23 ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ಮಾಡ್ತಿದ್ದ, ಚಿತ್ರನಟ ನಂದಮೂರಿ ತಾರಕರತ್ನ (Nandamuri Taraka Ratna) ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ 23 ದಿನಗಳಿಂದ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ (Narayana Hrudayalaya Hospital) ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಸಂಜೆ (ಫೆಬ್ರವರಿ 18) ಇಹಲೋಕ ತ್ಯಜಿಸಿದ್ದಾರೆ. ತಾರಕರತ್ನ ನಿಧನಕ್ಕೆ ಚಿರಂಜೀವಿ ಟ್ವೀಟ್ (Chiranjeevi Tweet) ಮಾಡಿದ್ದಾರೆ. ತುಂಬಾ ಪ್ರತಿಭಾವಂತ ಮತ್ತು ಭರವಸೆಯ ನಟ.. ಇಷ್ಟು ಬೇಗ ನಮ್ಮನ್ನು ಅಗಲಿದ್ದು ಬೇಸರ ತಂದಿದೆ ಎಂದು ಟ್ವೀಟ್ ಮಾಡಿದ್ದಾರೆ.
ನಾಳೆ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಫೆಬ್ರವರಿ 19 ರಂದು ಬೆಳಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಹೈದರಾಬಾದ್‌ಗೆ ಮೃತ ದೇಹ ರವಾನಿಸಲಾಗುತ್ತದೆ. ಭಾನುವಾರ ಅವರ ನಿವಾಸದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸೋಮವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತೆಲುಗು ಫಿಲಂ ಚೇಂಬರ್‌ನಲ್ಲಿ ಅಂತಿಮ ದರ್ಶನಕ್ಕೆ ಮೃತದೇಹವನ್ನು ಇರಿಸಲಾಗುತ್ತದೆ. ಸೋಮವಾರ ಸಂಜೆ 5 ಗಂಟೆಗೆ ಮಹಾಪ್ರಸ್ಥಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.
ಟ್ವೀಟ್ ಮೂಲಕ ಚಿರಂಜೀವಿ ಸಂತಾಪ
ತಾರಕರತ್ನ ನಿಧನಕ್ಕೆ ಚಿರಂಜೀವಿ ಟ್ವೀಟ್ (Chiranjeevi Tweet) ಮಾಡಿದ್ದಾರೆ. ತುಂಬಾ ಪ್ರತಿಭಾವಂತ ಮತ್ತು ಭರವಸೆಯ ನಟ.. ಇಷ್ಟು ಬೇಗ ನಮ್ಮನ್ನು ಅಗಲಿದ್ದು ಬೇಸರ ತಂದಿದೆ ಎಂದು ಟ್ವೀಟ್ ಮಾಡಿದ್ದಾರೆ.
Deeply saddened to learn of the
tragic premature demise of #NandamuriTarakaRatna
Such bright, talented, affectionate young man .. gone too soon! 💔 💔
Heartfelt condolences to all the family members and fans! May his Soul Rest in Peace! శివైక్యం 🙏🙏 pic.twitter.com/noNbOLKzfX
— Chiranjeevi Konidela (@KChiruTweets) February 18, 2023
ಜನವರಿ 27 ರಂದು ನಂದಮೂರಿ ತಾರಕರತ್ನ ಅವರಿಗೆ ಹೃದಯಾಘಾತವಾಗಿತ್ತು. ಚಿತ್ತೂರು ಜಿಲ್ಲೆಯ ರಾಶಿಟಿಡಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರ ‘ಯುವಗಳಂ’ ಪಾದಯಾತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪಾದಯಾತ್ರೆ ವೇಳೆ ತಾರಕರತ್ನ ಅವರು ಸ್ವಲ್ಪ ದೂರ ಕ್ರಮಿಸಿದ ಬಳಿಕ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅಲ್ಲಿಯೇ ಇದ್ದ ಯುವ ಸೈನಿಕರು ಹಾಗೂ ಭದ್ರತಾ ಸಿಬ್ಬಂದಿ ಆಂಬ್ಯುಲೆನ್ಸ್ ನಲ್ಲಿ ಕುಪ್ಪಂನ ಕೆ.ಸಿ.ಆಸ್ಪತ್ರೆಗೆ ಸಾಗಿಸಿದ್ದರು.
ಫಲಿಸಲಿಲ್ಲ 23 ದಿನಗಳ ಹೋರಾಟ
ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಪಟ್ಟಣದ ಪಿಇಎಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಯಿತು. ಅದೇ ದಿನ ಮಧ್ಯರಾತ್ರಿ ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಶಿಫ್ಟ್ ಮಾಡಿದ್ರು. ಕಳೆದ 23 ದಿನಗಳಿಂದ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾರಕರತ್ನ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ:Taraka Ratna: ಬೆಂಗಳೂರಿಗೆ ನಟ ಬಾಲಕೃಷ್ಣ ದಿಢೀರ್ ಭೇಟಿ; ಹದಗೆಟ್ಟಿದ್ಯಾ ತಾರಕ ರತ್ನ ಸ್ಥಿತಿ?
1983ರ ಫೆಬ್ರವರಿ 22ರಂದು ಜನಿಸಿದ್ದ ತೆಲುಗು ನಟ ತಾರಕರತ್ನ, ಒಕಟೋ ನಂಬರ್ ಕುರ್ರಾಡು, ಭದ್ರಾದಿ ರಾಮುಡು, ಯುವರತ್ನ ಸೇರಿದಂತೆ 20 ಕ್ಕು ಹೆಚ್ಚು ಸಿನಿಮಾಗಳಲ್ಲಿ ನಟನೆ ಮಾಡಿ ಸೈ ಎನಿಸಿಕೊಂಡಿದ್ದಾರೆ. ನಂದಮೂರಿ ಮೋಹನ್‌ಕೃಷ್ಣ, ನಂದಮೂರಿ ಶಾಂತಿ ಮೋಹನ್ ದಂಪತಿಯ ಪುತ್ರ, ಹೆಸರಾಂತ ನಟ, ಮಾಜಿ ಸಿಎಂ ಎನ್‌ಟಿಆರ್ ಮೊಮ್ಮಗ ತಾರಕರತ್ನ ಅವರು 2012ರಲ್ಲಿ ಅಲೇಖ್ಯಾ ರೆಡ್ಡಿ ಎನ್ನುವವರನ್ನು ಮದುವೆಯಾಗಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ