ಸ್ಯಾಂಡಲ್ವುಡ್(Sandalwood)ನ ಲವ್ಲಿ ಕಪಲ್(Lovely Couple) ಅಂದರೆ ಅದರು ನಮ್ಮ ರಾಕಿಂಗ್ ಸ್ಟಾರ್ ಯಶ್(Rocking Star Yash) ಹಾಗೂ ರಾಧಿಕಾ ಪಂಡಿತ್(Radhika Pandith). ಇಂದು ಚಂದನವನದ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ 5ನೇ ವರ್ಷದ ಮದುವೆ ವಾರ್ಷಿಕೋತ್ಸವ(Marriage Anniversary) ಸಂಭ್ರಮದಲ್ಲಿದ್ದಾರೆ. ಮದುವೆ ವಾರ್ಷಿಕೋತ್ಸವದ ಹಿನ್ನೆಲೆ ರಾಧಿಕಾ ಅವರು ಇನ್ಸ್ಟಾಗ್ರಾಮ್ ನಲ್ಲಿ ಬ್ಯೂ ಟ್ಯಾಪ್ಲಿನ್(ಬ್ಯೂ ಟ್ಯಾಪ್ಲಿನ್) ಬರೆದ ಸಾಲುಗಳನ್ನು ಬರೆದು , ಯಶ್ ಜೊತೆಗಿನ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಈ ಸಾಲಿನಲ್ಲಿ, ‘ಯಾರಾದರೂ ನಿಮ್ಮನ್ನು ನೀವು ಉತ್ತಮಗೊಳ್ಳುವಂತೆ ಮಾಡುವ ಪ್ರೀತಿಯಲ್ಲಿ ಮತ್ತು ಜೀವನದಲ್ಲಿ ನಿಮ್ಮನ್ನು ಪ್ರೇರೇಪಿಸುವ, ಪ್ರೋತ್ಸಾಹಿಸುವ, ನೀವು ನಿರ್ಲಕ್ಷಿಸುವ ಕನಸುಗಳು ಮತ್ತು ಗುರಿಗಳ ಕಡೆಗೆ ನಿಮ್ಮನ್ನು ಮತ್ತೆ ತಳ್ಳುವವರು, ಯಾವುದೇ ಅಪೇಕ್ಷೆಗಳಿಲ್ಲದೆ ನಿಸ್ವಾರ್ಥವಾಗಿ ಅವರ ಸಮಯವನ್ನು ನಿಮಗಾಗಿ ತ್ಯಾಗ ಮಾಡುವವರು ನಿಮ್ಮ ಜೀವನದಲ್ಲಿ ಇದ್ದರೆ, ನೀವು ಧೈರ್ಯಶಾಲಿ, ಸುಸಜ್ಜಿತ ಸಂತೋಷದ ವ್ಯಕ್ತಿಯಾಗಲು ಸಹಾಯ ಮಾಡುತ್ತೆ. ಅಂತಹ ಸಂಬಂಧ ಪವಿತ್ರವಾದದ್ದು, ಅಂತಹ ಪ್ರೀತಿಯನ್ನು ನೀವು ಹಿಡಿದುಕೊಳ್ಳಿ’ ಎಂದು ಬರೆದು ಯಶ್ಗೆ ಮದುವೆ ವಾರ್ಷಿಕೋತ್ಸವದ ವಿಶ್(Wish) ಮಾಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ವಿಶ್ ಮಾಡುತ್ತಿದ್ದಾರೆ.
ಬೀಚ್ನಲ್ಲಿ ಕೈ ಹಿಡಿದುಕೊಂಡು ಕೂತಿರುವ ಫೋಟೋ ವೈರಲ್!
ಇನ್ಸ್ಟಾದಲ್ಲಿ ರಾಧಿಕಾ, ಯಶ್ ಜೊತೆಗೆ ಬೀಚ್ ನಲ್ಲಿ ಕೈಹಿಡಿದುಕೊಂಡು ಕುಳಿತುಕೊಂಡಿರುವ ಫೋಟೋವನ್ನು ಶೇರ್ ಮಾಡಿದ್ದು, ಬ್ಯೂ ಟ್ಯಾಪ್ಲಿನ್ ಬರೆದ ಸಾಲುಗಳನ್ನು ಯಶ್ ಗೆ ಅರ್ಪಿಸಿದ್ದಾರೆ. ಪ್ರೀತಿಸಿ ಮದುವೆಯಾಗಿದ್ದ ರಾಕಿಂಗ್ ಸ್ಟಾರ್ ಹಾಗೂ ರಾಧಿಕಾ ಮೊನ್ನೆ ತಮ್ಮ ಮುದ್ದಿನ ಮಗಳು ಐರಾ ಬರ್ತ್ಡೇ ಪಾರ್ಟಿಯನ್ನು ತಮ್ಮ ಮನೆಯಲ್ಲೇ ಆಚರಿಸಿದ್ದರು. ಈ ಫೋಟೋಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದವು. ಈ ಜೋಡಿ ಚಂದನವನದ ರಾಕಿಂಗ್ ಜೋಡಿಯಾಗಿದ್ದು, ಇವರ ಕುಟುಂಬ ಎಲ್ಲರಿಗೂ ಆಕರ್ಷಣೆಯ ಕೇಂದ್ರವಾಗಿರುತ್ತೆ. ಇವರ ಪ್ರತಿಯೊಂದು ಅಪ್ಡೇಟ್ ಗಳನ್ನು ಅಭಿಮಾನಿಗಳು ಕೇಳಲು ಕಾತುರದಿಂದ ಕಾಯುತ್ತಿರುತ್ತಾರೆ.
ಇದನ್ನು ಓದಿ : ಏನ್ ಖದರ್ ಲುಕ್ ಗುರೂ.. ಗಡ್ಡದಾರಿಗಳಿಗೆ ಯಶ್ ಅವರೇ ಬಾಸ್: ನ್ಯೂ ಗೆಟಪ್ ನೀವೇ ನೋಡಿ..
ರೀಲ್ನಲ್ಲೂ ಹಿಟ್, ರಿಯಲ್ ಲೈಫ್ನಲ್ಲೂ ಹಿಟ್!
ಈ ಜೋಡಿ ಸಿನಿಮಾದಲ್ಲಿಯೂ ಸೂಪರ್ ಹಿಟ್ ಆಗಿದ್ದು, ನಿಜ ಜೀವನದಲ್ಲಿಯೂ ಹಿಟ್. ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ದಶಕಗಳ ಕಾಲ ಪ್ರೀತಿಸಿ ಮದುವೆಯಾದ ಜೋಡಿ. ಈ ಜೋಡಿ ತೆರೆ ಮೇಲೆ ನಟಿಸಿ ಸೂಪರ್ ಹಿಟ್ ಆಗಿತ್ತು. ಡ್ರಾಮ, ಮಿಸ್ಟರ್ & ಮಿಸ್ಸಸ್ ರಾಮಾಚಾರ್, ಸಂತು ಸ್ಟ್ರೈಟ್ ಫಾರ್ವರ್ಡ್ ಸಿನಿಮಾಗಳಲ್ಲಿ ಇಬ್ಬರು ಒಟ್ಟಿಗೆ ನಟಿಸಿದ್ದರು. ಈ ಜೋಡಿ ಗೋವಾದಲ್ಲಿ ಮದುವೆಯಾಗಿತ್ತು. ಬಳಿಕ ಅಭಿಮಾನಿಗಳಿಗೋಸ್ಕರ ಬೆಂಗಳೂರು ಅರಮನೆ ಮೈದಾನದಲ್ಲಿ ರಿಸೆಪ್ಷನ್ ಮಾಡಿಕೊಂಡಿದ್ದರು. ಈ ಜೋಡಿಯನ್ನು ಕಂಡರೇ ಎಲ್ಲರಿಗೂ ಅಚ್ಚುಮೆಚ್ಚು. ಆದಷ್ಟು ಬೇಗ ಇಬ್ಬರೂ ಸಿನಿಮಾ ಮಾಡಿ ಅಂತ ಫ್ಯಾನ್ಸ್ ಮನವಿ ಮಾಡಿಕೊಳ್ಳುತ್ತಿದ್ದಾರೆ.
ಇದನ್ನು ಓದಿ :ನಿನ್ನ ಗುಂಗಲ್ಲೇ ನನ್ನೇ ಮರೆತೆ ನಾ ಎಂದ ಮೋಹಕ ತಾರೆ ರಮ್ಯಾ: ಯಾರಿಗೆ ಅಂತ ನೀವೇ ನೋಡಿ..
ರಾಧಿಕಾ ಪಂಡಿತ್ ಹಾಗೂ ಯಶ್ 2016ರ ಡಿಸೆಂಬರ್ 9 ರಂದು ವಿವಾಹವಾಗಿದ್ದು, ಇವರಿಗೆ ಇಬ್ಬರು ಮಕ್ಕಳಿದ್ದಾರೆ. 2018 ಡಿಸೆಂಬರ್ ನಲ್ಲಿ ಹೆಣ್ಣು ಮಗು ಜನಿಸಿದ್ದು, ಆ ಮಗುವಿಗೆ ‘ಐರಾ’ ಎಂದು ಹೆಸರಿಟ್ಟೊದ್ದಾರೆ. ನಂತರ 2019 ರಲ್ಲಿ ಗಂಡು ಮಗು ಜನಿಸಿದ್ದು, ಆ ಮಗುವಿಗೆ ‘ಯಥರ್ವ್’ ಎಂದು ಹೆಸರಿಟ್ಟಿದ್ದಾರೆ. ಈ ಸ್ಟಾರ್ ಜೋಡಿಗಳಂತೆ ಇವರ ಮಕ್ಕಳು ಸ್ಟಾರ್ ಆಗಿದ್ದು, ಇವರಿಬ್ಬರಿಗೂ ಅಭಿಮಾನಿ ಬಳಗವಿದೆ. ಸೋಷಿಯ್ ಮೀಡಿಯಾದಲ್ಲಿ ಯಶ್ ಮಕ್ಕಳು ಈಗಾಗಲೇ ಸೆಲೆಬ್ರಿಟಿ ಆಗಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ