ಕನ್ನಡ ಚಿತ್ರರಂಗದಿಂದ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣಗೆ ನಿಷೇಧ?

Rashmika Mandanna: ಕಿರಿಕ್ ಪಾರ್ಟಿ ಮೂಲಕ ಕೆರಿಯರ್ ಕಂಡುಕೊಂಡ ರಶ್ಮಿಕಾ ಇದೀಗ ಉತ್ತುಂಗಕ್ಕೆ ಏರುತ್ತಿದ್ದಂತೆ ಭಾಷೆಯ ಬಗ್ಗೆ ಅಸಡ್ಡೆ ತೋರಿದ್ದಾರೆ. ಹೀಗಾಗಿ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಕನ್ನಡ ಪರ ಹೋರಾಟಗಾರರು ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ.

zahir | news18
Updated:July 23, 2019, 9:58 PM IST
ಕನ್ನಡ ಚಿತ್ರರಂಗದಿಂದ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣಗೆ ನಿಷೇಧ?
Rashmika Mandanna
  • News18
  • Last Updated: July 23, 2019, 9:58 PM IST
  • Share this:
ಕಿರಿಕ್ ಹುಡುಗಿ ರಶ್ಮಿಕಾ ಮಂದಣ್ಣ ಅವರನ್ನು ಕನ್ನಡ ಚಿತ್ರರಂಗದಿಂದ ನಿಷೇಧಿಸಬೇಕೆಂಬ ಕೂಗು ಜೋರಾಗಿ ಕೇಳಿ ಬರುತ್ತಿದೆ. ಕೊಡಗಿನ ಬೆಡಗಿ ಸಂದರ್ಶನವೊಂದರಲ್ಲಿ ನೀಡಿದ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಕರ್ನಾಟಕ ಸಂಘಟನೆಗಳ ಒಕ್ಕೂಟ ಕನ್ನಡ ವಾಣಿಜ್ಯ ಮಂಡಳಿಯ ಮೆಟ್ಟಿಲೇರಿದ್ದು, ಕಿರಿಕ್ ಸಾನ್ವಿಗೆ ಸ್ಯಾಂಡಲ್​ವುಡ್​ನಲ್ಲಿ ನಿಷೇಧ ಹೇರುವಂತೆ ಒತ್ತಾಯಿಸಿದ್ದಾರೆ.

ತಮಿಳಿನ ಪ್ರಮುಖ ವೆಬ್​ಸೈಟ್​ವೊಂದಕ್ಕೆ ಇತ್ತೀಚೆಗೆ ಸಂದರ್ಶನ ನೀಡಿದ ರಶ್ಮಿಕಾ ಮಂದಣ್ಣ, ತನಗೆ ಕನ್ನಡ ಸರಿಯಾಗಿ ಬರುವುದಿಲ್ಲ. ಕನ್ನಡದಲ್ಲೂ ಡಬ್ಬಿಂಗ್ ಮಾಡುವುದು ಕಷ್ಟ ಎಂದಿದ್ದರು. ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ನಟಿ ಪರರಾಜ್ಯದಲ್ಲಿ ಮಾತೃಭಾಷೆ ಬರುವುದಿಲ್ಲ ಎಂದಿರುವುದು ಸರಿಯಲ್ಲ. ಅವರಿಗೆ ನೆಲೆ ನೀಡಿರುವುದು ಕನ್ನಡ ಚಿತ್ರರಂಗ.

'ಕಿರಿಕ್ ಪಾರ್ಟಿ' ಮೂಲಕ ಕೆರಿಯರ್ ಕಂಡುಕೊಂಡ ರಶ್ಮಿಕಾ ಇದೀಗ ಉತ್ತುಂಗಕ್ಕೆ ಏರುತ್ತಿದ್ದಂತೆ ಭಾಷೆಯ ಬಗ್ಗೆ ಅಸಡ್ಡೆ ತೋರಿದ್ದಾರೆ. ಹೀಗಾಗಿ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಕನ್ನಡ ಪರ ಹೋರಾಟಗಾರರು ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಈ ಕುರಿತು ರಶ್ಮಿಕಾ ಮಂದಣ್ಣ ಅವರನ್ನು ಕರೆದು ಮಾತುಕತೆ ನಡೆಸುವುದಾಗಿ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ತಿಳಿಸಿದ್ದಾರೆ.

ರಶ್ಮಿಕಾ ಅಭಿನಯದ 'ಡಿಯರ್ ಕಾಮ್ರೇಡ್' ಎಂಬ ತೆಲುಗು ಸಿನಿಮಾ ಕನ್ನಡ ಸೇರಿದಂತೆ ಮೂರು ಭಾಷೆಯಲ್ಲಿ ಡಬ್ ಆಗಿದ್ದು, ಚಿತ್ರದ ಹಾಡುಗಳಿಗೆ ಮತ್ತು ಟ್ರೈಲರ್​ಗೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದವು. ಇದೀಗ ನಟಿಯ ಮಾತು  ಚಿತ್ರಕ್ಕೆ ತಿರುಗುಬಾಣವಾಗುವ ಸಾಧ್ಯತೆಯಿದೆ. ಇನ್ನು ಸೋಷಿಯಲ್ ಮೀಡಿಯಾದಲ್ಲಿ ರಶ್ಮಿಕಾ ಕಾಣಿಸಿಕೊಂಡಿರುವ ಚಿತ್ರಗಳನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಬಿಡಬಾರದೆಂಬ ಮಾತುಗಳು ಕೂಡ ಕೇಳಿ ಬಂದಿವೆ.

ಸದ್ಯ ಸಾಲು ಸಾಲು ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ಅವಕಾಶಗಿಟ್ಟಿಸಿಕೊಳ್ಳುತ್ತಿರುವ ರಶ್ಮಿಕಾ ಕನ್ನಡದ ಪೊಗರು ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಧ್ರುವ ಸರ್ಜಾ ಅಭಿನಯದ ಈ ಚಿತ್ರದಿಂದ ರಶ್ಮಿಕಾ ಅವರನ್ನು ಕೈ ಬಿಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

First published:July 23, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...