ನಟಿ ಪವಿತ್ರಾ ಲೋಕೇಶ್ (Pavitra Lokesh) ಕಳೆದ 15 ದಿನಗಳಿಂದ ಭಾರೀ ಸುದ್ದಿಯಲ್ಲಿದ್ದಾರೆ. ವೈಯಕ್ತಿಕ ಕಾರಣಗಳಿಂದ ಸುದ್ದಿಯಾಗಿರುವ ನಟಿ ಇದೀಗ ಪೊಲೀಸ್ ಠಾಣೆ (Police Station) ಮೆಟ್ಟಿಲೇರಿದ್ದಾರೆ. ಹೌದು, ನನ್ನ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿರುವ ವ್ಯಕ್ತಿಯೊಬ್ಬರು ಅನುಚಿತವಾಗಿ ಸಂದೇಶ ಕಳುಹಿಸುತ್ತಿದ್ದಾರೆ’ ಎಂದು ಆರೋಪಿಸಿರುವ ನಟಿ ಪವಿತ್ರಾ ಲೋಕೇಶ್ ಮೈಸೂರಿನಲ್ಲಿ ದೂರು ನೀಡಿದ್ಧಾರೆ.
ಮೈಸೂರಿನಲ್ಲಿ ದೂರು ಕೊಟ್ಟ ನಟಿ
ಮೈಸೂರಿನ ನಜರಾಬಾದ್ನ ಸೈಬರ್ ಮತ್ತು ಆರ್ಥಿಕ ಅಪರಾಧ ಠಾಣೆಗೆ ದೂರು ನೀಡಿರುವ ನಟಿ, ಸಾಮಾಜಿಕ ಜಾಲತಾಣದ ಮೂಲಕ ಸುಳ್ಳು ಸುದ್ದಿಗಳನ್ನು ಹರಡುತ್ತಿರುವುದಲ್ಲದೇ, ನನ್ನ ಘನತೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ರೀತಿ ಮಾಡುತ್ತಿರುವುದರಿಂದ ನನಗೆ ಮಾನಸಿಕ ಹಿಂಸೆಯಾಗುತ್ತಿದೆ. ಈ ಮೂಲಕ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಹಾಗಾಗಿ ತಪ್ಪಿತಸ್ಥರ ವಿರುದ್ಧ ಈಗಲೇ ಕ್ರಮ ಜರುಗಿಸಬೇಕು ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ.
ಕನ್ನಡ ಸಿನಿಮಾ ರಂಗದಲ್ಲಿ ಮಿಮಚಿದ್ದ ಪವಿತ್ರಾ ಲೋಕೇಶ್ ಸದ್ಯ ತೆಲುಗು ಇಂಡಸ್ಟ್ರಿಯಲ್ಲಿ ಬ್ಯುಸಿ ಇದ್ದಾರೆ. ಆದರೆ ಇತ್ತೀಚೆಗೆ ತೆಲುಗಿನ ಪೋಷಕ ನಟ ನರೇಶ್ ಹಾಗೂ ಪವಿತ್ರಾ ಲೋಕೇಶ್ ಅವರ ಸಂಬಂಧದ ಬಗ್ಗೆ ಹಲವಾರು ಸುದ್ದಿಗಳು ಕೇಳಿ ಬರುತ್ತಿವೆ. ಈ ಇಬ್ಬರೂ ಈಗಾಗಲೇ ಮದುವೆಯಾಗಿದೆ ಎಂದು ಕೆಲವರು ಹೇಳಿದದರೆ, ಇನ್ನೂ ಕೆಲವರು ಸದ್ಯದಲ್ಲಿಯೇ ಆಗಲಿದ್ದಾರೆ ಎಂದಿದ್ದಾರೆ. ಹಾಗಾಗಿ ಈ ವಿಚಾರವಾಗಿ ಬಹಳಷ್ಟು ಸುದ್ದಿಗಳು ಹರಿದಾಡುತ್ತಿದೆ.
ಇದನ್ನೂ ಓದಿ: ನಟಿ ಮೀನಾ ಗಂಡನ ಪ್ರಾಣ 'ಪಕ್ಷಿ' ಹಾರಿ ಹೋಗಲು ಇದೇ ಕಾರಣ
ರೇಶ್ ಹಾಗೂ ಪವಿತ್ರಾ ಲೋಕೇಶ್ ಇಬ್ಬರೂ ಈಗಾಗಲೇ ಮದುವೆಯಾಗಿದ್ದಾರೆ ಎನ್ನುವ ಮಾತು ಟಾಲಿವುಡ್ನಲ್ಲಿ ಜೋರಾಗಿ ಚರ್ಚೆಯಾಗುತ್ತಿದೆ. ಇನ್ನೂ ಮೂರನೇ ಪತ್ನಿಗೆ ವಿಚ್ಛೇದನ ನೀಡದೆ ನಾಲ್ಕನೇ ಮದುವೆಯಾಗಿದ್ದಾರೆ ಎನ್ನುವ ಸುದ್ದಿಯಾಗಿತ್ತು. ಆದರೆ, ಈ ಬಗ್ಗೆ ಸ್ಪಷ್ಟತೆ ಇರಲಿಲ್ಲ. ಆದರೆ ನಿನ್ನೆ ಈ ಬಗ್ಗೆ ಮಾತನಾಡಿದ ನರೇಶ್ ಮೂರನೇ ಪತ್ನಿ ರಮ್ಯಾ ರಘಪತಿ ಕೆಲ ವಿಚಾರಗಳನ್ನು ತೆರೆದಿಟ್ಟಿದ್ದರು.
ಬೆಂಗಳೂರು ಮೂಲದ ರಮ್ಯಾ ರಘುಪತಿ ಎಂಬುವವರನ್ನು ನರೇಶ್ ಮದುವೆಯಾಗಿದ್ದರು. ಕನ್ನಡ ನ್ಯೂಸ್ ಚಾನೆಲ್ ಪವರ್ ಟಿವಿ ಸಂದರ್ಶನದಲ್ಲಿ ರಮ್ಯಾ ರಘುಪತಿ ತಮ್ಮ ಬಗ್ಗೆ ಮಾಹಿತಿ ನೀಡಿದ್ದಾರೆ. ಜೊತೆ ತಮ್ಮ ಪತಿ ನಟ ನರೇಶ್ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. 'ನರೇಶ್ ಒಬ್ಬ ಹೆಣ್ಣುಬಾಕ. ಆತ ಹೆಣ್ಣುಬಾಕ ಅನ್ನುವುದು ಮದುವೆಯಾದ ಮೂರು ವರ್ಷಕ್ಕೆ ತಿಳಿದಿತ್ತು. ನಮ್ಮ ಅತ್ತೆಯವರದ್ದು ತುಂಬು ಕುಟುಂಬ. ಎಲ್ಲರೂ ಒಟ್ಟಿಗೆ ಇರುತ್ತೇವೆ. ಪ್ರತಿಯೊಂದು ಕ್ಷಣವನ್ನು ಅನುಭವಿಸೋಣ ಅವರು ಹೇಳಿದ್ದರು. ಇವರು ನೋಡಿದರೆ, ಹೆಂಗಸರು ಅಂದರೆ ಬಾಯಿ ಬಿಡುತ್ತಿದ್ದರು. ಎಲ್ಲ ರೀತಿಯಲ್ಲೂ ನಾನು ಕೇಳಿಕೊಂಡಿದ್ದೆ ಎಂದು ಅವರು ಹೇಳಿದ್ದಾರೆ.
ಟಾಲಿವುಡ್ ಸೂಪರ್ ಸ್ಟಾರ್ ಕೃಷ್ಣ ಅವರ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ಮಹೇಶ್ ಬಾಬು ಅವರ ತಂದೆ ಕೃಷ್ಣ ಒಂದಾನೊಂದು ಕಾಲದಲ್ಲಿ ತೆಲುಗು ಚಿತ್ರರಂಗವನ್ನು ಆಳಿದವರು. ಕೃಷ್ಣ ಅವರ ಎರಡನೇ ಹೆಂಡತಿ ಮಗ ಈ ನರೇಶ್. ಕೃಷ್ಣ ಅವರ ಮೊದಲನೇ ಹೆಂಡತಿ ಹೆಸರು ಇಂದಿರಾ ದೇವಿ. ಕೃಷ್ಣ ಅವರ ಎರಡನೇ ಹೆಂಡತಿ ಹೆಸರು ವಿಜಯ ನಿರ್ಮಲ. ವಿಜಯ ನಿರ್ಮಲ ಅವರ ಮಗನೇ ನರೇಶ್. ನೀವೂ ಕೂಡ ಸಾಕಷ್ಟು ಸಿನಿಮಾಗಳಲ್ಲಿ ನರೇಶ್ ಅವರನ್ನು ನೋಡಿದ್ದೀರಾ. ತೆಲುಗು ಚಿತ್ರರಂಗದಲ್ಲೂ ಸಾಕಷ್ಟು ಹೆಸರು ಮಾಡಿದ್ದಾರೆ ನರೇಶ್. ನರೇಶ್ ತಾಯಿ ಅಂದರೆ ವಿಜಯ ನಿರ್ಮಲಾ ಹಾಗೂ ಅವರ ಮೊದಲ ಕೆ.ಎಸ್.ಮೂರ್ತಿ ಅವರ ಮಗ ನರೇಶ್, ಕೆ.ಎಸ್ ಮೂರ್ತಿ ಅವರ ಜೊತೆ ಡಿವೋರ್ಸ್ ಪಡೆದು ಕೃಷ್ಣ ಅವರನ್ನು ಮದುವೆಯಾಗಿದ್ದರು.
ಇದನ್ನೂ ಓದಿ: ಚಾರ್ಲಿಗೆ ಟ್ರೈನಿಂಗ್ ಕೊಟ್ಟ ಆ ದಿನಗಳು ಹೇಗಿತ್ತು ಗೊತ್ತಾ? ಘಾಟಿ ನಾಯಿಗೆ ಬುದ್ದಿ ಕಲಿಸೋಕೆ ಬಂದಿದ್ದರು ಸ್ಪೆಷಲ್ ಟ್ರೈನರ್!
ನರೇಶ್ ಅವರ ಒಟ್ಟು ಆಸ್ತಿ 6000 ಕೋಟಿಯಂತೆ!
ಹೌದು, ನರೇಶ್ ಹೇಳಿ ಕೇಳಿ ದೊಡ್ಡ ಮನೆಯಲ್ಲಿ ಹುಟ್ಟಿದವರು. ಮೊದಲ ಅಪ್ಪ ಕೂಡ ಸಾಕಷ್ಟು ಹಣ ಮಾಡಿದ್ದರು. ಎರಡನೇ ಅಪ್ಪ ಕೂಡ ಸೂಪರ್ ಸ್ಟಾರ್. ಇನ್ನೇನು ಕೇಳಬೇಕಾ? ಹುಟ್ಟಿದಾಗಿನಿಂದಲೂ ಗೋಲ್ಡನ್ ಸ್ಪೂನ್ ಇಟ್ಟುಕೊಂಡೇ ಬಂದವರು. ನರೇಶ್ ಒಟ್ಟು ಆಸ್ತಿ 6 ಸಾವಿರ ಕೋಟಿ ಎಂದು ಹೇಳಲಾಗುತ್ತಿದೆ. ಜೊತೆಗೆ ನರೇಶ್ ಅವರಿಗೂ ಇದು ನಾಲ್ಕನೇ ಮದುವೆ ಎಂದು ಹೇಳಲಾಗುತ್ತಿದೆ. 62 ವರ್ಷದ ನರೇಶ್ ಇದೀಗ 43 ವರ್ಷದ ಪವಿತ್ರಾ ಲೋಕೇಶ್ ಅವರನ್ನು ಮದುವೆಯಾಗುತ್ತಿದ್ದಾರಂತೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ