HOME » NEWS » Entertainment » RHEA CHAKRABORTY APPEARS BEFORE ENFORCEMENT DIRECTORATE RMD

ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದ ರಿಯಾ ಚಕ್ರವರ್ತಿ

ವಿಚಾರಣೆ ಸಮಯವನ್ನು ಮುಂದೂಡುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಬಳಿ ರಿಯಾ ಪರ ವಕೀಲರು ಮನವಿ ಮಾಡಿಕೊಂಡಿದ್ದರು. ಆದರೆ, ಮನವಿ ತಿರಸ್ಕಾರ ಗೊಂಡಿತ್ತು. ಈ ಹಿನ್ನೆಲೆಯಲ್ಲಿ ರಿಯಾ ಇಂದು ಬೆಳಗ್ಗೆ 11:30ಕ್ಕೆ ವಿಚಾರಣೆಗೆ ಹಾಜರಾಗಿದ್ದಾರೆ.

news18-kannada
Updated:August 7, 2020, 2:02 PM IST
ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದ ರಿಯಾ ಚಕ್ರವರ್ತಿ
ರಿಯಾ ಚಕ್ರವರ್ತಿ
  • Share this:
ನಟ ಸುಶಾಂತ್​ ಸಿಂಗ್​ ರಜಪೂತ್​ ಖಾತೆಯಿಂದ 15 ಕೋಟಿ ರೂಪಾಯಿಗೂ ಅಧಿಕ ಹಣ ಅವರ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಖಾತೆಗೆ ವರ್ಗಾವಣೆ ಆಗಿದೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ರಿಯಾ ಇಂದು ಜಾರಿ ನಿರ್ದೇಶನಾಲಯ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದಾರೆ.

ವಿಚಾರಣೆ ಸಮಯವನ್ನು ಮುಂದೂಡುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಬಳಿ ರಿಯಾ ಪರ ವಕೀಲರು ಮನವಿ ಮಾಡಿಕೊಂಡಿದ್ದರು. ಆದರೆ, ಮನವಿ ತಿರಸ್ಕಾರ ಗೊಂಡಿತ್ತು. ಈ ಹಿನ್ನೆಲೆಯಲ್ಲಿ ರಿಯಾ ಇಂದು ಬೆಳಗ್ಗೆ 11:30ಕ್ಕೆ ವಿಚಾರಣೆಗೆ ಹಾಜರಾಗಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಿಯಾ ವಕೀಲ, "ಸುಪ್ರೀಂಕೋರ್ಟ್​ನಲ್ಲಿ ರಿಯಾ ಅವರ ಅರ್ಜಿ ವಿಚಾರಣೆ ನಡೆಯುತ್ತಿದೆ, ಈ ಕಾರಣಕ್ಕೆ ಇಂದಿನ ಜಾರಿ ನಿರ್ದೇಶನಾಲಯದ ಭೇಟಿಯನ್ನು ಮುಂದೂಡುವಂತೆ ನಾವು ಕೇಳಿ ಕೊಂಡಿದ್ದೆವು. ಆದರೆ, ವಿಚಾರಣೆ ಮುಂದೂಡಲು ಅವರು ನಿರಾಕರಿಸಿದ ಹಿನ್ನೆಲೆಯಲ್ಲಿ ರಿಯಾ ಜಾರಿ ನಿರ್ದೇಶನಾಲಯ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದಾರೆ," ಎಂದಿದ್ದಾರೆ.

ಕಳೆದ ಒಂದು ವರ್ಷದಿಂದ ನನ್ನ ಪುತ್ರನ ಬ್ಯಾಂಕ್ ಅಕೌಂಟ್​ನಿಂದ ಸುಮಾರು 17 ಕೋಟಿ ರೂಪಾಯಿ ಡೆಬಿಟ್​ ಆಗಿದೆ. ಅದರಲ್ಲಿ 15 ಕೋಟಿ ರೂಪಾಯಿಯಷ್ಟು ಹಣ, ನನ್ನ ಮಗನಿಗೆ ಸಂಬಂಧವಿಲ್ಲದ ಅನಾಮಿಕ ಅಕೌಂಟ್​ಗಳಿಗೆ ಜಮೆಯಾಗಿದೆ. ಆತನ ಕ್ರೆಡಿಟ್ ಕಾರ್ಡ್ ಮತ್ತು ಬ್ಯಾಂಕ್ ಅಕೌಂಟ್​ಗಳಲ್ಲಿನ ಹಣ ಯಾರು ಬಳಸಿದ್ದಾರೆ? ರಿಯಾ ಆತನ ಹಣವನ್ನು ತಾನು ದುರುಪಯೋಗಪಡಿಸಿಕೊಂಡಿರುವ ಬಗ್ಗೆಯೂ ತನಿಖೆಯಾಗಬೇಕು ಎಂದು ಸುಶಾಂತ್​ ತಂದೆ ದೂರಿದ್ದರು.

ಈ 15 ಕೋಟಿ ಹಣ ರಿಯಾ ಖಾತೆಗೆ ವರ್ಗಾವಣೆ ಆಗಿದೆ ಎನ್ನಲಾಗಿದೆ. ಇದನ್ನು ಆಧರಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದರು.
Published by: Rajesh Duggumane
First published: August 7, 2020, 2:02 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories