Darshan: ನನ್ನ ದರ್ಶನ್​ ನಡುವಿನ ಸ್ನೇಹ ಇನ್ನೂ ಚೆನ್ನಾಗಿದೆ: ನಿರ್ಮಾಪಕ ಉಮಾಪತಿ

ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ನಿರ್ಮಾಪಕ ಉಮಾಪತಿ, ನನಗೆ ಯಾರ ಬಗ್ಗೆಯೂ ಅನುಮಾನ ಇಲ್ಲ. ಈ ವಂಚನೆ ಪ್ರಕರಣ ಬಯಲಿಗೆ ಎಳೆದಿದ್ದೇ ನಾನು. ನಾನು ಪ್ರತಿ ವಿಚಾರವನ್ನೂ ದರ್ಶನ್ ಅವರಿಗೆ ತಿಳಿಸಿದ್ದೇನೆ. ಶೀಘ್ರವೇ ಈ ಪ್ರಕರಣಕ್ಕೆ ತೆರೆ ಬೀಳಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ನಿರ್ಮಾಪಕ ಉಮಾಪತಿ ಹಾಗೂ ನಟ ದರ್ಶನ್​

ನಿರ್ಮಾಪಕ ಉಮಾಪತಿ ಹಾಗೂ ನಟ ದರ್ಶನ್​

  • Share this:
ದರ್ಶನ್ ಅವರ ಹೆಸರು ಬಳಿಸಿಕೊಂಡು 25 ಕೋಟಿ ವಂಚನೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಬರ್ಟ್​ ನಿರ್ಮಾಪಕ ಉಮಾಪತಿ ಅವರು ಇಂದು ಹೇಳಿಕೆ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ದರ್ಶನ್ ಹಾಗೂ ಉಮಾಪತಿ ಅವರ ನಡುವಿನ ಸ್ನೇಹದಲ್ಲಿ ಬಿರುಕು ಮೂಡಿದೆ ಎಂದೂ ಹೇಳಲಾಗುತ್ತಿದೆ. ಆದರೆ, ಈ ಎಲ್ಲ ಅಂತೆಕಂತೆಗೆ ಈಗ ಉಮಾಪತಿ ಅವರೆ ಪರದೆ ಎಳೆದಿದ್ದಾರೆ. ಹೌದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಾನು ಹಾಗೂ ದರ್ಶನ್ ಅವರು ಮೊದಲಿನಿಂತೆಯೇ ಇದ್ದೇವೆ. ಇವತ್ತೂ ಸಹ ಕರೆ ಮಾಡಿ ಮಾತನಾಡಿದೆ. ನಮ್ಮಿಬ್ಬರ ನಡುವಿನ ಸ್ನೇಹ ಚೆನ್ನಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. 

ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ನಿರ್ಮಾಪಕ ಉಮಾಪತಿ, ನನಗೆ ಯಾರ ಬಗ್ಗೆಯೂ ಅನುಮಾನ ಇಲ್ಲ. ಈ ವಂಚನೆ ಪ್ರಕರಣ ಬಯಲಿಗೆ ಎಳೆದಿದ್ದೇ ನಾನು. ನಾನು ಪ್ರತಿ ವಿಚಾರವನ್ನೂ ದರ್ಶನ್ ಅವರಿಗೆ ತಿಳಿಸಿದ್ದೇನೆ. ಶೀಘ್ರವೇ ಈ ಪ್ರಕರಣಕ್ಕೆ ತೆರೆ ಬೀಳಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Roberrt, Roberrt pre release event, Hubballi, sandalwood, abhishek ambareesh, darshan, bad manners, Bad Manners movie muhurtha, Duniya Suri and Abishek Ambareesh movie, Kannada movie Bad Manners, Bad Manners shooting, Bad Manners cast, ಬ್ಯಾಡ್ ಮ್ಯಾನರ್ಸ್ ಮುಹೂರ್ತ, ಕನ್ನಡ ಸಿನಿಮಾ ಬ್ಯಾಡ್ ಮ್ಯಾನರ್ಸ್, ದುನಿಯಾ ಸೂರಿ ಮತ್ತು ಅಭಿಷೇಕ್ ಅಂಬರೀಶ್, Abhishek Ambareesh shared a stage with his senior Darshan in Roberrt pre release event at Hubballi ae
ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಲ್ಲಿ ಮಾಧ್ಯಮವರೊಂದಿಗೆ ಮಾತನಾಡಿರುವ ದರ್ಶನ್​, ನಾನು ಉಮಾಪತಿ ಮೇಲೆ ಆರೋಪ ಮಾಡುವುದಿಲ್ಲ. ಆದರೆ ಕಳೆದ ಕೆಲ ದಿನಗಳಿಂದ ಕೇವಲ ಉಮಾಪತಿ ಅವರ ಹೆಸರೇ ಕೇಳಿ ಬರುತ್ತಿದೆ. ಆರೋಪಿ ಅರುಣ ಕುಮಾರಿ ಸಹ ಉಮಾಪತಿ ಅವರ ಹೆಸರನ್ನೇ ಹೇಳುತ್ತಿದ್ದಾರೆ. ಅದಕ್ಕೆ ಉಮಾಪತಿ ಅವರ ಕಡೆಯಿಂದಲೂ ದೂರು ಕೊಡಿಸಿದ್ದೇವೆ. ನಾನು ಸಹ ರಾಜರಾಜೇಶ್ವರಿ ನಗರದಲ್ಲಿ ಪ್ರಕರಣ ದಾಖಲಿಸಿದ್ದೇನೆ. ಯಾರಾದರೂ ಸರಿ ನಾನು ಬಿಡುವ ಪ್ರಶ್ನೆಯೇ ಇಲ್ಲ. ಅದು ಹರ್ಷ ಆಗಲಿ, ರಾಕೇಶ್ ಆಗಲಿ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

ಏನಿದು ಪ್ರಕರಣ

ಮೈಸೂರು ನಗರದ ಹೆಬ್ಬಾಳದಲ್ಲಿ ಇರುವ 'ಮೈಸೂರು ಯೂನಿಯನ್ ಕ್ಲಬ್ ನಡೆಸುತ್ತಿರುವ ಹರ್ಷ ಮೆಲಂತಾ ಎನ್ನುವ ವ್ಯಕ್ತಿಯನ್ನು ಜೂನ್ 16 ನೇ ತಾರೀಕು ಅರುಣ್ ಕುಮಾರಿ ಎನ್ನುವವರು ಭೇಟಿ ಮಾಡಿ "ನಾನು ಬ್ಯಾಂಕ್ ವ್ಯವಸ್ಥಾಪಕಿ ಎಂದು ಪರಿಚಯಿಸಿಕೊಂಡಿದ್ದಾರೆ. 'ಬೆಂಗಳೂರಿನ ಸೌತ್ ಎಂಡ್ ಸರ್ಕಲ್ಲಿನಲ್ಲಿ ಇರುವ ಕೆನರಾ ಬ್ಯಾಂಕಿನಲ್ಲಿ 25 ಕೋಟಿ ಸಾಲಕ್ಕೆ ನೀವು ಅರ್ಜಿ ಸಲ್ಲಿಸಿದ್ದು, ಅದರಲ್ಲಿ ಚಲನಚಿತ್ರ ನಟ ದರ್ಶನ್ ಅವರ ಅಸ್ತಿಯ ನಕಲಿ ದಾಖಲೆ ಒದಗಿಸಿದ್ದು ಅಲ್ಲದೆ ಅವರ ಸಹಿಯನ್ನೂ ಸಹ ನಕಲು ಮಾಡಿ ಮೋಸ ಮಾಡಿದ್ದೀರಿ ಎಂದು ಹೇಳಿ ಅವರಿಗೆ ಬ್ಲಾಕ್ ಮೇಲ್ ಮಾಡಿದ್ದಾರೆ. ಅಲ್ಲದೇ ಈ ವಿಷಯ ಹೊರಗೆ ಬಾರದಂತೆ ನೋಡಿಕೊಳ್ಳಲು 25 ಲಕ್ಷ ಹಣ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಇದಾದ ಮೇಲೆ ಈ ಮಹಿಳೆ ನಕಲಿ ಎಂಬುದು ಹರ್ಷ ಅವರಿಗೆ ಗೊತ್ತಾಗಿದೆ, ಅವರು ತಕ್ಷಣ ಜುಲೈ 3 ನೇ ತಾರೀಕು ದೂರು ದಾಖಲಿಸುತ್ತಾರೆ.

ಇದನ್ನೂ ಓದಿ: Richard Anthony: ದಾಖಲೆ ಬರೆದ ರಿಚರ್ಡ್​ ಆಂಟನಿ: ಅಭಿಮಾನಿಗಳಿಗಾಗಿ ಪುಟ್ಟ ಪತ್ರ ಬರೆದ ರಕ್ಷಿತ್ ಶೆಟ್ಟಿ..!

ಈ ವಿಚಾರಕ್ಕೆ ಸಂಬಂಧಿಸಿದಂತೆ ಹರ್ಷ ಅವರು ಜುಲೈ 3 ನೇ ತಾರೀಕು ಮೈಸೂರು ನಗರದ ಹೆಬ್ಬಾಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ದೂರು ಆಧರಿಸಿ, ಆಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಇದೇ ಮಹಿಳೆ ದರ್ಶನ್ ಅಭಿನಯದ ರಾಬರ್ಟ್​ ಚಿತ್ರದ ನಿರ್ಮಾಪಕ ಉಮಾಪತಿ ಅವರಿಗೂ ಕರೆ ಮಾಡಿ, ಹರ್ಷ ಎಂಬುವರು ದರ್ಶನ್​ ಅವರ ಆಸ್ತಿಯನ್ನು ಸಾಲಕ್ಕಾಗಿ ಬ್ಯಾಂಕಿಗೆ ಅಡ ಇಟ್ಟಿದ್ದಾರೆ ನಿಜವೇ ಎಂದು ಕೇಳಿದ್ದಾರೆ. ಇದರಿಂದ ಅನುಮಾನಗೊಂಡ ನಿರ್ಮಾಪಕ ಉಮಾಪತಿ ಅವರು ಕೂಡಲೇ ಬೆಂಗಳೂರಿನ ಪೊಲೀಸ್​ ಠಾಣೆಯಲ್ಲಿ ಜೂನ್​ 17 ರಂದು ಅರುಣಕುಮಾರಿ ಅವರ ಮೇಲೆ ದೂರು ದಾಖಲಿಸಿದ್ದಾರೆ. ಈ ನಿಟ್ಟಿನಲ್ಲಿ ನಟ ದರ್ಶನ್ ಅವರು ಮೈಸೂರಿನ ನರಸಿಂಹರಾಜ ಉಪವಿಭಾಗದ ಎಸಿಪಿ ಕಚೇರಿಗೆ ಭಾನುವಾರ ಭೇಟಿ ನೀಡಿದ್ದರು.

ಮೈಸೂರಿನ ನರಸಿಂಹರಾಜ ಉಪವಿಭಾಗದ ಎಸಿಪಿ ಕಚೇರಿಗೆ ಬಂದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಯಾರೇ ನನ್ನ ಹೆಸರನ್ನು ದುರುಪಯೋಗ ಪಡಿಸಿಕೊಂಡರು ಅವರ ರೆಕ್ಕೆಯನ್ನಲ್ಲ, ತಲೆಯನ್ನೆ ತೆಗೆಯುತ್ತೇನೆ ಎಂದು ದರ್ಶನ್ ಎಚ್ಚರಿಕೆ ನೀಡಿದ್ದರು.'ನೋಡಿ ನನಗೆ ಯಾರೂ ಬ್ಲಾಕ್ ಮೇಲ್ ಮಾಡಿಲ್ಲ, ಆದರೆ ನನ್ನ ಮೇಲೆ ಸುಮ್ಮನೆ ಗೂಬೆ ಕೂರಿಸುವ ಪ್ರಯತ್ನ ನಡೆದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಅನಂತರ ಏನಾಗುತ್ತದೆ ಎಂಬುದನ್ನು ನಿಮಗೆ ಸಂಪೂರ್ಣ ವಿವರ ಕೊಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: Cannes Film Festival: ಕೇವಲ ನೆಕ್ಲೆಸ್​ ಜೊತೆ ಟಾಪ್​ಲೆಸ್​ ಗೌನ್​ ತೊಟ್ಟು ಕೇನ್ಸ್​​ ಫಿಲಂ ಫೆಸ್ಟಿವಲ್​ಗೆ ಬಂದ ರೂಪದರ್ಶಿ

ಈ ಪ್ರಕರಣದ ರೂವಾರಿ ಆರೋಪಿ ಅರುಣಕುಮಾರಿ ಹಿಂದೆ ಯಾರಿದ್ದಾರೆ ಎಂಬುದನ್ನು ಬಯಲಿಗೆಳೆಯಬೇಕು. ಯಾಕೆ ಇಂತಹ ಕೆಲಸ ಮಾಡಿದ್ದಾರೆ ಎಂಬುದನ್ನು ಕಂಡು ಹಿಡಿಯಬೇಕು ಎಂದು ನಟ ದರ್ಶನ್ ಒತ್ತಾಯಿಸಿದ್ದಾರೆ.

ಮೈಸೂರು ಪೊಲೀಸರು ನಕಲಿ ಬ್ಯಾಂಕ್ ಅಧಿಕಾರಿ ಅರುಣಕುಮಾರಿ ಜೊತೆಗೆ, ಮಧುಕೇಶವ ಹಾಗೂ ನಂದೀಶ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.
Published by:Anitha E
First published: