HOME » NEWS » Entertainment » RAGHAVENDRA RAJKUMAR NEW MOVIE RAJATANTRA TO STARTS SHOOTING SOON RMD

ನಿವೃತ್ತ ಕ್ಯಾಪ್ಟನ್ ಆಗಿ ರಾಘವೇಂದ್ರ ರಾಜ್​ಕುಮಾರ್; ದುಷ್ಟ ಶಕ್ತಿಗಳ ವಿರುದ್ಧ ಹೋರಾಡಲಿದ್ದಾರೆ ರಾಘಣ್ಣ

ನಿವೃತ್ತ ಮಿಲಿಟರಿ ಕ್ಯಾಪ್ಟನ್, ಆಗಿ ರಾಘವೇಂದ್ರ ರಾಜ್ ಕುಮಾರ್ ಅಭಿನಯಿಸುತ್ತಿದ್ದಾರೆ. ಹೊರಗಿನಿಂದ ಬರುವ ಶತ್ರುಗಳಿಂದ ದೇಶವನ್ನು ರಕ್ಷಿಸುತ್ತಿದ್ದ ಆತ, ದೇಶದ ಒಳಗೆ ಬಂದಾಗ ಯಾವರೀತಿ ಸಮಾಜ, ದೇಶವನ್ನು ದುಷ್ಟರಿಂದ  ರಕ್ಷಿಸುತ್ತಾನೆ ಎಂಬುದನ್ನು ಈ ಪಾತ್ರದ ಮೂಲಕ ತೋರಿಸಲು ಹೊರಟಿದ್ದಾರೆ ನಿರ್ದೇಶಕರು.

news18-kannada
Updated:October 5, 2020, 8:34 AM IST
ನಿವೃತ್ತ ಕ್ಯಾಪ್ಟನ್ ಆಗಿ ರಾಘವೇಂದ್ರ ರಾಜ್​ಕುಮಾರ್; ದುಷ್ಟ ಶಕ್ತಿಗಳ ವಿರುದ್ಧ ಹೋರಾಡಲಿದ್ದಾರೆ ರಾಘಣ್ಣ
ರಾಜತಂತ್ರ ಟೀಂ
  • Share this:
ರಾಘವೇಂದ್ರ ರಾಜ್‍ಕುಮಾರ್ ನಟನೆಯಲ್ಲಿ 'ರಾಜತಂತ್ರ' ಎಂಬ ಸಿನಿಮಾ ಸೆಟ್ಟೇರಿದೆ. ದುಷ್ಟ ಶಕ್ತಿಗಳನ್ನು ತನ್ನ ಬುದ್ಧಿಶಕ್ತಿ ಮತ್ತು ತಂತ್ರಗಾರಿಕೆಯಿಂದ ಮಣಿಸುವ ನಿವೃತ್ತ ಕ್ಯಾಪ್ಟನ್ ಆಗಿ ರಾಘವೇಂದ್ರ ರಾಜ್‍ಕುಮಾರ್ ಅವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ರಾಘವೇಂದ್ರ ರಾಜ್‍ಕುಮಾರ್ ಅಮ್ಮನಮನೆ ಚಿತ್ರದ ಅಭಿನಯಕ್ಕಾಗಿ ಶ್ರೇಷ್ಠ ನಟ ಪ್ರಶಸ್ತಿ ಪಡೆದಿದ್ದರು.  ಈ ಚಿತ್ರಕ್ಕೆ  ಛಾಯಾಗ್ರಾಹಕರಾಗಿದ್ದ ಪಿ.ವಿ.ಆರ್.ಸ್ವಾಮಿ ಈಗ ಕ್ಯಾಮರಾ ಹಿಡಿಯುವ ಜೊತೆಗೆ ಇದೇ ಮೊದಲಬಾರಿಗೆ ನಿರ್ದೇಶಕನ ಸ್ಥಾನವನ್ನು ಅಲಂಕರಿಸಿದ್ದಾರೆ. ಹಿರಿಯನಟ ರಾಘವೇಂದ್ರ ರಾಜ್‍ಕುಮಾರ್ ಅವರ ಜೊತೆಗೆ ಹಿರಿಯ ಕಲಾವಿದರಾದ ದೊಡ್ಡಣ್ಣ, ಭವ್ಯ, ಶ್ರೀನಿವಾಸಮೂರ್ತಿ, ಶಂಕರ್‍ಅಶ್ವಥ್, ರಂಜನ್‍ಹಾಸನ್, ಮುನಿರಾಜು, ನೀನಾಸಂ ಅಶ್ವಥ್ ಹೀಗೆ ಹಲವಾರು ಪ್ರಮುಖ ಕಲಾವಿದರು ಈ ಚಿತ್ರದಲ್ಲಿ  ಅಭಿನಯಿಸುತ್ತಿದ್ದಾರೆ.

ನಿವೃತ್ತ ಮಿಲಿಟರಿ ಕ್ಯಾಪ್ಟನ್, ಆಗಿ ರಾಘವೇಂದ್ರ ರಾಜ್ ಕುಮಾರ್ ಅಭಿನಯಿಸುತ್ತಿದ್ದಾರೆ. ಹೊರಗಿನಿಂದ ಬರುವ ಶತ್ರುಗಳಿಂದ ದೇಶವನ್ನು ರಕ್ಷಿಸುತ್ತಿದ್ದ ಆತ, ದೇಶದ ಒಳಗೆ ಬಂದಾಗ ಯಾವರೀತಿ ಸಮಾಜ, ದೇಶವನ್ನು ದುಷ್ಟರಿಂದ  ರಕ್ಷಿಸುತ್ತಾನೆ ಎಂಬುದನ್ನು ಈ ಪಾತ್ರದ ಮೂಲಕ ತೋರಿಸಲು ಹೊರಟಿದ್ದಾರೆ ನಿರ್ದೇಶಕರು.ಅಂದಹಾಗೆ ರಾಘವೇಂದ್ರ ರಾಜ್ ಕುಮರ್ ಇದೇ ಮೊದಲಬಾರಿಗೆ ಇಂತದ್ದೊಂದು ಪಾತ್ರ ಮಾಡುತ್ತಿರುವುದು ವಿಶೇಷ. ಇಲ್ಲಿ ಕ್ಯಾಪ್ಟನ್ ರಾಜನೂ ಹೌದು, ರಾಮನೂ ಹೌದು, ಸೈನ್ಯದಿಂದ ಹೊರಬಂದ ಮೇಲೂ ತನ್ನ ಕರ್ತವ್ಯ ಮುಗಿದಿಲ್ಲವೆಂದುಕೊಂಡು ಜವಾಬ್ದಾರಿ ನಿಭಾಯಿಸುವ ವ್ಯಕ್ತಿ. ಇಲ್ಲಿ ಕೆಲಸ ಮಾಡುವುದು ತಂತ್ರವೋ ಮಂತ್ರವೋ ಅನ್ನೋದು ಗೊತ್ತಾಗಬೇಕೆಂದರೆ ಸಿನಿಮಾ ನೋಡಬೇಕಂತೆ.

ಹಿರಿಯ ಸಾಹಿತಿ ಜೆ.ಎಂ. ಪ್ರಹ್ಲಾದ್ ಅವರು ಈ ಚಿತ್ರದ ಕತೆ, ಚಿತ್ರಕತೆ, ಸಂಭಾಷಣೆ ಹಾಗೂ ಸಾಹಿತ್ಯ ರಚಿಸಿದ್ದಾರೆ. ಫೈಟ್ಸ್, ಸಾಂಗ್ಸ್ ಎಲ್ಲಾ ಇರುವ ಕಮರ್ಷಿಯಲ್ ಸಿನಿಮಾ ರಾಜತಂತ್ರ. ಇದೇ ಸೋಮವಾರದಿಂದ ಶೂಟಿಂಗ್ ಆರಂಭಿಸಿ ಬೆಂಗಳೂರು, ನೆಲಮಂಗಲ ಸುತ್ತಮುತ್ತ 15 ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಸಲಾಗುತ್ತದೆ.ಈ ಚಿತ್ರದ ಹಾಡುಗಳಿಗೆ ಶ್ರೀಸುರೇಶ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರದಲ್ಲಿ ಒಂದು ಮಾಸ್ ಹಾಗೂ ಎರಡು ಬಿಟ್ ಸಾಂಗ್ ಇರಲಿದೆಯಂತೆ. ಎನ್.ನಾಗೇಶ್ ಅವರ ಸಂಕಲನ, ವೈಲೆಂಟ್ ವೇಲು-ರಾಮ್‍ದೇವ್ ಅವರ ಸಾಹಸ ಸಂಯೋಜನೆ ಈ ಚಿತ್ರಕ್ಕಿದೆ.
Published by: Rajesh Duggumane
First published: October 5, 2020, 8:34 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories