Rajatantra: ಹೊಸ ವರ್ಷಕ್ಕೆ ರಿಲೀಸ್​ ಆಗಲಿರುವ ಮೊದಲ ಕನ್ನಡದ ಸಿನಿಮಾ ರಾಜತಂತ್ರ..!

Raghavendra Rajkumar: ಹೊಸ ವರ್ಷದ ಆಗಮನಕ್ಕೆ ಸಿದ್ಧತೆ ನಡೆದಿದೆ. ಇದರ ಜೊತೆಗೆ ಹೊಸ ವರ್ಷದಲ್ಲಿ ಪ್ರೇಕ್ಷಕರನ್ನು ರಂಜಿಸಲು ಸಾಲು ಸಾಲು ಸಿನಿಮಾಗಳು ಸಿದ್ಧವಾಗಿವೆ. ಹೀಗಿರುವಾಗಲೇ ರಾಘವೇಂದ್ರ ರಾಜ್​ಕುಮಾರ್ ಅಭಿನಯದ ರಾಜತಂತ್ರ ನಾಳೆ ರಿಲೀಸ್​ ಆಗಲಿದೆ.

ರಾಜತಂತ್ರ ಸಿನಿಮಾದಲ್ಲಿ ರಾಘವೇಂದ್ರ ರಾಜ್​ಕುಮಾರ್​

ರಾಜತಂತ್ರ ಸಿನಿಮಾದಲ್ಲಿ ರಾಘವೇಂದ್ರ ರಾಜ್​ಕುಮಾರ್​

  • Share this:
ರಾಘವೇಂದ್ರ ರಾಜ್‍ಕುಮಾರ್ ನಟನೆಯಲ್ಲಿ ಮೂಡಿ ಬಂದಿರುವ ಸಿನಿಮಾ 'ರಾಜತಂತ್ರ'. ದುಷ್ಟ ಶಕ್ತಿಗಳನ್ನು ತನ್ನ ಬುದ್ಧಿಶಕ್ತಿ ಮತ್ತು ತಂತ್ರಗಾರಿಕೆಯಿಂದ ಮಣಿಸುವ ನಿವೃತ್ತ ಕ್ಯಾಪ್ಟನ್ ಆಗಿ ರಾಘವೇಂದ್ರ ರಾಜ್‍ಕುಮಾರ್ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಘವೇಂದ್ರ ರಾಜ್‍ಕುಮಾರ್ ಅಮ್ಮನಮನೆ ಚಿತ್ರದ ಅಭಿನಯಕ್ಕಾಗಿ ಶ್ರೇಷ್ಠ ನಟ ಪ್ರಶಸ್ತಿ ಪಡೆದಿದ್ದರು. ಈ ಚಿತ್ರಕ್ಕೆ ಛಾಯಾಗ್ರಾಹಕರಾಗಿದ್ದ ಪಿ.ವಿ.ಆರ್.ಸ್ವಾಮಿ ಈಗ ಕ್ಯಾಮರಾ ಹಿಡಿಯುವ ಜೊತೆಗೆ ಇದೇ ಮೊದಲ ಬಾರಿಗೆ ನಿರ್ದೇಶಕನ ಸ್ಥಾನವನ್ನು ಅಲಂಕರಿಸಿದ್ದಾರೆ. ಹಿರಿಯನಟ ರಾಘವೇಂದ್ರ ರಾಜ್‍ಕುಮಾರ್ ಅವರ ಜೊತೆಗೆ ಹಿರಿಯ ಕಲಾವಿದರಾದ ದೊಡ್ಡಣ್ಣ, ಭವ್ಯ, ಶ್ರೀನಿವಾಸಮೂರ್ತಿ, ಶಂಕರ್​ ಅಶ್ವತ್ಥ್​, ರಂಜನ್‍ ಹಾಸನ್, ಮುನಿರಾಜು, ನೀನಾಸಂ ಅಶ್ವತ್ಥ್​ ಹೀಗೆ ಹಲವಾರು ಪ್ರಮುಖ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾ ನಾಳೆ ಅಂದರೆ ಹೊಸ ವರ್ಷದಂದೇ ರಿಲೀಸ್​ ಆಗಲಿದೆ. ಹೊಸ ವರ್ಷದಂದು ಬಿಡುಗೆಯಾಗಲಿರುವ ಮೊದಲ ಕನ್ನಡ ಸಿನಿಮಾ ಇದಾಗಿದೆ. 

ಹೊಸ ವರ್ಷದ ಆಗಮನಕ್ಕೆ ಸಿದ್ಧತೆ ನಡೆದಿದೆ. ಇದರ ಜೊತೆಗೆ ಹೊಸ ವರ್ಷದಲ್ಲಿ ಪ್ರೇಕ್ಷಕರನ್ನು ರಂಜಿಸಲು ಸಾಲು ಸಾಲು ಸಿನಿಮಾಗಳು ಸಿದ್ಧವಾಗಿವೆ. ಹೀಗಿರುವಾಗಲೇ ರಾಘವೇಂದ್ರ ರಾಜ್​ಕುಮಾರ್ ಅಭಿನಯದ ರಾಜತಂತ್ರ ನಾಳೆ ರಿಲೀಸ್​ ಆಗಲಿದೆ. ಸಿನಿಮಾದ ಬಿಡುಗಡೆ ಬಗ್ಗೆ ಪುನೀತ್ ಹಾಗೂ ಶಿವಣ್ಣ ಒಂದಿಷ್ಟು ಮಾತನಾಡಿದ್ದಾರೆ.

ನಿವೃತ್ತ ಮಿಲಿಟರಿ ಕ್ಯಾಪ್ಟನ್, ಆಗಿ ರಾಘವೇಂದ್ರ ರಾಜ್ ಕುಮಾರ್ ಅಭಿನಯಿಸುತ್ತಿದ್ದಾರೆ. ಹೊರಗಿನಿಂದ ಬರುವ ಶತ್ರುಗಳಿಂದ ದೇಶವನ್ನು ರಕ್ಷಿಸುತ್ತಿದ್ದ ಆತ, ದೇಶದ ಒಳಗೆ ಬಂದಾಗ ಯಾವರೀತಿ ಸಮಾಜ, ದೇಶವನ್ನು ದುಷ್ಟರಿಂದ ರಕ್ಷಿಸುತ್ತಾನೆ ಎಂಬುದನ್ನು ಈ ಪಾತ್ರದ ಮೂಲಕ ತೋರಿಸಲು ಹೊರಟಿದ್ದಾರೆ ನಿರ್ದೇಶಕರು.
ಅನಾರೋಗ್ಯದಿಂದ ಚೇತರಿಕೊಂಡು ಈಗ ಮತ್ತೆ ಸಿನಿಮಾಗಳಲ್ಲಿ ಅಭಿನಯಿಸಲು ಆರಂಭಿಸಿದ್ದಾರೆ ರಾಘಣ್ಣ. ಅಂದಹಾಗೆ, ರಾಘವೇಂದ್ರ ರಾಜ್ ಕುಮರ್ ಇದೇ ಮೊದಲಬಾರಿಗೆ ಇಂತದ್ದೊಂದು ಪಾತ್ರ ಮಾಡುತ್ತಿರುವುದು ವಿಶೇಷ. ಇಲ್ಲಿ ಕ್ಯಾಪ್ಟನ್ ರಾಜನೂ ಹೌದು, ರಾಮನೂ ಹೌದು, ಸೈನ್ಯದಿಂದ ಹೊರಬಂದ ಮೇಲೂ ತನ್ನ ಕರ್ತವ್ಯ ಮುಗಿದಿಲ್ಲವೆಂದುಕೊಂಡು ಜವಾಬ್ದಾರಿ ನಿಭಾಯಿಸುವ ವ್ಯಕ್ತಿ. ಇಲ್ಲಿ ಕೆಲಸ ಮಾಡುವುದು ತಂತ್ರವೋ... ಮಂತ್ರವೋ... ಅನ್ನೋದು ತಿಳಿಯಬೇಕೆಂದರೆ ಸಿನಿಮಾ ನೋಡಬೇಕಂತೆ.

ಇದನ್ನೂ ಓದಿ: Pogaru: ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾದ ತೆಲುಗು ಟೀಸರ್​ ನಾಳೆ ರಿಲೀಸ್​ ಆಗಲಿದೆ..!

ಹಿರಿಯ ಸಾಹಿತಿ ಜೆ.ಎಂ. ಪ್ರಹ್ಲಾದ್ ಅವರು ಈ ಚಿತ್ರದ ಕತೆ, ಚಿತ್ರಕತೆ, ಸಂಭಾಷಣೆ ಹಾಗೂ ಸಾಹಿತ್ಯ ರಚಿಸಿದ್ದಾರೆ. ಫೈಟ್ಸ್, ಸಾಂಗ್ಸ್ ಎಲ್ಲಾ ಇರುವ ಕಮರ್ಷಿಯಲ್ ಸಿನಿಮಾ ರಾಜತಂತ್ರ. ಈ ಚಿತ್ರದ ಹಾಡುಗಳಿಗೆ ಶ್ರೀಸುರೇಶ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರದಲ್ಲಿ ಒಂದು ಮಾಸ್ ಹಾಗೂ ಎರಡು ಬೀಟ್​ ಸಾಂಗ್ ಇರಲಿದೆಯಂತೆ. ಎನ್.ನಾಗೇಶ್ ಅವರ ಸಂಕಲನ, ವೈಲೆಂಟ್ ವೇಲು-ರಾಮ್‍ದೇವ್ ಅವರ ಸಾಹಸ ಸಂಯೋಜನೆ ಈ ಚಿತ್ರಕ್ಕಿದೆ.
Published by:Anitha E
First published: