು ಬಾಲಿವುಡ್ನಲ್ಲಿ ರಿಲೀಸ್ ಮಾಡಲು ಸಲ್ಮಾನ್ ಖಾನ್ ನೆರವು ಸಿಕ್ಕಿದ್ದು ಕಿಚ್ಚನಿಗೆ ದೊಡ್ಡ ಕೈ ಸಹಾಯಕ್ಕೆ ಸಿಕ್ಕಂತಾಗಿದೆ. ಬಾಲಿವುಡ್ ಭಾರತದ ಅತಿ ದೊಡ್ಡ ಸಿನೆಮಾ ಮಾರುಕಟ್ಟೆ ಇಲ್ಲಿ ಬೇರೆ ಭಾಷೆಯ ಚಿತ್ರ ಡಬ್ ಆಗಿ ಬಿಡುಗಡೆಯಾಗುವುದು ಅಷ್ಟು ಸುಲಭದ ಮಾತಲ್ಲ. ಆದರೆ ವಿಕ್ರಾಂತ್ ರೋಣ ಚಿತ್ರತಂಡಕ್ಕೆ ಭಾಯ್ಜಾನ್ ಸಾಥ್ ನೀಡಿರುವುದು ನಿಜಕ್ಕೂ ಮೈಲಿಗಲ್ಲು ಎನ್ನಬಹುದು.
Published by:Sandhya M
First published: