ಕೊರೋನಾ ಎರಡನೇ ಅಲೆ ನಿಜಕ್ಕೂ ಜನರಲ್ಲಿ ಆತಂಕ ಸೃಷ್ಟಿಸಿದೆ. ದಿನೇ ದಿನೇ ಸಾವಿನ ಸಂಖ್ಯೆಯ ಜೊತೆಗೆ ಸೋಂಕಿತರ ಸಂಖ್ಯೆಯೂ ಹೆಚ್ಚುತ್ತಿದೆ. ಒಂದು ಕಡೆ ಆಮ್ಲಜನಕದ ಕೊರತೆಯಾದರೆ, ಮತ್ತೊಂದು ಕಡೆ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬೆಡ್ ಲಭ್ಯವಾಗುತ್ತಿಲ್ಲ. ಇದರಿಂದಾಗಿ ಸಾವಿನ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಇನ್ನು ತೀವ್ರವಾಗಿ ಹರಡುತ್ತಿರುವ ಕೊರೋನಾಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮತ್ತೊಮ್ಮೆ ರಾಜ್ಯದಲ್ಲಿ ಲಾಕ್ಡೌನ್ ಜಾರಿಗೆ ತಂದಿದೆ. ಇನ್ನೇನು ಕೆಲವೇ ಗಂಟೆಗಳಲ್ಲಿ ಇಡೀ ರಾಜ್ಯ ಮತ್ತೆ ಲಾಕ್ಡೌನ್ ಆಗಲಿದ್ದು, 14 ದಿನಗಳ ಕಾಲ ಇದು ಮುಂದುವರೆಯಲಿದೆ. ಈ ಲಾಕ್ಡೌನ್ ಮತ್ತೆ ಮುಂದುವರೆಯುತ್ತಾ ಅಥವಾ ಇಲ್ಲಿಗೆ ಮುಗಿಯುತ್ತಾ ಅನ್ನೋದು ತಿಳಿಯದೆ ಸಾಕಷ್ಟು ಮಂದಿ ತಮ್ಮ ತಮ್ಮ ಊರುಗಳತ್ತ ತೆರೆಳುತ್ತಿದ್ದಾರೆ. ರಾಜ್ಯದಲ್ಲಿ ಇರುವ ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಸಾವಿನ ಸರಣಿ ಮುಂದುವರೆದಿದೆ. ನಿನ್ನೆಯಷ್ಟೆ ಕೋವಿಡ್ನಿಂದಾಗಿ ಸಾವನ್ನಪ್ಪಿದ ಕನ್ನಡದ ನಿರ್ಮಾಪಕ ರಾಮು ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ.
ನಟಿ ಮಾಲಾಶ್ರೀ ಅವರ ಪತಿ ರಾಮು ನಿನ್ನೆ ಸಂಜೆ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಿಗ್ಗೆ ಆಸ್ಪತ್ರೆಯಿಂದ ಮೃತ ದೇಹವನ್ನು ಅಂತ್ಯಕ್ರಿಯೆಗೆ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು ಹೋಗಲಾಗಿದೆ.
ರಾಮು ಅವರ ಹುಟ್ಟೂರಾದ ಕೊಡಿಗೇನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಕುಣಿಗಲ್ ಬಳಿ ಇರುವ ಕೊಡಿಗೇನಹಳ್ಳಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಇಂದು ಮಧ್ಯಾಹ್ನ ಅಂತ್ಯಕ್ರಿಯೆಯನ್ನು ಮಾಡಲಾಗುವುದು ಎಂದು ಮಾಲಾಶ್ರೀ ಅವರ ಕುಟುಂಬದ ಆಪ್ತರು ತಿಳಿಸಿದ್ದಾರೆ.
ಕೋವಿಡ್ ನಿಯಮಗಳ ಪ್ರಕಾರ ನಿರ್ಮಾಪಕ ಕೋಟಿ ರಾಮು ಅವರ ಅಂತ್ಯಕ್ರಿಯೆ ನಡೆಯಲಿದ್ದು, ಅದರಲ್ಲಿ ಭಾಗಿಯಾಗಲು ಕುಟುಂಬದವರಿಗೆ ಮಾತ್ರ ಅನುಮತಿ ನೀಡಲಾಗಿದೆಯಂತೆ.
ಇದನ್ನೂ ಓದಿ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ನಟಿ ಶನಾಯಾ ಕಾಟ್ವೆ ಬಂಧನ..!
ಸ್ಯಾಂಡಲ್ವುಡ್ನಲ್ಲಿ ದುಬಾರಿ ಬಜೆಟ್ ಸಿನಿಮಾಗಳನ್ನು ಮಾಡುವ ಮೂಲಕ ಕೋಟಿ ರಾಮು ಎಂದೇ ಖ್ಯಾತರಾಗಿದ್ದರು. ಕನ್ನಡ ಸಿನಿಮಾಗಳಿಗೆ ಕೋಟಿ ಕೋಟಿ ಹಣ ಹೂಡುವ ಮೂಲಕ 90ರ ದಶಕದಲ್ಲೇ ಎಲ್ಲರ ಹುಬ್ಬೇರುವಂತೆ ಮಾಡಿದ್ದ ನಿರ್ಮಾಪಕ ರಾಮು.
ಸ್ಯಾಂಡಲ್ವುಡ್ನಲ್ಲಿ ಎಲ್ಲರ ಜತೆ ಉತ್ತಮ ಸಂಬಂಧ ಹೊಂದಿದ್ದ ರಾಮು ಅವರ ನಿಧನಕ್ಕೆ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ, ದರ್ಶನ್, ಪ್ರೇಮ್, ರಕ್ಷಿತಾ, ಪುನೀತ್ ರಾಜ್ಕುಮಾರ್, ಪ್ರಜ್ವಲ್ ದೇವರಾಜ್ ಸೇರಿದಂತೆ ಹಲವಾರು ಮಂದಿ ಸಂತಾಪ ಸೂಚಿಸಿದ್ದಾರೆ.
View this post on Instagram
ಕನ್ನಡ ಚಿತ್ರರಂಗದ ಹೆಮ್ಮೆಯ ನಿರ್ಮಾಪಕರಲ್ಲೊಬರು - ಕೋಟಿ ರಾಮು ರವರು ಇಂದು ನಮ್ಮನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ.
ದಯಮಾಡಿ ಮನೆಯಲ್ಲಿರಿ. ಎಲ್ಲಾ ಸುರಕ್ಷತೆಯ ಕ್ರಮಗಳನ್ನು ಪಾಲಿಸಿ 🙏 pic.twitter.com/BeIaYoNA6e
— Darshan Thoogudeepa (@dasadarshan) April 26, 2021
View this post on Instagram
ಬಿಗ್ ಬಜೆಟ್ ಹಾಗೂ ಮೆಗಾ ಹಿಟ್ ಚಿತ್ರಗಳನ್ನು ನಿರ್ಮಿಸಿ ಕೋಟಿ ರಾಮು ಎಂದೇ ಹೆಸರಾಗಿದ್ದ ನಿರ್ಮಾಪಕ ರಾಮು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.#RIPRamu #Ramu #JayannaFilms pic.twitter.com/SGuqc3boLq
— Jayanna Films (@JayannaFilms) April 26, 2021
The Wait Is Over!! WATCH NOW!!💥💥👍👍 https://t.co/TKgCoNFDo1 #arjungowda 💃💃🤩🤩
— Malashree Ramu (@RamuMalashree) April 10, 2021
ಇದನ್ನೂ ಓದಿ: Singer Mangli: ಕನ್ನಡದ ಸ್ಟಾರ್ ನಟನ ಜತೆ ತೆರೆ ಹಂಚಿಕೊಳ್ಳಲಿದ್ದಾರೆ ಗಾಯಕಿ ಮಂಗ್ಲಿ
52 ವರ್ಷದ ನಿರ್ಮಾಪಕ ರಾಮು ಅವರು ಮೃದು ಸ್ವಭಾವದವರಾಗಿದ್ದರು. ಸದಾ ಸೌಮ್ಯವಾಗಿಯೇ ಮಾತನಾಡುತ್ತಿದ್ದ ಅವರದ್ದು ಸರಳ ವ್ಯಕ್ತಿತ್ವ. ತಮ್ಮ ನಿರ್ಮಾಣದ ಚಿತ್ರಗಳ ಮೂಲಕ ಸಾಕಷ್ಟು ಪ್ರತಿಭೆಗಳನ್ನು ಸ್ಯಾಂಡಲ್ವುಡ್ಗೆ ಪರಿಚಯಿಸಿದ್ದಾರೆ. 30ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಾಣ ಮಾಡಿರುವ ರಾಮು ಅವರು ಮಾಲಾಶ್ರೀ ಅಭಿನಯದ ಹಲವಾರು ಚಿತ್ರಗಳಿಗೆ ಹಣ ಹೂಡಿದ್ದಾರೆ. ಕನ್ನಡದಲ್ಲಿ ಗೋಲಿಬಾರ್ ಸಿನಿಮಾದ ಮೂಲಕ ಸಿನಿಮಾ ನಿರ್ಮಾಣ ಆರಂಭಿಸಿದ್ದರು. ಹಿಟ್ ಚಿತ್ರಗಳಾದ AK 47, ಲಾಕಪ್ ಡೆತ್, ಕಿಚ್ಚ, ಹಾಲಿವುಡ್, ಸಿಂಹದ ಮರಿ, ಕಲಾಸಿಪಾಳ್ಯ, ಸಿಬಿಐ ದುರ್ಗಾ ಸಿನಿಮಾ ನಿರ್ಮಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ