ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಾಪ್ಟರ್-1 ಸಿನಿಮಾ ಬಿಡುಗಡೆಗೊಂಡು ದೊಡ್ಡ ಮಟ್ಟಿನ ಸದ್ದು ಮಾಡಿತ್ತು. ಈ ಸಿನಿಮಾದಲ್ಲಿ ತಾಯಿ ಮಗನ ಸೆಂಟಿಮೆಂಟ್ ಪ್ರೇಕ್ಷರನ್ನು ಭಾವುಕಗೊಳಿಸಿತ್ತು. ಅದರಲ್ಲೂ ‘ಗರ್ಭದಿ ನನ್ನಿರಿಸಿ‘ ಎಂಬ ಹಾಡು ಮನ ಮುಟ್ಟುವಂತಿತ್ತು.
ಇಂದು ವಿಶ್ವ ಅಮ್ಮಂದಿರ ದಿನ. ಈ ವಿಶೇಷ ದಿನದಂದು ಕೆಜಿಎಫ್ ಚಿತ್ರವನ್ನು ನಿರ್ಮಿಸಿದ ಹೊಂಬಾಳೆ ಫಿಲಂಸ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ‘ಗರ್ಭದಿ ನನ್ನಿರಿಸಿ‘ ಹಾಡಿನ ಲಿಂಕ್ ಅನ್ನು ಪೋಸ್ಟ್ ಮಾಡುವ ಮೂಲಕ ತಾಯಂದಿರಿಗೆ ಅರ್ಪಣೆ ಮಾಡಿದೆ.ಈ ಪ್ರಪಂಚದಲ್ಲಿ ತಾಯಿಗಿಂತ ದೊಡ್ಡ ಯೋಧ ಯಾರೂ ಇಲ್ಲ ಎಂದಿದೆ.
ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಾಪ್ಟರ್-2 ಸಿನಿಮಾದ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದೆ. ಅಕ್ಟೋಬರ್ 23 ರಂದು ಸಿನಿಮಾ ತೆರೆಯ ಮೇಲೆ ಬರುವುದಾಗಿ ಚಿತ್ರತಂಡ ಹೇಳಿದೆ. ಅಭಿಮಾನಿಗಳು ಕೂಡ ಕೆಜಿಎಫ್ ಚಾಪ್ಟರ್ -2 ಸಿನಿಮಾವನ್ನು ನೋಡಲು ಕಾತುರದಿಂದ ಕಾಯುತ್ತಿದ್ದಾರೆ.
ಇನ್ನು ಈ ಸಿನಿಮಾದಲ್ಲಿ ಬಾಲಿವುಡ್ ನಟ ಸಂಜಯ್ ದತ್ ಮತ್ತು ರವೀನಾ ಟಂಡನ್ ಕೂಡ ನಟಿಸಿದ್ದಾರೆ. ಯಶ್ಗೆ ನಾಯಕಿಯಾಗಿ ಶ್ರೀನಿಧಿ ಶೆಟ್ಟಿ ಅಭಿನಯಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ