ಕೊನೆಗೂ ಹೊರ ಬಿತ್ತು ಸುಶಾಂತ್ ಸಿಂಗ್ ಮರಣೋತ್ತರ ಪರೀಕ್ಷೆ ವರದಿ; ಅದರಲ್ಲಿ ಉಲ್ಲೇಖ ಮಾಡಿರೋದೇನು?

ಸುಶಾಂತ್​ಗೆ ಕೊರೋನಾ ವೈರಸ್ ಟೆಸ್ಟ್ ಕೂಡ ಮಾಡಲಾಗಿದ್ದು, ವರದಿ ನೆಗೆಟಿವ್ ಬಂದಿದೆ. ಈ ಮೂಲಕ ಅವರಿಗೆ ಕೊರೋನಾ ಸೋಂಕು ಅಂಟಿರಲಿಲ್ಲ ಎಂಬುದು ದೃಢಪಟ್ಟಿದೆ.

news18-kannada
Updated:June 15, 2020, 11:12 AM IST
ಕೊನೆಗೂ ಹೊರ ಬಿತ್ತು ಸುಶಾಂತ್ ಸಿಂಗ್ ಮರಣೋತ್ತರ ಪರೀಕ್ಷೆ ವರದಿ; ಅದರಲ್ಲಿ ಉಲ್ಲೇಖ ಮಾಡಿರೋದೇನು?
ಸುಶಾಂತ್​ ಸಿಂಗ್
  • Share this:
ಬಾಲಿವುಡ್​​ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈನ ತಮ್ಮ ಮನೆಯಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಹಲವಾರು ಬಾಲಿವುಡ್ ಸಿನಿಮಾದಲ್ಲಿ ನಟಿಸಿದ್ದ ಸುಶಾಂತ್ ಸಿಂಗ್ ಸಾವು ಅಭಿಮಾನಿಗಳಿಗೆ ಆಘಾತ ಉಂಟುಮಾಡಿತ್ತು. ಅಲ್ಲದೆ ಈ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಕೂಡ ಕಾಡಿದ್ದವು. ಆದರೆ, ಇವೆಲ್ಲದಕ್ಕೂ ಅವರ ಮರಣೋತ್ತರ ಪರೀಕ್ಷೆ ವರದಿ ಉತ್ತರ ನೀಡಿದೆ.

34 ವರ್ಷದ ಸುಶಾಂತ್ ಸಿಂಗ್ ಮುಂಬೈನಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ನಿನ್ನೆ ಬೆಳಗ್ಗೆ ಅವರ ಮನೆಯ ಕೆಲಸದವರು ಬಂದು ನೋಡಿದಾಗ ಈ ವಿಷಯ ಗೊತ್ತಾಗಿತ್ತು. ಬೆಡ್ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸುಶಾಂತ್ ಸಿಂಗ್ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. ಕಳೆದ 6 ತಿಂಗಳಿನಿಂದ ಸುಶಾಂತ್ ಸಿಂಗ್ ಖಿನ್ನತೆಯಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿತ್ತು. ಇನ್ನು ಇದು ಯಾರಾದರೂ ಮಾಡಿದ ಹತ್ಯೆ ಇರಬಹುದೇ ಎನ್ನುವ ಅನುಮಾನ ಕೂಡ ಕಾಡಿತ್ತು.

ಈಗ ಮರಣೋತ್ತರ ಪರೀಕ್ಷೆ ವರದಿ ಬಂದಿದೆ. ನೇಣು ಬಿಗಿದುಕೊಂಡ ಕಾರಣಕ್ಕೇ ಸುಶಾಂತ್ ಮರಣ ಹೊಂದಿದ್ದಾರೆ. ಅವರ ದೇಹದ ಮೇಲೆ ಯಾವುದೇ ಗಾಯದ ಕಲೆಗಳು ಇರಲಿಲ್ಲ. ಹೀಗಾಗಿ ಇದು ಆತ್ಮಹತ್ಯೆ ಎಂದು ಪೋಸ್ಟ್ ಮಾರ್ಟಮ್ ರಿಪೋರ್ಟ್​ನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ತೆರೆಯ ಮೇಲಿನ ಧೋನಿ ಇನ್ನಿಲ್ಲ; ಶತಕ ಬಾರಿಸುವ ಮೊದಲೇ ಪೆವಿಲಿಯನ್​ ಸೇರಿದ ಸುಶಾಂತ್​ ಸಿಂಗ್​!


ಇನ್ನು, ಸುಶಾಂತ್​ಗೆ ಕೊರೋನಾ ವೈರಸ್ ಟೆಸ್ಟ್ ಕೂಡ ಮಾಡಲಾಗಿದ್ದು, ವರದಿ ನೆಗೆಟಿವ್ ಬಂದಿದೆ. ಈ ಮೂಲಕ ಅವರಿಗೆ ಕೊರೋನಾ ಸೋಂಕು ಅಂಟಿರಲಿಲ್ಲ ಎಂಬುದು ದೃಢಪಟ್ಟಿದೆ. ಇಂದು ಸುಶಾಂತ್ ಸಿಂಗ್ ಅಂತ್ಯಕ್ರಿಯೆ ನಡೆಯಲಿದೆ. ಸುಶಾಂತ್ ಆಪ್ತರು ಮಾತ್ರ ಇದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

 
First published: June 15, 2020, 11:12 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading