ದುನಿಯಾ ವಿಜಯ್ ಲಾಕ್ಡೌನ್ ಸಡಿಲಗೊಂಡ ನಂತರ ಮಡಿಕೇರಿಯಲ್ಲಿ ಸಲಗ ಸಿನಿಮಾದ ಹಾಡಿನ ಚಿತ್ರೀಕರಣ ಮಾಡುವ ಮೂಲಕ ಸುದ್ದಿಯಲ್ಲಿದ್ದರು. ಈಗ ಇದೇ ಹಾಡಿನಿಂದಾಗಿ ಮತ್ತೊಮ್ಮೆ ಸದ್ದು ಮಾಡುತ್ತಿದ್ದಾರೆ. ವಿಜಯ್ ನಟಿಸಿ, ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಮಳೆಯೇ ಮಳೆಯೇ ಹಾಡು ರಿಲೀಸ್ಗೆ ರೆಡಿಯಾಗಿದೆ.
ಕೊರೋನಾ ಭೀತಿಯ ನಡುವೆ ಮಡಿಕೇರಿಯಲ್ಲಿ ಚಿತ್ರೀಕರಿಸಲಾದ ಮಳೆಯೇ ಮಳೆಯೇ ಹಾಡು ಇನ್ನೇನು ರಿಲೀಸ್ ಆಗಲಿದೆ. ಸೆಪ್ಟೆಂಬರ್ 5ಕ್ಕೆ ಈ ಹಾಡಿನ ರಿಲೀಸ್ಗೆ ದಿನಾಂಕ ನಿಗದಿ ಮಾಡಲಾಗಿದೆ. ಅಂದು ಬೆಳಿಗ್ಗೆ 11ಕ್ಕೆ A2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ನಲ್ಲಿ ಈ ಲಿರಿಕಲ್ ವಿಡಿಯೋ ಹಾಡು ರಿಲೀಸ್ ಆಗಲಿದೆ.
ಕೆ.ಪಿ. ಶ್ರೀಕಾಂತ್ ನಿರ್ಮಾಣದ ಸಲಗ ಚಿತ್ರದಲ್ಲಿ ಟಗರು ಖ್ಯಾತಿಯ ಡಾಲಿ ಧನಂಜಯ್ ಸಹ ನಟಿಸಿದ್ದಾರೆ. ಧನಂಜಯ ಇದೇ ಮೊದಲ ಬಾರಿಗೆ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ಈ ಸಿನಿಮಾ ಹಲವಾರು ವಿಷಯಗಳಿಂದಾಗಿ ಸುದ್ದಿಯಲ್ಲಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ