Chethan Arrest: ಉರಿಗೌಡ ನಂಜೇಗೌಡ ಬಗ್ಗೆ ಟ್ವೀಟ್! ಬೆಂಗಳೂರು ಪೊಲೀಸರಿಂದ ನಟ ಚೇತನ್ ಬಂಧನ

ಸ್ಯಾಂಡಲ್​ವುಡ್ ನಟ ಚೇತನ್ ಅರೆಸ್ಟ್

ಸ್ಯಾಂಡಲ್​ವುಡ್ ನಟ ಚೇತನ್ ಅರೆಸ್ಟ್

ಉರಿಗೌಡ (Urigowda) ನಂಜೇಗೌಡ (Nanjegowda) ಸಿನಿಮಾ ವಿಚಾರವಾಗಿ ನಟ ಆಕ್ಷೇಪಾರ್ಹ ಟ್ವೀಟ್ (Tweet) ಮಾಡಿದ ಬೆನ್ನಲ್ಲೇ ಚಟ ಚೇತನ್ ಅವರನ್ನು ಬೆಂಗಳೂರು ಪೊಲೀಸರು ಅರೆಸ್ಟ್ (Arrest) ಮಾಡಿದ್ದಾರೆ.

  • News18 Kannada
  • 4-MIN READ
  • Last Updated :
  • Bangalore, India
  • Share this:

ಸ್ಯಾಂಡಲ್​ವುಡ್ ನಟ, ಸಾಮಾಜಿಕ ಹೋರಾಟಗಾರ ಚೇತನ್ (Chethan) ಅವರನ್ನು ಬೆಂಗಳೂರು ಪೊಲೀಸರು (Bengaluru Police) ಬಂಧಿಸಿದ್ದಾರೆ. ಉರಿಗೌಡ (Urigowda) ನಂಜೇಗೌಡ (Nanjegowda) ಸಿನಿಮಾ ವಿಚಾರವಾಗಿ ನಟ ಆಕ್ಷೇಪಾರ್ಹ ಟ್ವೀಟ್ (Tweet) ಮಾಡಿದ ಬೆನ್ನಲ್ಲೇ ಅವರನ್ನು ಬೆಂಗಳೂರು ಪೊಲೀಸರು ಅರೆಸ್ಟ್ (Arrest) ಮಾಡಿದ್ದಾರೆ. ಈ ಕುರಿತು ಶಿವಕುಮಾರ್ ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ (Police Station) ದೂರು ದಾಖಲಿಸಿದ್ದರು. ಈ ದೂರಿನ ಮೇರೆಗೆ ಶೇಷಾದ್ರಿಪುರಂ ಪೊಲೀಸರು ನಟನನ್ನು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.


ಚೇತನ್ ಫೇಸ್​ಬುಕ್ ಮತ್ತು ಟ್ವಿಟರ್ ಅಲ್ಲಿ ಉರೀಗೌಡ ನಂಜೇಗೌಡ ಬಗ್ಗೆ ಪೋಸ್ಟ್ ಮಾಡಿದ್ದರು. ಅದರಲ್ಲಿ ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ, ರಾಮನು ರಾವಣನನ್ನು ಸೋಲಿಸಿ ಅಯೋಧ್ಯಗೆ ಹಿಂದಿರುಗಿದ. ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎನ್ನುವುದು. ಇದು ಒಂದು ಸುಳ್ಳು ಎಂದಿದ್ದಾರೆ.


1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮ ಭೂಮಿ ಕುರಿತು ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎನ್ನುವುದು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ’ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.


Sandalwood actor chethan arrested by bengaluru police after his tweet
ಸ್ಯಾಂಡಲ್​ವುಡ್ ನಟ ಚೇತನ್ ಅರೆಸ್ಟ್


ಈ ಪೋಸ್ಟ್ ಆಧರಿಸಿ ಶಿವಕುಮಾರ್ ಎಂಬುವರು ದೂರು ನೀಡಿದ್ದಾರೆ. ದೂರಿನಲ್ಲಿ ಚೇತನ್ ಅವರು ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.


ಈ ದೂರನ್ನು ಆಧರಿಸಿ ಎಫ್ ಐ ಆರ್ ದಾಖಲಿಸಿದ್ದ ಶೇಷಾದ್ರಿಪುರಂ ಪೊಲೀಸರು ನಟ ಚೇತನ್ ನನ್ನು ಬಂಧಿಸಿ ಕೋರ್ಟಿಗೆ ಹಾಜರುಪಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.


ನಟ ಚೇತನ್ ನ್ಯಾಯಾಂಗ ಬಂಧನ


ಕೋರ್ಟ್ ನಟನನ್ನು 14 ದಿನಗಳ‌ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ನಟ ಚೇತನ್ ವಕೀಲರು‌ ಜಾಮೀನು ಪ್ರಕ್ರಿಯೆಗೆ ಮುಂದಾಗಿದ್ದಾರೆ. ಚೇತನ್ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಕೆಸಿದ್ದಾರೆ. ನಟ ಚೇತನ್ ಅವರೇ ಬರೆದಿದ್ದಾರೆ ಅನ್ನೋದಕ್ಕೆ‌ ಸಾಕ್ಷಿ ಇಲ್ಲ. ಪೊಲೀಸರು ಸುಳ್ಳು ಕೇಸ್ ದಾಖಲಿಸಿದ್ದಾರೆ ಎಂದು ಕೋರ್ಟ್ ನಲ್ಲಿ‌ ಚೇತನ್ ಪರ ವಕೀಲ ವಾದಿಸಿದ್ದಾರೆ.


ಇದನ್ನೂ ಓದಿ: Raveena Tondon: ಕೆಜಿಎಫ್ ನಟಿ ರವೀನಾ ಬ್ರೇಕಪ್ ನಂತರ ಕುಗ್ಗಿದರು! ಪ್ರೀತಿಯನ್ನು ಮರೆಯಲಾಗಲಿಲ್ಲ

top videos


    ನಟ ಚೇತನ್ ಬಂಧನ‌ ಪ್ರಕರಣದ ಬಗ್ಗೆ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ಹೇಳಿಕೆ ನೀಡಿದ್ದಾರೆ. ಶೇಷಾದ್ರಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐಪಿಸಿ 295a, 505b ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಪ್ರಕರಣ ಸಂಬಂಧ
    ನಟ ಚೇತನ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಅದೇಶ ನೀಡಿದೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದಿದ್ದಾರೆ.

    First published: