Pranitha Subhash: ಮಗುವಿನ ಮುಖ ರಿವೀಲ್ ಮಾಡಿದ ನಟಿ ಪ್ರಣಿತಾ, ಕ್ಯೂಟ್​ ವಿಡಿಯೋ ಮಿಸ್​ ಮಾಡ್ದೇ ನೋಡಿ

Video Viral: 2010ರಿಂದಲೂ ಪ್ರಣಿತಾ ಸುಭಾಷ್ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡದ ‘ಪೊರ್ಕಿ’ ಸಿನಿಮಾ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು ಬಹುಭಾಷಾ ನಟಿಯಾಗಿ ಹೆಸರು ಮಾಡಿದ್ದಾರೆ.

ನಟಿ ಪ್ರಣಿತಾ ಸುಭಾಷ್

ನಟಿ ಪ್ರಣಿತಾ ಸುಭಾಷ್

  • Share this:
ದಕ್ಷಿಣ ಚಿತ್ರರಂಗದ  (South Film Industry) ಸ್ಟಾರ್ ನಟಿ ಪ್ರಣಿತಾ ಸುಭಾಷ್ (Pranitha Subhash) ಅವರು ಇತ್ತೀಚೆಗೆ ತಾನು ತಾಯಿಯಾಗುತ್ತಿರುವ ಸುದ್ದಿಯನ್ನು ವಿಭಿನ್ನವಾಗಿ ಅಭಿಮಾನಿಗಳಿಗೆ ತಿಳಿಸಿದ್ದರು. ಅಲ್ಲದೇ ಈ ಬಗ್ಗೆ ಆಗಾಗ ಅಭಿಮಾನಿಗಳ (Fans) ಜೊತೆ ಫೋಟೋ ಸಹ ಹಂಚಿಕೊಳ್ಳುತ್ತಿದ್ದರು. ಸಾಮಾಜಿಕ ಜಾಲತಾಣದಲ್ಲಿ ಆಗ್ಗಾಗ್ಗೆ ಬೇಬಿ ಬಂಪ್ ಪೋಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಆದರೆ ಮೊನ್ನೆ ಶುಕ್ರವಾರ (Friday) ಅವರು ಹೆಣ್ಣು (Baby Girl) ಮಗುವಿಗೆ ಜನ್ಮ ನೀಡಿದ್ದು, ಶುಕ್ರವಾರದಂದು ಮನೆಗೆ ಪುಟ್ಟ ಮಹಾಲಕ್ಷ್ಮಿಯ ಆಗಮನವಾಗಿದೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇದೀಗ ಅವರು ತಾವು ಗರ್ಭಿಣಿಯಾಗಿದ್ದ ಸಂದರ್ಭದಿಂದ ಹಿಡಿದು ಹೆರಿಗೆಯ ತನಕ ವಿಡಿಯೋವೊಂದನ್ನು ಮಾಡಿ ಹಂಚಿಕೊಂಡಿದ್ದಾರೆ. ಅಲ್ಲದೇ ಮಗುವಿನ ಮುಖವನ್ನು ಸಹ ರಿವೀಲ್ ಮಾಡಿದ್ದಾರೆ.

ತಾನು ಪ್ರೆಗ್ನೆಂಟ್ (Pranitha Subhash Pregnant) ಎಂಬ ಸುದ್ದಿಯನ್ನು ಪ್ರಣಿತಾ ಸುಭಾಷ್ ತಿಳಿಸಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಪತಿ ಜೊತೆಗಿನ ಸ್ಪೆಷಲ್ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ಈ ಸಿಹಿ ಸುದ್ದಿಯನ್ನು ಅವರು ಹಂಚಿಕೊಂಡಿದ್ದರು. 2021ರ ಮೇ ತಿಂಗಳಲ್ಲಿ ಉದ್ಯಮಿ ನಿತಿನ್ ರಾಜು ಜೊತೆ ಪ್ರಣಿತಾ ಹಸೆಮಣೆ ಏರಿದ್ದರು. ಕೊರೊನಾ ಮುಂಜಾಗ್ರತೆ ಕ್ರಮವಾಗಿ ಕೇವಲ ಆಪ್ತರ ಸಮ್ಮುಖದಲ್ಲಿ ಅವರ ಮದುವೆ ಸಮಾರಂಭ ನಡೆದಿತ್ತು. ಅವರದ್ದು ಲವ್ ಕಮ್ ಅರೇಂಜ್ ಮ್ಯಾರೇಜ್​ ಆಗಿತ್ತು.

ವಿಡಿಯೋ ಹಂಚಿಕೊಂಡ ನಟಿ 

2010ರಿಂದಲೂ ಪ್ರಣಿತಾ ಸುಭಾಷ್ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡದ ‘ಪೊರ್ಕಿ’ ಸಿನಿಮಾ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು ಬಹುಭಾಷಾ ನಟಿಯಾಗಿ ಹೆಸರು ಮಾಡಿದ್ದಾರೆ. ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೇ ಬಾಲಿವುಡ್​ನಲ್ಲಿ ಸಹ ಅವರು ಅಭಿನಯಿಸಿ, ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

ಪ್ರಣಿತಾ ಸುಭಾಷ್​ ಅವರಿಗೆ ಹೆಣ್ಣು ಮಗು ಜನಿಸಿರುವ ವಿಚಾರವನ್ನು ಅವರೇ ಸ್ವತಃ ಇನ್ಸ್ಟಾಗ್ರಾಂ ಮಗುವಿನೊಂದಿಗಿನ ಫೋಟೋ ಹಂಚಿಕೊಂಡಿದ್ದಾರೆ. ಅಲ್ಲದೇ ಜೊತೆಗೆ ಅವರ ಕುಟುಬಂಸ್ಥರು ಇದ್ದರು. ಇದೀಗ ವಿಡಿಯೋ ಹಂಚಿಕೊಂಡಿದ್ದು, ಆ ವಿಡಿಯೋ ಮೂಲಕ ಮಗುವಿನ ಮುಖ ರಿವೀಲ್ ಮಾಡಿದ್ದಾರೆ.

ಇದನ್ನೂ ಓದಿ: ಚಾರ್ಲಿ ಅಬ್ಬರಕ್ಕೆ ಬಾಕ್ಸ್ ಆಫೀಸ್ ಶೇಕ್! ವೀಕೆಂಡ್‌ನಲ್ಲಿ ಹೆಚ್ಚಾಯ್ತು ಕಲೆಕ್ಷನ್
ಮಗುವಿನೊಂದಿಗಿನ ಫೋಟೋ ಹಂಚಿಕೊಂಡಿದ್ದ ಅವರು, ‘‘ನನ್ನ ತಾಯಿ ಸ್ತ್ರೀರೋಗತಜ್ಞೆ ಹೀಗಾಗಿ ಈ ವಿಚಾರದಲ್ಲಿ ನಾನು ನಿಜವಾಗಿಯೂ ಅದೃಷ್ಟಶಾಲಿಯಾಗಿದ್ದೇನೆ. ಇದರಿಂದಾಗಿ ನನ್ನ ಡೆಲಿವರಿ ಸಮಯದಲ್ಲಿ ಯಾವುದೇ ಒತ್ತಡವಿಲ್ಲದೇ ಎಲ್ಲವೂ ಸರಾಗವಾಗಿ ಆಗಿದೆ. ಆದರೆ ಈ ಸಮಯ ನನ್ನ ತಾಯಿಯ ಪಾಲಿಗೆ ಬಹಳಷ್ಟು ಕಠಿಣ ಹಾಗೂ ಭಾವನಾತ್ಮಕ ಕ್ಷಣವಾಗಿತ್ತು. ನನ್ನ ಈ ಸಮಯದಲ್ಲಿ ನನ್ನೊಂದಿಗೆ ಸಾಥ್ ನೀಡಿದ ಡಾ. ಸುನೀಲ್ ಈಶ್ವರ್ ಮತ್ತು ಅವರ ತಂಡಕ್ಕೆ ನನ್ನ ಧನ್ಯವಾದಗಳು. ನನ್ನ ಈ ಸಂತಸದ ಕ್ಷಣವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ಸಂತೋಷವಾಗುತ್ತದೆ ಎಂದು ಬರೆದುಕೊಂಡಿದ್ದಾರೆ.

ವೈರಲ್ ಆಗಿತ್ತು ಸೀಮಂತದ ಫೋಟೋಗಳು

ಇತ್ತೀಚೆಗಷ್ಟೇ ಪ್ರಣಿತಾ ಸೀಮಂತದ ಫೋಟೋಗಳು ಸಹ ವೈರಲ್​ ಆಗಿತ್ತು. ಹಳದಿ ಬಣ್ಣದ ಸೀರೆಯಲ್ಲಿ ಸುಂದರಿ ಮಿಂಚುತ್ತಿದ್ದರು. ಇದಲ್ಲದೇ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಬೇಬಿ ಬಂಪ್ ಫೋಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿದ್ದರು.

ಇದನ್ನೂ ಓದಿ: ಸಮಂತಾ ಇನ್ನು ಲೇಡಿ ಬಿಗ್ ಬಾಸ್! ಮಾಜಿ ಮಾವನಿಗೆ ಸೆಡ್ಡು ಹೊಡೆದ್ರಾ ಸೊಸೆ?

ಇನ್ನು ಪ್ರಣೀತಾ ತಮ್ಮದೇ ಆದ ಫೌಂಡೇಶನ್​ ಮಾಡಿಕೊಂಡು ಅದರ ಮೂಲಕ ಸಮಾಜ ಸೇವೆ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸುತ್ತಿದ್ದಾರೆ. ಜೊತೆಗೆ ಲಾಕ್​ಡೌನ್​ನಲ್ಲಿ ಸಮಯದಲ್ಲಿ ಸಂಕಷ್ಟದಲ್ಲಿದ್ದ ಜನರಿಗೆ ಆಹಾರ ಹಾಗೂ ದಿನಸಿ ಕಿಟ್​ಗಳನ್ನು ನೀಡುವ ಮೂಲಕ ಜನರ ಕಷ್ಟಕ್ಕೆ ನೆರವಾಗಿದ್ದರು.
Published by:Sandhya M
First published: