• Home
  • »
  • News
  • »
  • entertainment
  • »
  • Jaggesh: ಕನ್ನಡದಲ್ಲಿ ರಾಯರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಟ ಜಗ್ಗೇಶ್

Jaggesh: ಕನ್ನಡದಲ್ಲಿ ರಾಯರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಟ ಜಗ್ಗೇಶ್

ಜಗ್ಗೇಶ್

ಜಗ್ಗೇಶ್

ನಟ ನವರಸ ನಾಯಕ ಜಗ್ಗೇಶ್ ಅವರು ಇಂದು ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ ಜಗ್ಗೇಶ್​ ಅವರು ಕನ್ನಡದಲ್ಲಿ ರಾಘವೇಂದ್ರ ರಾಯರ ಹೆಸರಿನಲ್ಲಿ ವಿಶೇಷವಾಗಿ ಪ್ರಮಾಣ ವಚನ ಸ್ವೀಕರಿಸಿದರು.

  • Share this:

ಕಳೆದ ತಿಂಗಳು ನಡೆದ ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Election) ಸ್ಯಾಂಡಲ್​ವುಡ್​ನ (Sandalwood) ಹಿರಿಯ ನಟ ನವರಸ ನಾಯಕ ಜಗ್ಗೇಶ್​ ಅವರು (Actor Jaggesh) ಬಿಜೆಪಿಯಿಂದ (BJP) ಸ್ಪರ್ಧಿಸಿ, ಗೆದ್ದು (Win) ಬೀಗಿದ್ದರು. ಇಂದು ನಟ ಜಗ್ಗೇಶ್ ಅವರು ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ ನಡೆದ ನೂತನ ಸದಸ್ಯರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಜಗ್ಗೇಶ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಅಲ್ಲದೇ ಇವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಲ್ಲದೇ ರಾಘವೇಂದ್ರ ರಾಯರ ಹೆಸರಿನಲ್ಲಿ ವಿಶೇಷವಾಗಿ ಪ್ರಮಾಣ ವಚನ ಸ್ವೀಕಾರಿಸಿದರು. ಸದ್ಯ ಜಗ್ಗೇಶ್ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಅಲ್ಲದೇ ಸ್ವತಃ ನಟ ಜಗ್ಗೇಶ್​ ಅವರೇ ತಮ್ಮ ಟ್ವಿಟರ್​ ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.


ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ ಜಗ್ಗೇಶ್:


ಹೌದು, ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ  ನಟ ನವರಸ ನಾಯಕ ಜಗ್ಗೇಶ್ ಅವರು ಇಂದು ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ ಜಗ್ಗೇಶ್​ ಅವರು ಕನ್ನಡದಲ್ಲಿ ರಾಘವೇಂದ್ರ ರಾಯರ ಹೆಸರಿನಲ್ಲಿ ವಿಶೇಷವಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಎಲ್ಲರ ಗಮನ ಸೆಳೆದರು. ಅಲ್ಲದೇ ಪ್ರಮಾಣ ವಚನ ಸ್ವೀಕರಿಸಿದ ವಿಡಿಯೋವನ್ನು ಜಗ್ಗೇಶ್​ ಅವರು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು, ‘ರಾಜ್ಯಸಭೆಯಲ್ಲಿ ಶ್ರದ್ಧೆಯಿಂದ ಪ್ರಮಾಣವಚನ ಸಿರಿಗನ್ನಡದಲ್ಲಿ ರಾಯರ ಹೆಸರಲ್ಲಿ ಸ್ವೀಕರಿಸಿದ ನನ್ನ ಬದುಕಿನ ಶ್ರೇಷ್ಠಕ್ಷಣ‘ ಎಂದು ಬರೆದುಕೊಂಡಿದ್ದಾರೆ.ಜಗ್ಗೇಶ್​ ಪ್ರಮಾಣ ವಚನ:


ಜಗ್ಗೇಶ್​ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ‘ಜಗ್ಗೇಶ್ ಎಂಬ ಹೆಸರಿನವನಾದ ನಾನು, ರಾಜ್ಯಸಭೆಯ ಸದಸ್ಯನಾಗಿ ಚುನಾಯಿತನವನಾಗಿ ಕಾನೂನು ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನಕ್ಕೆ ಸತ್ಯ, ಶ್ರದ್ಧೆಯನ್ನು ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆ. ಭಾರತದ ಸಾರ್ವಭೌಮತ್ವವವನ್ನು ಮತ್ತು ಅಂಖಂಡತೆಯನ್ನು ಎತ್ತಿಹಿಡಿಯುವ ಮೂಲಕ ನನ್ನ ಕರ್ತವ್ಯವವನ್ನು ಶ್ರದ್ಧಾಪೂರ್ವಕವಾಗಿ ಮಾಡುವುದಾಗಿ ರಾಘವೇಂದ್ರ ಸ್ವಾಮಿಗಳ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ‘ ಎಂದು ಪ್ರಮಾಣ ವಚನ ಸ್ವೀಕರಿಸಿದರು.


ಇದನ್ನೂ ಓದಿ: Raghavendra Stores: ರಾಘವೇಂದ್ರ ಸ್ಟೋರ್ಸ್​ನ ಅಡುಗೆ ಸವಿಯಲು ಸಿದ್ಧರಾಗಿ, ಚಿತ್ರದ ರಿಲೀಸ್​ ಡೇಟ್​ ಅನೌನ್ಸ್


ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಜಗ್ಗಣ್ಣ:


ಸದ್ಯ, ನವರಸ ನಾಯಕ ಜಗ್ಗೇಶ್ ಅವರು ಸಾಲು ಸಾಲು ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಜಗ್ಗೇಶ್ ಅಭಿನಯದ ರಾಘವೇಂದ್ರ ಸ್ಟೋರ್ಸ್, ತೋತಾಪುರಿ ಸೇರಿದಂತೆ ಅನೇಕ ಚಿತ್ರಗಳಲ್ಲಿ ಅವರು ಸಖತ್ ಬ್ಯುಸಿಯಾಗಿದ್ದಾರೆ. ಇದಲ್ಲದೇ ಅವರು, ಗುರುಪ್ರಸಾದ್ ನಿರ್ದೇಶನದ 'ರಂಗನಾಯಕ' ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ರಾಘವೇಂದ್ರ ಸ್ಟೋರ್ಸ್ ಟ್ರೈಲರ್​ ಸಖತ್ ಕಾಮಿಡಿಯಿಂದ ಕೂಡಿದ್ದು, ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಯನ್ನು ಮೂಡಿಸಿದೆ. ರಾಘವೇಂದ್ರ ಸ್ಟೋರ್ ಚಿತ್ರವು ಇದೇ ವರ್ಷ ಆಗಷ್ಟ್ 5ರಂದು ಅಂದರೆ ವರಮಹಾಲಕ್ಷ್ಮಿ ಹಬ್ಬದಂದು ಬಿಡುಗಡೆಯಾಗುತ್ತಿರುವುದಾಗಿ ಚಿತ್ರತಂಡ ತಿಳಿಸಿದೆ.


ಇದನ್ನೂ ಓದಿ: Jaggesh: ಐ ತೇರಿ ಲಕಡಿ ಪಕಡಿ ಜುಮ್ಮ! ಜಗ್ಗೇಶಣ್ಣನ​ ಯೋಗ ಸೂಪರೋ ಸೂಪರ್


ರಾಘವೇಂದ್ರ ಸ್ಟೋರ್ಸ್ ಚಿತ್ರದ ಟೀಸರ್​ ನಲ್ಲಿ ಜಗ್ಗೇಶ್ ಅಡುಗೆ ಭಟ್ಟನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಈ ಪಾತ್ರದ ಚಿಕ್ಕ ಪರಿಚಯವನ್ನು ಮಾಡಲಾಗಿದ್ದು, ಚಿತ್ರ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಅಲ್ಲದೇ ರಾಘವೇಂದ್ರ ಸ್ಟೋರ್ಸ್ ಸಿನಿಮಾದಲ್ಲಿ 40 ವರ್ಷ ದಾಟಿದರೂ ಮದುವೆಯಾಗದ ಅಡುಗೆ ಭಟ್ಟರ ಪಾತ್ರದಲ್ಲಿ ಜಗ್ಗೇಶ್ ಕಚಗುಳಿ ಇಟ್ಟಿದ್ದಾರೆ.

Published by:shrikrishna bhat
First published: