ಭಾರತ ಚಿತ್ರರಂಗ ಕಂಡ ಮಹಾನ್ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಹುಟ್ಟುಹಬ್ಬವಿಂದು. ಅವರು ನಮ್ಮೊಂದಿಗೆ ಇಲ್ಲದಿದ್ದರೂ ಅವರು ಹಾಡಿರುವ ಹಾಡುಗಳ ಮೂಲಕ ಸಹಾ ನಮ್ಮ ಮನಸ್ಸಿನಲ್ಲಿ ಹಸಿರಾಗಿರುತ್ತಾರೆ. ಇಂದು ಅವರು ಜೀವಂತವಾಗಿರುತ್ತಿದ್ದರೆ 75 ವರ್ಷದವರಾಗಿರುತ್ತಿದ್ದರು. ಕಳೆದ ವರ್ಷ ಅನಾರೋಗ್ಯದಿಂದಾಗಿ ಅವರ ಕೊನೆಯುರಿರೆಳೆದರು. ಮಹಾನ್ ಗಾಯಕನ ಹುಟ್ಟುಹಬ್ಬಕ್ಕೆ ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಶುಭ ಕೋರುತ್ತಿದ್ದಾರೆ. ಕಳೆದ 50 ವರ್ಷಗಳಿಂದ ಅನೇಕ ಭಾಷೆಗಳಲ್ಲಿ ಹಾಡುವ ಮೂಲಕ ಹಾಗೂ ಕೆಲವು ಸಿನಿಮಾಗಳಲ್ಲಿ ನಟಿಸುತ್ತಾ ರಂಜಿಸಿದ್ದಾರೆ ಖ್ಯಾತ ಗಾಯಕ ಬಾಲಸುಬ್ರಹ್ಮಣ್ಯಂ. 16 ಭಾಷೆಗಳಲ್ಲಿ ಹಾಡುಗಳನ್ನು ಹಾಡಿರುವ ಬಾಲಸುಬ್ರಹ್ಮಣ್ಯಂ ಅವರ ಜನನವಾಗಿದ್ದು 1946ರ ಜೂನ್ 4 ರಂದು ಆಂಧ್ರಪ್ರದೇಶದ ಚಿತ್ತೂರಿನ ಕೊನೇಟಮ್ಮಪೇಟಾದಲ್ಲಿ.
ಹರಿಕಥೆ ಹೇಳುತ್ತಿದ್ದ ಇವರ ತಂದೆ ಎಸ್.ಪಿ.ಸಾಂಬಮೂರ್ತಿ ಅವರೇ ಇವರಿಗೆ ಪ್ರೇರಣೆಯಾಗಿದ್ದರಂತೆ. ಹಾಡುವುದನ್ನು, ಹಾರ್ಮೋನಿಯಂ ಹಾಗೂ ಕೊಳಲುನ್ನು ತಮ್ಮಷ್ಟಕ್ಕೆ ತಾವೇ ನುಡಿಸುತ್ತಾ ಸಂಗೀತ ಲೋಕಕ್ಕೆ ಕಾಲಿಟ್ಟವರು ಎಸ್ಪಿಬಿ. ನಂತರದಲ್ಲಿ ವಿದ್ಯಾರ್ಥಿಯಾಗಿ ಶಾಸ್ತ್ರೀಯ ಸಂಗೀತವನ್ನೂ ಅಭ್ಯಾಸ ಮಾಡಿದರು.
View this post on Instagram
All time favourite from this combo - SPB never forgotten 💔 pic.twitter.com/bMJwpJOWyF
— Salvinez VinzZ 🖤🔥🍺 (@salvinezz) June 2, 2021
ಆಗಲೇ ಹಿಂದಿ ಚಿತ್ರರಂಗದಲ್ಲೂ ತಮ್ಮದೇ ಆದ ಸ್ಥಾನ ಮಾಡಿಕೊಳ್ಳಲ ಪ್ರಯತ್ನಕ್ಕೆ ಕೈ ಹಾಕಿದ್ದರು. ನಂತರದಲ್ಲಿ ಸಲ್ಮಾನ್ ಖಾನ್ ಅವರ ಸಾಕಷ್ಟು ಚಿತ್ರಗಳಲ್ಲಿ ಅಂದರೆ, ಸಾಜನ್, ಮೈ ನೆ ಪ್ಯಾರ್ ಕಿಯಾ, ಲವ್, ಹಮ್ ಆಪ್ ಕೆ ಹೈ ಕೌನ್ಮುಂತಾದ ಚಿತ್ರಗಳಲ್ಲಿ ಹಾಡಿದ್ದಾರೆ.
ಇದನ್ನೂ ಓದಿ: Madhuri Dixit: ಮಾಧುರಿ ದೀಕ್ಷಿತ್ ತೊಟ್ಟಿರುವ ನೀಲಿ ಬಣ್ಣದ ಲೆಹೆಂಗಾ ಬೆಲೆ ಕೇಳಿದ್ರೆ ದಂಗಾಗ್ತೀರಿ..!
ಅಭಿನಯದ ವಿಷಯಕ್ಕೆ ಬಂದರೆ, ಬಾಲಸುಬ್ರಹ್ಮಣ್ಯಂ ಅವರು ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲೂ ತಮ್ಮದೇ ಆದ ಸ್ಥಾನ ಪಡೆದುಕೊಂಡಿದ್ದಾರೆ. ಹಲವಾರು ಧಾರವಾಹಿಗಳು ಹಾಗೂ ಕನ್ನಡ. ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ನಟಿಸಿದ್ದಾರೆ. ಮೊದಮೊದಲು ಅತಿಥಿ ಪಾತ್ರಗಳಲ್ಲಿ ನಟಿಸುತ್ತಿದ್ದವರು ನಂತರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಕೊಳ್ಳಲು ಆರಂಭಿಸಿದರು. ಕನ್ನಡದಲ್ಲಿ ಬಾಳೊಂದು ಚದುರಂಗ, ತಿರುಗು ಬಾಣ, ಮುದ್ದಿನ ಮಾವ ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಕಡೆಯದಾಗಿ 2018ರಲ್ಲಿ ತೆರೆಕಂಡ ದೇವ್ದಾಸ್ ತೆಲುಗು ಚಿತ್ರದಲ್ಲಿ ಅಭಿನಯಿದ್ದಾರೆ.
ಸಂಗೀತ ನಿರ್ದೇಶಕರಾಗಿ, ಹಲವಾರು ನಾಯಕರಿಗೆ ಮಾತುಗಾರರಾಗಿ, ನಟರಾಗಿ, ನಿರ್ಮಾಪಕರಾಗಿ ಕೂಡಾ ಬಾಲು ಚಿತ್ರರಂಗದಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ಹಾಸ್ಯ ಪಾತ್ರಗಳಿಗೆ ಹೇಳಿ ಮಾಡಿಸಿದಂತಹ ಶಾರೀರಿಕ ಭಾಷಾಭಿವ್ಯಕ್ತಿ ಅವರಲ್ಲಿರುವುದನ್ನು ಸುಲಭವಾಗಿ ಕಾಣಬಹುದಾಗಿದೆ.
ಸಂಗೀತ ಕ್ಷೇತ್ರದಲ್ಲಿ ಎಸ್ಪಿಬಿ ಸಾಧನೆ
ಕನ್ನಡದ ಸಾಹಿತಿ ಉಪೇಂದ್ರ ಕುಮಾರ್ ಅವರಿಗಾಗಿ 12 ಗಂಟೆಗಳಲ್ಲಿ ಎಸ್ಪಿಬಿ 21 ಕನ್ನಡ ಹಾಡುಗಳನ್ನು ಹಾಡಿ ರೆಕಾರ್ಡ್ ಮಾಡಿದ್ದರು. ಒಂದೇ ದಿನದಲ್ಲಿ ತಮಿಳು ಹಾಗೂ ತೆಲುಗಿನಲ್ಲಿ 19 ಹಾಡುಗಳನ್ನೂ ರೆಕಾರ್ಡ್ ಮಾಡಿದ್ದರು. ಅಂತೆಯೇ ಹಿಂದಿಯಲ್ಲಿ 16 ಹಾಡುಗಳನ್ನು ಧ್ವನಿ ಮುದ್ರಿಸಿದ್ದರಂತೆ. ಇದು ಎಸ್ ಪಿ ಬಿ ಅವರ ಸಾಮರ್ಥ್ಯ ಹಾಗೂ ಅವರಿಗಿದ್ದ ಬೇಡಿಕೆಗೆ ನಿದರ್ಶನ.
ವಿವಿಧ ಭಾಷೆಗಳಲ್ಲಿ 45 ಸಾವಿರಕ್ಕೂ ಹೆಚ್ಚು ಹಾಡಿರುವ ಗಾಯಕ ಬಾಲಸುಬ್ರಹ್ಮಣ್ಯಂ. ಅತಿ ಹೆಚ್ಚು ಹಾಡು ಹಾಡಿರುವ ಕಾರಣದಿಂದಲೇ ಅವರ ಹೆಸರು ಗಿನ್ನೆಸ್ ರೆಕಾರ್ಡ್ ಪುಸ್ತಕ ಸೇರಿದೆ. ವರ್ಷದಲ್ಲಿ 930 ಹಾಡುಗಳು ಅಂದರೆ, ದಿನಕ್ಕೆ ಅಂದಾಜು 3 ಹಾಡುಗಳು ಎಂದರೂ 2018ರ ಹೊತ್ತಿಗೆ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಇಷ್ಟೇ ಅಲ್ಲದೆ ಹಲವಾರು ಖಾಸಗಿ ಆಲ್ಬಂಗಳೂ ಇವರ ಖಾತೆಯಲ್ಲಿವೆ.
ಎಪಿಬಿ ಪಡೆದ ಪ್ರಶಸ್ತಿಗಳ ವಿವಿರ
ಎಸ್ಪಿಬಿ ನಾಲ್ಕು ಭಾಷೆಗಳಲ್ಲಿ 6 ರಾಷ್ಟ್ರ ಪ್ರಶಸ್ತಿ ಪಡೆದ ಕೆಲವೇ ಕೆಲವು ಗಾಯಕರಲ್ಲಿ ಒಬ್ಬರು. ತೆಲುಗಿನ ಸಾಗರ ಸಂಗಮಂ, ರುದ್ರವೀಣಾ ಹಾಗೂ ಶಂಕರಾಭರಣಂ, ತಮಿಳಿನ ಮಿನ್ಸಾರೆ ಕನವು, ಕನ್ನಡದ ಸಂಗೀತ ಸಾಗರ ಪಂಚಾಕ್ಷರಿ ಗವಾಯಿ ಸಿನಿಮಾಗಳಿಗೆ ಒಟ್ಟು 6 ರಾಷ್ಟ್ರೀಯ ಪ್ರಶಸ್ತರಿ ಪಡೆದಿದ್ದಾರೆ. ಉಳಿದಂತೆ ಬಾಲಿವುಡ್ನ ಫಿಲ್ಮ್ಫೇರ್ ಪ್ರಶಸ್ತಿ, 25 ನಂದಿ ಅವಾರ್ಡ್, ಪದ್ಮಶ್ರೀ (2001), ಪದ್ಮಭೂಷಣ(2011) ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಇದನ್ನೂ ಓದಿ: Suhana Khan: ವೈರಲ್ ಆಗುತ್ತಿವೆ ಸುಹಾನಾ ಖಾನ್ರ ಲೆಟೆಸ್ಟ್ ಫೋಟೋಗಳು..!
ದಕ್ಷಿಣ ಭಾರತದ ಕನ್ನಡ, ತೆಲುಗು ಹಾಗೂ ತಮಿಳು ಚಿತ್ರರಂಗಗಳಲ್ಲಿ ಅವರದ್ದು ಅದ್ವಿತೀಯ ಸಾಧನೆ. ಗಾಯನವಷ್ಟೇ ಅಲ್ಲದೆ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲೂ ಸಾಧನೆ ಮಾಡಿದ್ದಾರೆ. ಇವರ ನಿರ್ವಹಣೆಯಲ್ಲಿ ಮೂಡಿ ಬರುತ್ತಿದ್ದ ‘ಎದೆ ತುಂಬಿ ಹಾಡಿದೆನು’ ಕಾರ್ಯಕ್ರಮವಂತೂ ಅಭಿಮಾನಿಗಳ ಮನಸ್ಸಿನಲ್ಲಿ ಹಸಿರಾಗಿಯೇ ಉಳಿದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ