ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೂ ಈಗ ಡ್ರಗ್ಸ್ ಮಾಫಿಮಾ ಲಿಂಕ್ ಇದೆ ಎನ್ನಲಾಗುತ್ತಿದೆ. ಇದರ ನಡುವೆಯೇ ಬೆಂಗಳೂರಿನಲ್ಲಿ ಎನ್ಸಿಬಿ ಅಧಿಕಾರಿಗಳು ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ವಿಚಾರಣ ವೇಳೆ ಅನೇಕ ಅಚ್ಚರಿಯ ಮಾಹಿತಿಗಳು ಹೊರ ಬಿದ್ದಿವೆ.
ಬೆಂಗಳೂರಿನಲ್ಲಿ ಎನ್ಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿರುವ ಆರೋಪಿಗಳು ಸ್ಯಾಂಡಲ್ವುಡ್ನ ನಟ, ನಟಿಯರು, ಸಂಗೀತ ನಿರ್ದೇಶಕರು ಸೇರಿದಂತೆ ಅನೇಕ ಗಣ್ಯರಿಗೂ ಡ್ರಗ್ ಪೂರೈಸುತ್ತಿದ್ದರು ಎನ್ನುವ ವಿಷಯ ಬೆಳಕಿಗೆ ಬಂದಿದೆ. ಈಗ ಇದೇ ವಿಷಯವಾಗಿ ನಟಿ ರಚಿತಾ ರಾಮ್ ಪ್ರತಿಕ್ರಿಯೆ ನೀಡಿದ್ದಾರೆ.
'ಸ್ಯಾಂಡಲ್ವುಡ್ಗೂ ಡ್ರಗ್ಸ್ ಮಾಫಿಯಾಗೂ ಇದೆ ಎನ್ನಲಾಗುತ್ತಿರುವ ವಿಷಯದ ಬಗ್ಗೆ ನನಗೇನೂ ಗೊತ್ತಿಲ್ಲ. ನನಗೆ ಈ ಸುದ್ದಿಯ ಬಗ್ಗೆ ಅರಿವಿಲ್ಲ. ಈ ವಿಷಯ ಇಂಡಸ್ಟ್ರಿಗೆ ಸಂಬಂಧಿಸಿದ್ದಾದರೂ, ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ' ಎಂದು ಪ್ರತಿಕ್ರಿಯಿಸಿದ್ದಾರೆ ನಟಿ ರಚಿತಾ ರಾಮ್.
ಇದನ್ನೂ ಓದಿ: Chhota Shakeel Exclusive: ರಿಯಾಗೆ ಭೂಗತ ಜಗತ್ತಿನ ಜೊತೆಗೆ ನಂಟಿರುವ ಕುರಿತು ಮಾತನಾಡಿರುವ ಛೋಟಾ ಶಕೀಲ್ ..!
ಕಸ್ತೂರಿ ನಿವಾಸ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ರಚಿತಾ ರಾಮ್, ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸುವಾಗ ಮೊದಲು ಇದು ಅನಾವಶ್ಯಕ ಪ್ರಶ್ನೆ ಎಂದಿದ್ದಾರೆ. ನಂತರ ಈ ಡ್ರಗ್ಸ್ ವಿಷಯದ ಬಗ್ಗೆ ತನಗೆ ಗೊತ್ತಿಲ್ಲ ಎಂದಿದ್ದಾರೆ.
ಇನ್ನು ಲಾಕ್ಡೌನ್ ಸಡಿಲಗೊಂಡ ನಂತರ ತಮ್ಮ ಸಿನಿಮಾದ ಚಿತ್ರೀಕರಣಕ್ಕಾಗಿ ರಚಿತಾ ರಾಮ್ ಹೈದರಾಬಾದಿಗೆ ಹಾರಿದ್ದರು. ಅಲ್ಲಿಂದ ಬಂದ ನಂತರ ರಚಿತಾ ಈಗ ಕಸ್ತೂರಿ ನಿವಾಸ ಸಿನಿಮಾದ ಚಿತ್ರತಂಡ ಸೇರಿಕೊಂಡಿದ್ದಾರೆ. ದಿನೇಶ್ ಬಾಬು ನಿರ್ದೇಶನದ ಈ ಚಿತ್ರದಲ್ಲಿ ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ