ರಾಜ್ಯದಲ್ಲಿ ಉರಿಗೌಡ, ನಂಜೇಗೌಡ ಬಗೆಗಿನ ಚರ್ಚೆ ಜೋರಾಗಿದೆ. ಇವರ ಜೀವನ ಆಧರಿಸಿ ನಿರ್ಮಾಪಕ ಮುನಿರತ್ನ (Producer Muniratna) ಸಿನಿಮಾ ಮಾಡಲು ಮುಂದಾಗಿದ್ದಾರೆ. ಉರೀಗೌಡ-ನಂಜೇಗೌಡ ಹೆಸರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೊಂದಣಿ ಮಾಡಿಸಿದ್ದಾರೆ. ಆದ್ರೆ ಈ ಟೈಟಲ್ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ಕೊನೆಗೂ ಟೈಟಲ್ ಫಿಕ್ಸ್ (Title Fix) ಆಗಿದ್ದು, ಮೇ 18ರಂದು ಮೂಹರ್ತ ನಡೆಸುವ ಮೂಲಕ ಸಿನಿಮಾ ಸೆಟ್ ಏರಲಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ (Social Media) ನಿರ್ಮಾಪಕ ಮುನಿರತ್ನ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಉರಿಗೌಡ-ನಂಜೇಗೌಡ ಸಿನಿಮಾ ಮುಹೂರ್ತ ಫಿಕ್ಸ್
ಸಿನಿಮಾ ಬಗ್ಗೆ ನಿರ್ಮಾಪಕ ಮುನಿರತ್ನ ಟ್ವೀಟ್ ಮಾಡುವ ಮೂಲಕ ಟೈಟಲ್ ಘೋಷಿಸಿದ್ದಾರೆ. ವೃಷಬಾದ್ರಿ ಪ್ರೊಡಕ್ಷನ್ ನಿರ್ಮಾಣದ ಐತಿಹಾಸಿಕ ಸತ್ಯ ಘಟನೆಗಳ ಆಧಾರಿತ 'ಉರೀಗೌಡ ನಂಜೇಗೌಡ' ಚಿತ್ರದ ಮುಹೂರ್ತ ಮೇ 18ರಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. ಡಾ.ಸಿ.ಎನ್.ಅಶ್ವಥ್ ನಾರಾಯಣ್ ಚಿತ್ರಕಥೆ ಇರುವ ಈ ಚಿತ್ರವನ್ನು ಆರ್.ಎಸ್.ಗೌಡ ನಿರ್ದೇಶನ ಮಾಡುತ್ತಿದ್ದಾರೆ.
ವೃಷಬಾದ್ರಿ ಪ್ರೊಡಕ್ಷನ್ ನಿರ್ಮಾಣದ ಐತಿಹಾಸಿಕ ಸತ್ಯ ಘಟನೆಗಳ ಆಧಾರಿತ 'ಉರೀಗೌಡ ನಂಜೇಗೌಡ' ಚಿತ್ರದ ಮುಹೂರ್ತ ಮೇ 18ರಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. ಡಾ.ಸಿ.ಎನ್.ಅಶ್ವಥ್ ನಾರಾಯಣ್ ಚಿತ್ರಕಥೆ ಇರುವ ಈ ಚಿತ್ರವನ್ನು ಆರ್.ಎಸ್.ಗೌಡ ನಿರ್ದೇಶನ ಮಾಡುತ್ತಿದ್ದಾರೆ.#UriGowda #NanjeGowda #Munirathna #VrushabhadriProductions pic.twitter.com/wS2SuW9vdI
— Munirathna (@MunirathnaMLA) March 18, 2023
ಫಿಲ್ಮ್ ಚೇಂಬರ್ ಗೆ ಪತ್ರ ಬರೆದ ಒಕ್ಕಲಿಗರ ಸಂಘ
‘ಉರಿಗೌಡ, ನಂಜೇಗೌಡ ಎನ್ನುವ ಇಬ್ಬರೂ ವ್ಯಕ್ತಿಗಳ ಮೇಲೆ ಯಾವುದೇ ತರಹದ ಮಾಹಿತಿ ಸರ್ಕಾರದ ದಾಖಲೆಗಳಾಗಲಿ, ಇತಿಹಾಸದ ದಾಖಲೆಗಳಾಗಲಿ ಹಾಗೂ ಸ್ಥಳೀಯ ಆಡಳಿತದಲ್ಲಿ ಸಿಗುವ ಕರಡು ಪ್ರತಿಗಳಾಗಲಿ ಸಿಗುವುದಿಲ್ಲ. ಆದ್ದರಿಂದ ಪಟ್ಟಭದ್ರ ಹಿತಾಶಕ್ತಿಗಳು ಒಕ್ಕಲಿಗ ಸಮುದಾಯವನ್ನು ಅಪಮಾನ ಮಾಡಲು ಹಾಗೂ ಮುಸ್ಲಿಂ ಹಾಗೂ ಒಕ್ಕಲಿಗರ ನಡುವೆ ಧರ್ಮ ಸಂಘರ್ಷವನ್ನು ತಂದು, ತಮ್ಮ ರಾಜಕೀಯ ಹಿತಾಶಕ್ತಿಗೆ ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ತಾವುಗಳು ದಯಮಾಡಿ ಇದಕ್ಕೆ ಅವಕಾಶ ನೀಡದೇ, ಸಾಮಾಜಿಕ ಸಾಮರಸ್ಯವನ್ನು ಕಾಪಾಡಲು ಸಹಕರಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ’ ಎಂದು ಪತ್ರದಲ್ಲಿ ಬರೆದಿದ್ದರು.
ಯಾರು ಈ ಉರಿಗೌಡ ನಂಜೇಗೌಡ
ಉರಿಗೌಡ ಹಾಗೂ ದೊಡ್ಡ ನಂಜೇಗೌಡರು ಟಿಪ್ಪು ಸುಲ್ತಾನ್‌ನನ್ನು ಕೊಂದರು ಎಂದು ಬಿಜೆಪಿ ನಾಯಕರಷ್ಟೇ ಸಭೆ ಸಮಾರಂಭಗಳಲ್ಲಿ ಹೇಳಿಕೊಳ್ಳುತ್ತಿದ್ದರು. ಆದರೆ, ಇವರಿಬ್ಬರು ಬದುಕಿದ್ದ ಬಗ್ಗೆ ಯಾವುದೇ ಇತಿಹಾಸದಲ್ಲಿ ದಾಖಲೆಗಳಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಹೀಗಿದ್ದರೂ ಬಿಜೆಪಿ ನಾಯಕರು ಟಿಪ್ಪು ಸುಲ್ತಾನ್‌ನನ್ನು ರಾಜಕೀಯ ದಾಳ ಮಾಡಿಕೊಂಡಿದ್ದಾರೆ. ಗೌಡ ಸಮುದಾಯದ ಮಹಾನಾಯಕರಾದ ಉರಿಗೌಡ ಮತ್ತು ದೊಡ್ಡ ನಂಜೇಗೌಡರೇ ಟಿಪ್ಪುಅನ್ನು ಕೊಂದಿದ್ದಾಗಿ ವಾದಿಸಲಾರಂಭಿಸಿದ್ದಾರೆ.
ಇತಿಹಾಸ ತಜ್ಞರು ಹೇಳಿದ್ದೇನು?
ಆಶ್ವಥ್ ನಾರಾಯಣ್, ಸಿ.ಟಿ.ರವಿ ಬಿಜೆಪಿಗೆ ಅವಮಾನ ಮಾಡಲು ಹೊರಟ್ಟಿದ್ಧಾರೆ. ಇವರು ಸುಳ್ಳನ್ನು ಸತ್ಯ ಮಾಡಲು ಹೊರಟ್ಟಿದ್ದಾರೆ. ಸಚಿವ ಅಶ್ವಥ್ ನಾರಾಯಣ್ ಒಬ್ಬ ಮೂರ್ಖ, ಬೆಂಗಳೂರಿನಲ್ಲಿ ಕೆಂಪೇಗೌಡ ಇದ್ದರು. ಇದೀಗ ಮಂಡ್ಯ ಮೈಸೂರು ಭಾಗದಲ್ಲಿ ಮುಸ್ಲಿಂ ವಿರೋಧ ಮಾಡಿಕೊಂಡು ಟಿಪ್ಪು ಕೊಂದವರು ಉರಿಗೌಡ-ನಂಜೇಗೌಡ ಎಂದು ಬಿಂಬಿಸುತ್ತಿದ್ದಾರೆ . ಈ ಬಗ್ಗೆ ಯಾವುದೇ ದಾಖಲೆಗಳು ಇತಿಹಾಸದಲ್ಲಿ ಇಲ್ಲ. ಇವರಿಬ್ಬರು ಕೇವಲ ಕಾಲ್ಪನಿಕ ಪಾತ್ರಗಳಷ್ಟೇ ಎಂದು ಇತಿಹಾಸ ತಜ್ಞ ಪ್ರೊ. ನಂಜರಾಜೇ ಅರಸ್ ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ