RIP Puneeth Rajkumar: ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ..!

ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ಸಿದ್ದತೆ ಮಾಡಲಾಗಿದೆ. 5 ಗಂಟೆ ಸುಮಾರಿಗೆ ಪಾರ್ಥೀವ ಶರೀರ ಕಂಠೀರವ ಕ್ರೀಡಾಂಗಣಕ್ಕೆ ಬರುವ ಸಾಧ್ಯತೆ ಇದ್ದು, 6 ಗಂಟೆಗೆ ಸಾರ್ವಜನಿಕ ದರ್ಶನಕ್ಕೆ ಅನುಮತಿ ಸಿಗಬಹುದು ಎನ್ನಲಾಗಿದೆ. 

ನಟಿ ಪುನೀತ್​ ರಾಜ್​ಕುಮಾರ್ ಇನ್ನಿಲ್ಲ

ನಟಿ ಪುನೀತ್​ ರಾಜ್​ಕುಮಾರ್ ಇನ್ನಿಲ್ಲ

  • Share this:
ಹೃದಯಾಘಾತದಿಂದ ಕೊನೆಯುಸಿರೆಳೆದ ನಟ ಪುನೀತ್​ ರಾಜ್​ಕುಮಾರ್  (RIP Puneeth Rajkumar)ಅವರ ಅಗಲಿಕೆಗೆ ರಾಜೀಯ ನಾಯಕರು, ಅಭಿಮಾನಿಗಳು ಹಾಗೂ ಸಿನಿರಂಗದ ಕಲಾವಿದರು ಕಂಬನಿ ಮಿಡಿಯುತ್ತಿದ್ದಾರೆ. ನಟನ ಪಾರ್ಥೀವ ಶರೀರವನ್ನು ವಿಕ್ರಂ ಆಸ್ಪತ್ರೆಯಿಂದ ಮೊದಲು ಸದಾಶಿವನಗರದಲ್ಲಿರುವ ಅವರ ಮನೆಗೆ ತೆಗೆದುಕೊಂಡು ಹೋಗಲಾಗುವುದು. ನಂತರ ಅಲ್ಲಿಂದ ಸಂಜೆ ಹೊತ್ತಿಗೆ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಪುನೀತ್​ ರಾಜ್​ಕುಮಾರ್​ ಅವರ ಮಗಳು ವಿದೇಶದಲ್ಲಿದ್ದು, ಅವರು ಬೆಂಗಳೂರಿಗೆ ಬಂದ ನಂತರ ಅಂತ್ಯಕ್ರಿಯೆ ಮಾಡಲಾಗುವುದು ಎಂದು ಹೇಳಲಾಗುತ್ತಿದೆ. ಆಸ್ಪತ್ರೆಯ ಬಳಿ ಪುನೀತ್​ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದೆ. ಕಣ್ಣೀಡಿರುತ್ತಾ ಅಭಿಮಾನಿಗಳು ಅಪ್ಪು ಹೆಸರು ಕೂಗುತ್ತಾ ತಮ್ಮ ದುಃಖವನ್ನು ಹೊರ ಹಾಕುತ್ತಿದ್ದಾರೆ. 

ಇನ್ನು, ಸುಮಾರು 500ಕ್ಕೂ ಹೆಚ್ಚು ಸಿಬ್ಬಂದಿಯಿಂದ ಅಂತಿಮ ದರ್ಶನಕ್ಕೆ ಸಿದ್ದತೆ ನಡೆಸಲಾಗುತ್ತಿದ್ದು, ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ಸಿದ್ದತೆ ಮಾಡಲಾಗಿದೆ. 5 ಗಂಟೆ ಸುಮಾರಿಗೆ ಪಾರ್ಥೀವ ಶರೀರ ಕಂಠೀರವ ಕ್ರೀಡಾಂಗಣಕ್ಕೆ ಬರುವ ಸಾಧ್ಯತೆ ಇದ್ದು, 6 ಗಂಟೆಗೆ ಸಾರ್ವಜನಿಕ ದರ್ಶನಕ್ಕೆ ಅನುಮತಿ ಸಿಗಬಹುದು ಎನ್ನಲಾಗಿದೆ.

Live Updates Power Star Puneeth Rajkumar is No More here live updates.
ನಟ ಪುನೀತ್ ರಾಜ್​ಕುಮಾರ್ ನಿಧನ


ಇನ್ನು ವಿದೇಶದಲ್ಲಿರುವ ಮಗಳು ಬೆಂಗಳೂರಿಗೆ ಬಂದ ನಂತರ ಅಂತ್ಯಕ್ರಿಯೆ ನಡೆಸಲು ಕುಟಂಬದವರು ನಿರ್ಧರಿಸಿದ್ದು, ಕಂಠೀರವ ಸ್ಟುಡಿಯೋ ಅಥವಾ ನಟನ ತೋಟದ ಮನೆಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಅನ್ನೋ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ. ನಾಳೆ ಸಂಜೆ 4.30ಕ್ಕೆ ಅಂತ್ಯಕ್ರಿಯೆ ನಡೆಯಬಹುದು ಎನ್ನಲಾಗುತ್ತಿದೆ.

ನಾಳೆವರೆಗೆ ಅತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಗುವುದು. ಅವರ ಕುಟುಂಬದವರ ನಿರ್ಧಾರದಂತೆ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ನಡೆಯುತ್ತದೆ ಎಂದು ಆರ್​. ಅಶೋಕ್​ ಅವರು ಹೇಳಿದ್ದಾರೆ.

ಇದನ್ನೂ ಓದಿ: RIP Puneeth Rajkumar: ಸ್ಯಾಂಡಲ್​ವುಡ್​ ಯುವರತ್ನ ಪುನೀತ್​ ರಾಜ್​ಕುಮಾರ್​ ವಿಧಿವಶ: ಇಲ್ಲಿದೆ ನಟನ ಸಿನಿ ಜರ್ನಿ..!

ನೀವು ತಿಳಿಸಿದಂತೆ ಸರ್ಕಾರ ಎಲ್ಲ ಏರ್ಪಾಟು ಮಾಡಲಿದೆ. ಪುನೀತ್ ರಾಜ್​ಕುಮಾರ್​ ಅವರ ಅಂತ್ಯಸಂಸ್ಕಾರ ನಿಮ್ಮಿಚ್ಚೆಯಂತೆ ನಡೆಸಿ ಕೊಡಲಿದೆ. ನಿಮ್ಮ ಮಾರ್ಗದರ್ಶನದಂತೆಯೇ ಅಂತ್ಯಕ್ರಿಯೆ ನೆರವೇರಿಸಿ ಕೊಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಅವರು ಶಿವರಾಜ್ ಕುಮಾರ್ ಅವರಿಗೆ ತಿಳಿಸಿದ್ದಾರಂತೆ.

ಅಕ್ಟೋಬರ್ 26ರ ಸಂಜೆ ಭಜರಂಗಿ 2 ಚಿತ್ರದ ಪ್ರೀ-ರಿಲೀಸ್​ ಕಾರ್ಯಕ್ರಮದಲ್ಲಿ ಪುನೀತ್ ರಾಜಕುಮಾರ್ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ನಟ ಯಶ್​ ಹಾಗೂ ಅಣ್ಣ ಶಿವರಾಜ್​ ಕುಮಾರ್​ ಜತೆ ವೇದಿಕೆ ಮೇಲೆ ಡ್ಯಾನ್ಸ್​ ಮಾಡಿದ್ದರು. ಬಳಿಕ ಅಕ್ಟೋಬರ್ 27ರಂದು ಸಾಧು ಕೋಕಿಲ ನಿರ್ದೇಶನದ ಮಹಾಯೋಗಿ ಸಿದ್ದಾರೂಢ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ್ದರು. ನಿನ್ನೆ ಅಕ್ಟೋಬರ್ 28ರಂದು ಸಂಗೀತ ನಿರ್ದೇಶಕ ಗುರುಕಿರಣ್ ಹುಟ್ಟುಹಬ್ಬದ ಆಚರಣೆಯಲ್ಲಿ ಪಾಲ್ಗೊಂಡು ಶುಭ ಹಾರೈಸಿದ್ದರು. ಆದರೆ ಇಂದು ಸಿಕ್ಕ ಅಗಲಿಕೆಯ ಕಹಿ ಸುದ್ದಿ ಅಭಿಮಾನಿಗಳ ಪಾಲಿಗೆ ನಿಜಕ್ಕೂ ಬರ ಸಿಡಿಲು ಬಡಿದಂತಾಗಿದೆ.

ಇದನ್ನೂ ಓದಿ: ಪವರ್​ ಸ್ಟಾರ್​ Puneeth Rajkumarಗೆ ಲಘು ಹೃದಯಾಘಾತ: ಆಸ್ಪತ್ರೆಗೆ ಭೇಟಿ ಕೊಟ್ಟ ಮುಖ್ಯಮಂತ್ರಿ-ನಟ ಯಶ್​

ಪುನೀತ್​ ರಾಜ್​ಕುಮಾರ್​ ಅವರ ಅಗಲಿಕೆಯ ಸುದ್ದಿ ಹೊರ ಬೀಳುತ್ತಿದ್ದಂತೆಯೇ  ಬೆಂಗಳೂರಿನ ಪ್ರಮುಖ ವೃತ್ತಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪ್ರಮುಖ ಸ್ಥಳಗಳಲ್ಲಿ ಕೆ ಎಸ್ ಆರ್ ಪಿ ವಾಹನ ನಿಲುಗಡೆ ಮಾಡಲಾಗಿದ್ದು, ಪ್ರಮುಖ ವೃತ್ತಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ

ಕಿರಿಯ ವಯಸ್ಸಿನಲ್ಲಿ ದೊಡ್ಡ ಮಟ್ಟದಲ್ಲಿ ಸಾಧನೆ ಮಾಡಿದ್ದ ಪುನೀತ್​ ರಾಜ್​ಕುಮಾರ್​ ಅವರು ಯೂತ್​ ಐಕಾನ್​ ಆಗಿದ್ದರು. ನಿನ್ನೆ ಫೋನ್​ ಮಾಡಿದ್ದರು. ಇವತ್ತು ಅವರನ್ನು ಭೇಟಿಯಾಗಬೇಕಿತ್ತು. ಆದರೆ ಇಂದು ಹೀಗೆ ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ವಿಧಿಯಾಟ ಎಂದಿದ್ದಾರೆ. ಇನ್ನು ಅಭಿಮಾನಿಗಳು ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.
Published by:Anitha E
First published: