ಡಾಲಿ ಧನಂಜಯ್ ಅಭಿನಯದ ‘ಪಾಪ್ಕಾರ್ನ್ ಮಂಕಿ ಟೈಗರ್’ ಗಾಂಧೀ ನಗರದಲ್ಲಿ ಭಾರೀ ಸದ್ದು ಮಾಡುತ್ತಿದೆ. ದುನಿಯಾ ಸೂರಿ ನಿರ್ದೇಶನದ ಈ ಚಿತ್ರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾ ಹಿಟ್ ಆದ ಬೆನ್ನಲ್ಲೇ ಧನಂಜಯ್ಗೆ ಸಾಲು ಸಾಲು ಚಿತ್ರಗಳು ಬರುತ್ತಿವೆ. ಈಗ ಅವರು ಹೊಸ ಸಿನಿಮಾಗೆ ಸಹಿ ಹಾಕಿದ್ದಾರೆ!
ಅಷ್ಟಕ್ಕೂ ಧನಂಜಯ್ ಹೊಸ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿರುವವರು ಯಾರು ಗೊತ್ತಾ? ಸತ್ಯಪ್ರಕಾಶ್. ಹೌದು, ಸ್ಯಾಂಡಲ್ವುಡ್ನಲ್ಲಿ ‘ರಾಮಾ ರಾಮಾ ರೇ’, ‘ಒಂದಲ್ಲ ಎರಡಲ್ಲ’ ಅಂಥ ಕ್ಲಾಸಿಕ್ ಚಿತ್ರಗಳನ್ನು ನೀಡಿದ ಸತ್ಯಪ್ರಕಾಶ್ ಈಗ ಡಾಲಿ ಮುಂದಿನ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.
ಅಂದಹಾಗೆ,
ಧನಂಜಯ್ ಮೊದಲು ಕಾಣಿಸಿಕೊಂಡಿದ್ದ ‘ಜಯನಗರ 4
th ಬ್ಲಾಕ್’ ಕಿರುಚಿತ್ರವನ್ನು ನಿರ್ದೇಶನ ಮಾಡಿದ್ದು ಇದೇ ಸತ್ಯಪ್ರಕಾಶ್. ಈಗ ಸಿನಿಮಾಗಾಗಿ ಇಬ್ಬರೂ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಧನಂಜಯ್ ಪಾತ್ರಕ್ಕೆ ಎರಡು ಶೇಡ್ಗಳು ಇರಲಿವೆಯಂತೆ. ಸದ್ಯ, ಸಿನಿಮಾ ಕೆಲಸಗಳು ಪ್ರಾಥಮಿಕ ಹಂತದಲ್ಲಿದ್ದು, ಧನಂಜಯ್ ಅಭಿನಯದ ‘ಬಡವ ರ್ಯಾಸ್ಕಲ್’ ಸಿನಿಮಾ ಕೆಲಸಗಳು ಪೂರ್ಣಗೊಂಡ ನಂತರ ಈ ಚಿತ್ರ ಸೆಟ್ಟೇರಲಿದೆ.
ಸದ್ಯ, ಸತ್ಯಪ್ರಕಾಶ್ ಕಮರ್ಷಿಯಲ್ ಸಿನಿಮಾಗಳತ್ತ ಮುಖ ಮಾಡುತ್ತಿದ್ದಾರೆ. ಪುನೀತ್ ರಾಜ್ಕುಮಾರ್ ಅಭಿನಯದ ಮುಂದಿನ ಚಿತ್ರಕ್ಕೆ ಸತ್ಯಪ್ರಕಾಶ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
ಇದನ್ನೂ ಓದಿ: ಸೂರಿ ಸಿನಿಮಾ ತುಂಬಾನೇ ರಾ ಆಗಿದೆ; ಪಾಪ್ಕಾರ್ನ್ ಮಂಕಿ ಟೈಗರ್ ಟೀಸರ್ ನೋಡಿ ಮೆಚ್ಚಿದ ಪುನೀತ್
ಸದ್ಯ, ಧನಂಜಯ್
ಪಾಪ್ಕಾರ್ನ್ ಮಂಕಿ ಟೈಗರ್ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ದುನಿಯಾ ಸೂರಿ ನಿರ್ದೇಶನದ ಈ ಚಿತ್ರವನ್ನು ಸುಧೀರ್ ಕೆ.ಎಂ ನಿರ್ಮಿಸಿದ್ದಾರೆ. ಶೇಖರ್ ಎಸ್ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ಸಂಯೋಜನೆ ಹಾಗೂ ದೀಪು ಎಸ್. ಕುಮಾರ್ ಸಂಕಲನ ಚಿತ್ರಕ್ಕಿದೆ. ಡಾಲಿ ಧನಂಜಯ, ನಿವೇದಿತಾ, ಕಾಕ್ರೋಚ್, ನವೀನ್, ಅಮೃತಾ ಅಯ್ಯಂಗಾರ್, ಸಪ್ತಮಿ, ಮೋನಿಶಾ ನಾಡಿಗೇರ್ ಹಾಗೂ ಗೌತಮ್ ಚಿತ್ರದಲ್ಲಿ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ