ಪುನೀತ್ ರಾಜ್ ಕುಮಾರ್ (Puneeth Rajkumar) ನಟನೆಯ ಕೊನೆಯ ಜೇಮ್ಸ್ (james) ಸಿನಿಮಾ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಗಳಿಸಿತ್ತು. ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದ ಸ್ಯಾಂಡಲ್ ವುಡ್ನ ಪ್ರಸಿದ್ದ ನಿರ್ಮಾಪಕ ಕಿಶೋರ್ ಪತ್ತಿಕೊಂಡ (Kishore Pathikonda) ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರಿಗೆ ಹೈ ಬಿಪಿಯಿಂದ ಸ್ಟ್ರೋಕ್ ಆಗಿದೆ ಎನ್ನಲಾಗುತ್ತಿದ್ದು, ತಕ್ಷಣವೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನ್ಯೂಸ್ 18 ಗೆ ಕಿಶೋರ್ ಆಪ್ತರು ಮಾಹಿತಿ ನೀಡಿದ್ದು, ಹೈ ಬಿಪಿಯಿಂದ ಕೋಮಾ ಹೋಗಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಅವರಿಗೆ ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜೇಮ್ಸ್ ಚಿತ್ರದ ಸೂಪರ್ ಸಕ್ಸಸ್ನ ನಂತರ ಕಿಶೋರ್ ಪತ್ತಿಕೊಂಡ ಹೊಸ ಚಿತ್ರವನ್ನು ಸಹ ಮಾಡುತ್ತಿದ್ದರು. ರಾಜರತ್ನ ಪುನೀತ್ ರಾಜ್ಕುಮಾರ್ ಅಭಿನಯದ ಜೇಮ್ಸ್ ಸಿನಿಮಾ ನೂರು ದಿನಗಳನ್ನು ಸಹ ಇತ್ತೀಚೆಗೆ ಪೂರೈಸಿತ್ತು. ಅಲ್ಲದೇ, ರಾಜ್ಯದಾದ್ಯಂತ ಈ ಸಿನಿಮಾಗೆ ಬಹಳ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿತ್ತು.
ಇದನ್ನೂ ಓದಿ: ನರೇಶ್ ಕಥೆ ಒಂದಾ?ಎರಡಾ? ಪ್ರತಿ ದಿನ ನಯಾ ನಯಾ ಸ್ಟೋರಿ, ಇವತ್ತೇನ್ ನೋಡಿ!
ಜೇಮ್ಸ್ ಸಿನಿಮಾದ ಬಿಡುಗಡೆಯನ್ನು ಅಭಿಮಾನಿಗಳು ಹಬ್ಬದಂತೆ ಆಚರಿಸಿದ್ದರು. ಕರ್ನಾಟಕ ಮಾತ್ರವಲ್ಲದೇ ಅಕ್ಕ ಪಕ್ಕದ ರಾಜ್ಯಗಳಲ್ಲಿ ಸಹ ಜೇಮ್ಸ್ ಬಿಡುಗಡೆಯಾಗಿತ್ತು. ಆಂಧ್ರ ಮತ್ತು ತೆಲಂಗಾಣದಲ್ಲಿ 300 ಕ್ಕೂ ಹೆಚ್ಚಿನ ಚಿತ್ರಮಂದಿರಗಳಲ್ಲಿ ಜೇಮ್ಸ್ ರಿಲೀಸ್ ಆಗಿದೆ. ಕೇರಳ, ತಮಿಳುನಾಡು ಹಾಗೂ ಮುಂಬೈನಲ್ಲೂ ಜೇಮ್ಸ್ ಜಾತ್ರೆ ಜೋರಾಗಿತ್ತು. ಕೆನಡಾ, ಆಸ್ಟ್ರೇಲಿಯಾ, ಅಮೆರಿಕ, ದುಬೈನಲ್ಲೂ ಜೇಮ್ಸ್ ಬಿಡುಗಡೆಯಾಗಿ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿತ್ತು.
ಅಪ್ಪು ಅಭಿನಯದ ಜೇಮ್ಸ್, ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ದಾಖಲೆ ಬರೆದಿದ್ದು, ಜೇಮ್ಸ್ ಸ್ಯಾಟಲೈಟ್ ರೈಟ್ಸ್ ಕನ್ನಡದಲ್ಲಿ ಬರೋಬ್ಬರಿ 13.80 ಕೋಟಿಗೆ ಮಾರಾಟವಾಗಿದೆ. ಈ ಹಿಂದೆ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸ್ಯಾಟಲೈಟ್ ರೈಟ್ಸ್ ಬರೋಬ್ಬರಿ 6 ಕೋಟಿಗೆ ಮಾರಾಟವಾಗಿ ದಾಖಲೆ ಮಾಡಿತ್ತು, ಆದರೆ ಇದೀಗ ಬಿಡುಗಡೆಗೂ ಮುನ್ನವೇ ದಾಖಲೆ ಪ್ರಮಾಣದಲ್ಲಿ ಮಾರಾಟವಾಗಿದ್ದು, ಕೆಜಿಎಫ್ ಗಿಂತ ಎರಡು ಪಟ್ಟು ಹೆಚ್ಚಿನ ಬೆಲೆಗೆ ಜೇಮ್ಸ್ ರೈಟ್ಸ್ ಸೇಲ್ ಆಗಿದ್ದು, ಮೂಲಗಳ ಪ್ರಕಾರ ವಿವಿಧ ಭಾಷೆಗಳು ಸೇರಿ 80 ಕೋಟಿಗೆ ಟಿವಿ ರೈಟ್ಸ್ ಗೆ ಸೇಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ: ಅಕ್ಷಯ್ ಕುಮಾರ್ ಜೊತೆ ಸಿನಿಮಾ ಮಾಡ್ತಾರಾ ಸಮಂತಾ? ಏನಿದು ಹೊಸ ಮ್ಯಾಟರ್?
ಸದ್ಯದ ಮಾಹಿತಿ ಪ್ರಕಾರ ಸೋನಿ ಡಿಜಿಟಲ್ಗೆ 40 ಕೋಟಿ, ಕನ್ನಡ ಸುವರ್ಣಕ್ಕೆ13.80 ಕೋಟಿ ಹಾಗೂ ತೆಲುಗು ಮಾ ಟಿವಿಗೆ ಸುಮಾರು 5.70 ಕೋಟಿಗೆ ಮಾರಾಟವಾಗಿದೆ, ಇನ್ನು ತಮಿಳಿನಲ್ಲಿ ಸನ್ ನೆಟ್ ವರ್ಕ್ಗೆ 5.17 ಕೋಟಿ, ಮಲೆಯಾಳಂ 1.2 ಕೋಟಿ, ಭೋಜಪುರಿ 5.50 ಕೋಟಿ, ಹಿಂದಿ ಸೋನಿಗೆ 2.70 ಕೋಟಿಗೆ ಮಾರಾಟವಾಗಿದ್ದು, ನಿಜಕ್ಕೂ ಇದು ಅಭಿಮಾನಿಗಳಿಗೆ ಸಂತಸದ ವಿಚಾರವಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ