ಕನ್ನಡದ ಕಾಂತಾರ ಸಿನಿಮಾ (Kantara Movie) ದೇಶದೆಲ್ಲೆಡೆ ಭರ್ಜರಿ ಪ್ರದರ್ಶನ ಕಂಡಿದೆ. ತಮಿಳು, ತೆಲುಗು, ಹಿಂದಿಯಲ್ಲಿ ಕಾಂತಾರ ಸಿನಿಮಾ ತೆರೆಕಂಡು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿದೆ. ಬಾಲಿವುಡ್, (Bollywood) ಟಾಲಿವುಡ್, ಕಾಲಿವುಡ್ ನಲ್ಲೂ ಕಾಂತಾರ ಸಿನಿಮಾ ಕಮಾಲ್ ಮಾಡಿದೆ. ಇಡೀ ದೇಶವೇ ಕನ್ನಡ ಸಿನಿಮಾದತ್ತ ತಿರುಗಿ ನೋಡುವಂತೆ ಮಾಡಿದ ಕಾಂತಾರ ಸಿನಿಮಾ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಬಗ್ಗೆ ಅನೇಕರು ಮೆಚ್ಚುಗೆ ಮಾತಾಡಿದ್ದಾರೆ. ನಟ ರಿಷಬ್ ಶೆಟ್ಟಿಯ ಅಭಿನಯಕ್ಕೆ ನಟ-ನಟಿಯರೇ ಫಿದಾ ಆಗಿದ್ದಾರೆ. ಇದೀಗ ಕಾಂತಾರ ಸಿನಿಮಾ ಹಿಂದಿಯಲ್ಲಿ 100 ದಿನ ಪೂರೈಸಿದೆ.
ಬಾಲಿವುಡ್ನಲ್ಲಿ ಕಾಂತಾರ ಕಮಾಲ್
ಕನ್ನಡದಲ್ಲಿ ಕಾಂತಾರ ಸಿನಿಮಾ ಸೂಪರ್ ಹಿಟ್ ಆಗ್ತಿದ್ದಂತೆ ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲಿ ಸಿನಿಮಾವನ್ನು ರಿಲೀಸ್ ಮಾಡಲಾಯ್ತು. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ ಹಿಂದಿ ಅವತರಣಿಕೆ ಸಿನಿಮಾ ನೂರು ದಿನಗಳನ್ನ ಪೂರೈಸಿದ್ದು, ಬಾಲಿವುಡ್ ಸಿನಿಪ್ರೇಕ್ಷಕರ ಮನಗೆಲ್ಲುವಲ್ಲಿ ಕಾಂತಾರ ಸಿನಿಮಾ ಯಶಸ್ವಿಯಾಗಿದೆ. ಈ ಬಗ್ಗೆ ರಿಷಬ್ ಮತ್ತು ಹೊಂಬಾಳೆ ಸಂಸ್ಥೆ ಸಂತಸ ಹಂಚಿಕೊಂಡಿದ್ದಾರೆ.
We are ecstatic to share that #Kantara in Hindi, depicting the traditional folklore, has completed 100 days. We express our deep gratitude to the audience for their unwavering support. #KantaraHindi100Days @shetty_rishab #VijayKiragandur @hombalefilms @AAFilmsIndia pic.twitter.com/z3KaRqpNyg
— Hombale Films (@hombalefilms) January 22, 2023
View this post on Instagram
ಬರಲಿದೆ ಕಾಂತಾರ-2 ಸಿನಿಮಾ
ಕಾಂತಾರ ಸಿನಿಮಾ ಸೂಪರ್ ಹಿಟ್ ಆದ ಬಳಿಕ ಕಾಂತಾರ 2 ಸಿನಿಮಾ ಬಗ್ಗೆ ನಿರ್ಮಾಪಕರು ತಿಳಿಸಿದ್ದಾರೆ. ಕಾಂತಾರ 2 ಚಿತ್ರದಲ್ಲಿ ಯಾವ ರೀತಿಯ ಚಿತ್ರಕಥೆ ಇರಬಹುದು ಎಂಬ ಕುತೂಹಲ ಎಲ್ಲರನ್ನೂ ಕಾಡುತ್ತಿದೆ. ಸಂದರ್ಶನವೊಂದರಲ್ಲಿ ನಟ ದಿಗಂತ್, ರಿಷಬ್ ಸದ್ಯ ಕಾಂತಾರ 2 ಕಥೆ ಬರೆಯುವಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದರು. ಇದು ಕಾಂತಾರ 2 ಊಹಾಪೋಹಗಳಿಗೆ ಪುಷ್ಠಿ ನೀಡಿತ್ತು.
ಕಾಂತಾರ 2 ಸಿನಿಮಾಗಾಗಿ ದೈವದ ಅನುಮತಿ ಕೇಳಿದ್ರಾ ರಿಷಬ್?
ಕಾಂತಾರ 2 ಸಿನಿಮಾ ಮಾಡುವ ಬಗ್ಗೆ ಚಿತ್ರತಂಡ ದೈವದ ಅನುಮತಿಯನ್ನೂ ಕೇಳಿದ್ರು. ಅದಾದ ಬಳಿಕ ಕಾಂತಾರ 2 ಬರುವುದು ಪಕ್ಕಾ ಎಂದೇ ಎಲ್ಲರೂ ಭಾವಿಸಿದರು. ಇದರ ಬೆನ್ನಲ್ಲೇ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಕಾಂತಾರ 2 ಚಿತ್ರದ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಚಿತ್ರದ ಚಿತ್ರೀಕರಣ ಯಾವಾಗ ಆರಂಭಗೊಳ್ಳಲಿದೆ ಹಾಗೂ ರಿಲೀಸ್ ಯಾವಾಗ ಎಂಬ ಮಾಹಿತಿಯನ್ನು ನಿರ್ಮಾಪಕರು ಬಿಚ್ಚಿಟ್ಟಿದ್ದಾರೆ.
ರಿಷಬ್ ಶೆಟ್ಟಿ ಸದ್ಯ ಚಿತ್ರದ ಕತೆ ಬರೆಯುತ್ತಿದ್ದಾರೆ. ತನ್ನ ಸಹ ಬರಹಗಾರರ ಜತೆ ಕರ್ನಾಟಕ ಕರಾವಳಿ ಕಾಡಿನ ಒಳಗೆ ಹೋಗಿ ಸಂಶೋಧನೆ ಮಾಡುತ್ತಿದ್ದಾರೆ. ಮಳೆಗಾಲದಲ್ಲಿ ಕೆಲ ಭಾಗವನ್ನು ಚಿತ್ರೀಕರಿಸಬೇಕಾಗಿದೆ. ಆದ ಕಾರಣ ಜೂನ್ ತಿಂಗಳಿನಲ್ಲಿ ಚಿತ್ರೀಕರಣ ಪ್ರಾರಂಭಿಸುವ ಪ್ಲಾನ್ ಮಾಡಿದ್ದಾರೆ. ಈ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ 2024ರ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಬಿಡುಗಡೆ ಮಾಡುವ ಯೋಜನೆ ಇದೆ ಎಂದು ವಿಜಯ್ ಕಿರಗಂದೂರು ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ