Kabza Movie Poster: ಉಪೇಂದ್ರ ಹುಟ್ಟುಹಬ್ಬಕ್ಕೆ ಬಿಗ್ ಗಿಫ್ಟ್: ರಾಮ್ ಗೋಪಾಲ್ ವರ್ಮಾರಿಂದ ಥೀಮ್ ಪೋಸ್ಟರ್ ರಿಲೀಸ್

ಈ ಹಿಂದೆ “ಐ ಲವ್‌ ಯು’ ಚಿತ್ರವನ್ನು ಕನ್ನಡ ಹಾಗೂ ತೆಲುಗಿನಲ್ಲಷ್ಟೇ ಬಿಡುಗಡೆ ಮಾಡಿದ್ದ ಚಂದ್ರು, ಈ ಬಾರಿ ಬರೋಬ್ಬರಿ ಏಳು ಭಾಷೆಗಳಲ್ಲಿ ತಮ್ಮ ಹೊಸ ಸಿನಿಮಾವನ್ನು ಬಿಡುಗಡೆ ಮಾಡಲಿದ್ದಾರೆ.

ಕಬ್ಜ

ಕಬ್ಜ

  • Share this:
ಸೂಪರ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸುತ್ತಿರುವ, ಆರ್ ಚಂದ್ರು ನಿರ್ದೇಶನದ, ಪ್ಯಾನ್ ಇಂಡಿಯಾ ಸಿನಿಮಾ 'ಕಬ್ಜ'. ಭಾರತದ ಬಹು ನಿರೀಕ್ಷಿತ ಈ ಸಿನಿಮಾ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕುತ್ತಿದೆ. ಸೆಪ್ಟೆಂಬರ್ 18ರಂದು ಉಪೇಂದ್ರ ಅವರ ಹುಟ್ಟುಹಬ್ಬದ ಸಡಗರಕ್ಕೆ ಕಬ್ಜ ಚಿತ್ರತಂಡ ಥೀಮ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಹುಟ್ಟುಹಬ್ಬದ ಉಡುಗೊರೆ ನೀಡುತ್ತಿದೆ. ಥೀಮ್ ಪೋಸ್ಟರ್ ಅನ್ನು ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ಸೆಪ್ಟೆಂಬರ್ 17ರ ಸಂಜೆ 5 ಕ್ಕೆ ಬಿಡುಗಡೆ ಮಾಡಲಿದ್ದಾರೆ.

ಬೆಂಗಳೂರು, ಹೈದರಾಬಾದ್ ಮುಂತಾದ ಕಡೆ ನಿರ್ಮಿಸಲಾಗಿದ್ದ ಅದ್ದೂರಿ ಸೆಟ್​ಗಳಲ್ಲಿ ಕಬ್ಜ ಚಿತ್ರೀಕರಣ ನಡೆಸಲಾಗಿದ್ದು, ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಉಪೇಂದ್ರ ಅವರು ಈ ಚಿತ್ರಕ್ಕಾಗಿ ಪ್ರತಿದಿನ ನಾಲ್ಕು ಘಂಟೆಗೂ ಹೆಚ್ಚು ಕಾಲ ವ್ಯಾಯಾಮ ಮಾಡಿ, ಚಿತ್ರೀಕರಣಕ್ಕೆ ಬೇಕಾದ ಹಾಗೆ ಸಜ್ಜಾಗಿ, ಬಹಳ ಸುಂದರವಾಗಿ ಕಾಣಿಸಿಕೊಂಡಿದ್ದಾರಂತೆ.

Vishnuvardhan Memorial: ಕಡೆಗೂ ಆರಂಭವಾಯ್ತು ವಿಷ್ಣುವರ್ಧನ್​ ಸ್ಮಾರಕ ನಿರ್ಮಾಣ ಕಾರ್ಯ : ಆನ್​ಲೈನ್ ಮೂಲಕ ಚಾಲನೆ ಕೊಟ್ಟ ಮುಖ್ಯಮಂತ್ರಿ ಯಡಿಯೂರಪ್ಪ..!

ಈ ಹಿಂದೆ “ಐ ಲವ್‌ ಯು’ ಚಿತ್ರವನ್ನು ಕನ್ನಡ ಹಾಗೂ ತೆಲುಗಿನಲ್ಲಷ್ಟೇ ಬಿಡುಗಡೆ ಮಾಡಿದ್ದ ಚಂದ್ರು, ಈ ಬಾರಿ ಬರೋಬ್ಬರಿ ಏಳು ಭಾಷೆಗಳಲ್ಲಿ ತಮ್ಮ ಹೊಸ ಸಿನಿಮಾವನ್ನು ಬಿಡುಗಡೆ ಮಾಡಲಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ಬೆಂಗಾಲಿ, ಮರಾಠಿ ಭಾಷೆಗಳಲ್ಲಿ ಈ ಚಿತ್ರವನ್ನು ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಈ ಮೂಲಕ ಚಂದ್ರು ಪ್ಯಾನ್‌ ಇಂಡಿಯಾದತ್ತ ಮುಖ ಮಾಡಿದ್ದಾರೆ.

ಎಂ.ಟಿ.ಬಿ ನಾಗರಾಜ್ ಅರ್ಪಿಸುವ, ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್ ಚಂದ್ರು ಅವರೇ ನಿರ್ಮಿಸುತ್ತಿರುವ ಕಬ್ಜ ಚಿತ್ರಕ್ಕೆ ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ನೀಡುತ್ತಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ ಹಾಗೂ ಲೈನ್ ಪ್ರೊಡ್ಯೂಸರ್ ಆಗಿ ರಾಜಶೇಖರ್ ಕಾರ್ಯನಿರ್ವಹಿಸುತ್ತಿದ್ದಾರೆ

ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ವಿಕ್ರಂಮೋರ್,ವಿಜಯ್ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ಕಾಮರಾಜನ್(ಐ ಮೂವಿ ಖ್ಯಾತಿ), ಜಗಪತಿ ಬಾಬು, ರಾಹುಲ್ ಜಗತಪ್, ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ರಾಹುಲ್ ದೇವ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Radhika Pandit: ರಾಧಿಕಾ ಪಂಡಿತ್​ಗೆ ತಿಳಿಯದಂತೆ ಅವರ ವಿಡಿಯೋ ಮಾಡಿದ ಯಶ್​-ಆಯ್ರಾ..! ​

ಇನ್ನೂ ಉಪೇಂದ್ರ ಅವರ ವಿಚಾರಕ್ಕೆ ಬರುವುದಾದರೆ ನಿನ್ನೆಯಷ್ಟೆ ತಮ್ಮ ಟ್ವಿಟ್ಟರ್​ನಲ್ಲಿ ವಿಡಿಯೋ ಒಂದನ್ನು ಬಿಟ್ಟು ಅಭಿಮಾನಿಗಳಿಗೆ ಸಖತ್​ ಸರ್ಪ್ರೈಸ್ ಕೊಟ್ಟಿದ್ದರು. ಅಭಿಮಾನಿಗಳ ಆಸೆ ಈಡೇರಿಸುವ ಸಲುವಾಗಿ ಉಪ್ಪಿ ಮತ್ತೆ ನಿರ್ದೇಶಕರ ಕ್ಯಾಪ್​ ತೊಡುತ್ತೇನೆ ಎಂದಿದ್ದರು. ಜೊತೆಗೆ ಇದೇ ತಿಂಗಳ 18ರಂದು ನಾನು ಬರ್ತ್​ಡೇ ಆಚರಿಸಿಕೊಳ್ಳುತ್ತಿಲ್ಲ. ಕೊರೋನಾ ಇರುವ ಕಾರಣದಿಂದ ಗುಂಪು ಸೇರದೆ ಅಭಿಮಾನಿಗಳು ಇರುವ ಕಡೆಯಿಂದಲೇ ವಿಶ್​ ಮಾಡಿ ಎಂದು ಮನವಿ ಮಾಡಿದ್ದರು.
Published by:Vinay Bhat
First published: