ಚಂದನ್ ಶೆಟ್ಟಿ ಕಳೆದ ಕೆಲವು ದಿನಗಳಿಂದ ಒಂದಿಲ್ಲೊಂದು ವಿಷಯಗಳಿಂದ ಸುದ್ದಿಯಲ್ಲಿದ್ದಾರೆ. ಅವರ ಕೋಲು ಮಂಡೆ ವಿಡಿಯೋ ಹಾಡು ರಿಲೀಸ್ ಆಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಇದರ ಬೆನ್ನಲ್ಲೇ ಈ ಹಾಡಿನಲ್ಲಿ ಶಿವಶರಣೆ ಸಂಕಮ್ಮ ಅವರನ್ನು ಅಶ್ಲೀಲವಾಗಿ ಚಿತ್ರೀಕರಿಸಲಾಗಿದೆ ಎಂದು ಮಲೆ ಮಹದೇಶ್ವರನ ಭಕ್ತರು ಚಂದನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಇನ್ನು ಕೋಲುಮಂಡೆ ಹಾಡನ್ನು ಯೂಟ್ಯೂಬ್ನಿಂದ ಡಿಲೀಟ್ ಮಾಡಿ ಕ್ಷಮೆ ಕೇಳುವ ಮೂಲಕ ಚಂದನ್ ಶೆಟ್ಟಿ ವಿವಾದಕ್ಕೆ ತೆರೆ ಎಳೆದರು. ನಂತರ ಅಂದರೆ ನಿನ್ನೆ ಚಂದನ್ ಶೆಟ್ಟಿ ಅವರ ಫೇಸ್ಬುಕ್ ಖಾತೆ ಹ್ಯಾಕ್ ಆಗಿದೆಯಂತೆ. ಯಾರೋ ಚಂದನ್ ಅವರ ಫೇಸ್ಬುಕ್ ಖಾತೆಯಲ್ಲಿ ಲೈವ್ ಮಾಡಿದ್ದಾರೆ ಎಂದೂ ಹೇಳಲಾಗುತ್ತಿದೆ.
![Rapper Chandan Shetty apologized and ended the new controversy regarding his new album Kolu mande song]()
ಚಂದನ್ ಶೆಟ್ಟಿ
ವಿವಾದಗಳು ಒಂದು ಕಡೆಯಾದರೆ, ಮತ್ತೊಂದು ಕಡೆ ಚಂದನ್ ಅವರ ಗೊಂಬೆ ನಿವೇದಿತಾ ತಮ್ಮ ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ನಿವೇದಿತಾ ಹಾಗೂ ಚಂದನ್ ಇಂಗ್ಲಿಷ್ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ.
ಬಹಳ ಸಮಯದ ನಂತರ ಈ ಜೋಡಿ ಡ್ಯಾನ್ಸ್ ಮಾಡಿರುವ ವಿಡಿಯೋ ಹಂಚಿಕೊಂಡಿದ್ದಾರೆ. ಈ ಹಿಂದೆ ನಿವೇದಿತಾ ಹಾಗೂ ಚಂದನ್ ಶೆಟ್ಟಿ ಹಾಡುತ್ತಾ... ಡ್ಯಾನ್ಸ್ ಮಾಡಿರುವ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ