ಡಬ್ಬಿಂಗ್ ಹಂತದಲ್ಲಿ ಡಾಲಿ ಧನಂಜಯ​​ ನಟನೆಯ ಬಡವ ರಾಸ್ಕಲ್​ ಸಿನಿಮಾ

Badava Rascal: ಬೆಂಗಳೂರು, ಮೈಸೂರು ಹಾಗೂ ಪಾಂಡವಪುರದಲ್ಲಿ ಚಿತ್ರೀಕರಣ ನಡೆದಿದೆ. ಮಧ್ಯಮ ವರ್ಗದ ಜನರ ದಿನನಿತ್ಯದ ಜೀವನದಲ್ಲಿ ನಡೆಯುವ ಘಟನೆಗಳೆ ಈ ಚಿತ್ರದ ಕಥಾಹಂದರ.

ಡಾಲಿ ಧನಂಜಯ

ಡಾಲಿ ಧನಂಜಯ

  • Share this:
ಡಾಲಿ ಧನಂಜಯ ನಾಯಕನಾಗಿ ನಟಿಸುತ್ತಿರುವ 'ಬಡವ ರಾಸ್ಕಲ್' ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದ್ದು,  ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದೆ. ಸದ್ಯ ಬಾಲಾಜಿ ಡಿಜಿಟಲ್ ಸ್ಟುಡಿಯೋದಲ್ಲಿ ಡಬ್ಬಿಂಗ್​ ನಡೆಯುತ್ತಿದೆ.

ಬೆಂಗಳೂರು, ಮೈಸೂರು ಹಾಗೂ ಪಾಂಡವಪುರದಲ್ಲಿ ಚಿತ್ರೀಕರಣ ನಡೆದಿದೆ. ಮಧ್ಯಮ ವರ್ಗದ ಜನರ ದಿನನಿತ್ಯದ ಜೀವನದಲ್ಲಿ ನಡೆಯುವ ಘಟನೆಗಳೆ ಈ ಚಿತ್ರದ ಕಥಾಹಂದರ. ಡಾಲಿ ಪಿಕ್ಚರ್ಸ್ ಲಾಂಛನದಲ್ಲಿ ಸಾವಿತ್ರಮ್ಮ ಅಡವಿಸ್ವಾಮಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಶಂಕರ್ ಗುರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಕಥೆ, ಚಿತ್ರಕಥೆ, ಸಂಭಾಷಣೆಯನ್ನ ಶಂಕರ್ ಗುರು ಬರೆದಿದ್ದಾರೆ.



ಡಾಲಿ ಧನಂಜಯ ಹಾಗೂ ಶಂಕರ್ ಗುರು ಈ ಚಿತ್ರದ ಹಾಡುಗಳನ್ನು ಬರೆದಿದ್ದು, ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಪ್ರೀತ ಜಯರಾಮನ್ ಛಾಯಾಗ್ರಹಣ, ನಿರಂಜನ್ ದೇವರಮನೆ ಸಂಕಲನ ಹಾಗೂ ವಿನೋದ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.



ಡಾಲಿ ಧನಂಜಯ ಅವರಿಗೆ ನಾಯಕಿಯಾಗಿ ಅಮೃತ ಅಯ್ಯಂಗಾರ್ ಅಭಿನಯಿಸಿದ್ದಾರೆ. ರಂಗಾಯಣ ರಘು, ತಾರಾ, ಸ್ಪರ್ಶ ರೇಖಾ, ನಾಗಭೂಷಣ್, ಪೂರ್ಣಚಂದ್ರ ಮುಂತಾದವರು ಈ ಚಿತ್ರದ ತಾರಾ ಬಳಗದಲ್ಲಿದ್ದಾರೆ‌.
Published by:Harshith AS
First published: