ಸ್ಟಾರ್ ನಟ, ನಟಿಯರು ಹ್ಯಾಕರ್ ಉಪಟಳದಿಂದ ತಪ್ಪಿಸೋದು ಒಂದೆಡೆಯಾದರೆ. ಮತ್ತೊಂದೆಡೆ ನಕಲಿ ಖಾತೆಗಳಿಂದ ತಪ್ಪಿಸೋದು ಅವರಿಗಿರುವ ಎರಡನೇ ಸಂಕಷ್ಟ. ಹೌದು. ಸಾಮಾಜಿಕ ಜಾಲತಾಣದಲ್ಲಿ ಯಾರು ಬೇಕಾದರೂ ಖಾತೆ ತೆರೆಯಬಹುದು. ಕೆಲವರು ಸಿನಿಮಾ ತಾರೆಯರ ಹೆಸರಿನಲ್ಲಿ ಖಾತೆ ತೆರೆದು ಮೋಸ ಮಾಡುವವರಿದ್ದಾರೆ. ಅದರಂತೆ ಮಾಲಿವುಡ್ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್ ಅವರ ಮಗಳ ಹೆಸರಿನಲ್ಲಿ ಯಾರೋ ಕಿಡಿಗೇಡಿಗಳು ನಕಲಿ ಇನ್ಸ್ಟಾಗ್ರಾಂ ಖಾತೆಯನ್ನು ತೆರೆದಿದ್ದಾರೆ. ಇದನ್ನು ನೋಡಿದ ಪೃಥ್ವಿರಾಜ್ ಸುಕುಮಾರನ್ ಎಚ್ಚರಿಕೆ ನೀಡಿದ್ದಾರೆ.
ಹೌದು. ಪೃಥ್ವಿರಾಜ್ ಸುಕುಮಾರನ್ ಅವರಿಗೆ ಮುದ್ದಾದ ಅಲಂಕೃತ ಮೆನನಗ್ ಪೃಥ್ವಿರಾಜ್ ಎಂಬ ಮಗಳಿದ್ದಾರೆ. ಅಷ್ಟು ಮಾತ್ರವಲ್ಲ, ಅಪ್ಪನಂತೆಯೇ ಆಕೆಗೂ ಅಭಿಮಾನಿಗಳಿದ್ದಾರೆ. ಇದೀಗ ಆಕೆಯ ಹೆಸರನ್ನು ಬಳಸಿಕೊಂಡು ಕೆಲವರು ಇನ್ಸ್ಟಾಗ್ರಾಂನಲ್ಲಿ ನಕಲಿ ಖಾತೆಯನ್ನು ಸೃಷ್ಠಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ