Golden Star Ganesh: ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದ ಗೋಲ್ಡನ್ ಸ್ಟಾರ್, ​ಫ್ಯಾನ್ಸ್ ಬಳಿ ವಿಶೇಷ ಮನವಿ ಮಾಡಿದ ಗಣೇಶ್

ನಟ ಗಣೇಶ್ ಜುಲೈ 2ಕ್ಕೆ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಪ್ರತಿ ವರ್ಷ ಅವರ ಹುಟ್ಟುಹಬ್ಬವನ್ನು ಆಚರಿಸುತ್ತಾರೆ. ಆದರೆ ಈ ಬಾರಿ ಅವರು ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಳ್ಳುತ್ತಿಲ್ಲ.

ಗೋಲ್ಡನ್ ಸ್ಟಾರ್ ಗಣೇಶ್

ಗೋಲ್ಡನ್ ಸ್ಟಾರ್ ಗಣೇಶ್

  • Share this:
ಸ್ಯಾಂಡಲ್​ ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಸದ್ಯ ಕನ್ನಡ ಚಿತ್ರರಂಗದ ಬ್ಯುಸಿ ನಟರಲ್ಲಿ ಒಬ್ಬರು. ಸಾಲು ಸಾಲಿ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಅವರ ಜನ್ಮದಿನ ಇನ್ನೇನು ಸಮೀಪಿಸುತ್ತಿದೆ. ಹೌದು, ಜುಲೈ 2ಕ್ಕೆ ಗಣೇಶ್ ಅವರ ಹುಟ್ಟುಹಬ್ಬ. ಈ ದಿನ ಅವರ ಅಭಿಮಾನಿಗಳು ಸಂಭ್ರಮದಿಂದ ಪ್ರತಿ ವರ್ಷ ಅವರ ಹುಟ್ಟುಹಬ್ಬವನ್ನು ಆಚರಿಸುತ್ತಾರೆ. ಆದರೆ ಈ ಬಾರಿ ಅವರು ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಳ್ಳುತ್ತಿಲ್ಲ. ಇದಕ್ಕೆ ಅವರು ಕಾರಣವನ್ನೂ ನೀಡಿದ್ದಾರೆ. ಅಲ್ಲದೇ ಸಾಮಾಜಿಕ ಜಾಲತಾಣ ಟ್ವಿಟರ್​ ನಲ್ಲಿ ತಮ್ಮ ಫ್ಯಾನ್ಸ್ ಗೆ ಭಾವನಾತ್ಮಕ ಪತ್ರವನ್ನು ಬರೆದಿದ್ದಾರೆ. ಈ ಮೂಲಕ ಈ ಬಾರಿ ನಿಮ್ಮೊಂದಿಗೆ ಜನ್ಮದಿನವನ್ನು ಆಚರಿಸಿಕೊಳ್ಳಲಾಗುತ್ತಿಲ್ಲ ಕ್ಷಮೆಕೋರಿದ್ದಾರೆ.

ಅಭಿಮಾನಿಗಳಿಗೆ ಭಾವನಾತ್ಮಕ ಪತ್ರಬರೆದ ಗೋಲ್ಡನ್ ಸ್ಟಾರ್:

ಇನ್ನು, ಈ ಬಾರಿ ಅನಿವಾರ್ಯ ಕಾರಣಗಳಿಂದ ತಾವು ಮನೆಯಲ್ಲಿ ಇರದ ಕಾರಣ ಅಭಿಮಾನಿಗಳೊಂದಿಗೆ ಜುಲೈ 2 ರಂದು ಜನ್ಮದಿನವನ್ನು ಆಚರಿಸಿಕೊಳ್ಳಲಾಗುತ್ತಿಲ್ಲ ಎಂದು ಗಣಿ ಪತ್ರದ ಮೂಲಕ ತಿಳಿಸಿದ್ದಾರೆ. ಅಲ್ಲದೇ ತಮ್ಮ ಹುಟ್ಟುಹಬ್ಬದಂದು ನೀವು ತರುವ ಹಾರ, ತುರಾಯಿ ಮತ್ತು ಕೇಕ್ ಇತ್ಯಾದಿಗಳ ಬದಲಿಗೆ, ಅಗತ್ಯವಿರುವ ಕಡೆ ನಿಮ್ಮ ಕೈಲಾದಷ್ಟು ನೆರವು ಮಾಡಿ ಗಣೇಶ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ನಿಮ್ಮ ಈ ನಿಷ್ಕಲ್ಮಶ ಪ್ರೀತಿಭರಿತ ಅಭಿಮಾನಕ್ಕೆ ನಾನು ಸದಾ ಖುಣಿ

ಟ್ವಿಟರ್​ ಮೂಲಕ ಅಭಿಮಾನಿಗಳಿಗೆ ಪತ್ರ ಬರೆದಿರುವ ಅವರು, ‘ನನ್ನ ಕಲಾ ಬದುಕಿನ ಆರಂಭದ ದಿನಗಳಿಂದ ಶುರುವಾಗಿ ಇಲ್ಲಿಯ ತನಕ ನನ್ನಈ ಬಣ್ಣದ ಹಾದಿಯ ಪ್ರತಿ ಹೆಜ್ಜೆಯಲ್ಲೂ ನನ್ನೊಂದಿಗೆ ಹೆಜ್ಜೆ ಹಾಕಿ, ನನ್ನ ಯಶಸ್ಸನ್ನು ನಿಮ್ಮದೇ ಯಶಸ್ಸು ಎನ್ನುವಂತೆ ಸಂಭ್ರಮಿಸಿ ನೀವೆಲ್ಲರೂ ಖುಷಿಪಟ್ಟಿದ್ದೀರಿ. ಪ್ರತೀ ವರ್ಷವೂ ನನ್ನ ಹುಟ್ಟಿದ ದಿನದಂದು ರಾಜ್ಯದ ಮೂಲೆ ಮೂಲೆಗಳಿಂದ ನನ್ನ ಮನೆಯ ಬಳಿ ಬಂದು ಅತೀವ ಅಭಿಮಾನದಿಂದ ನನ್ನನ್ನು ಆಲಂಗಿಸಿ ಹರಸಿದ್ದೀರಿ. ನನ್ನೆಡೆಗಿನ ನಿಮ್ಮ ಈ ನಿಷ್ಕಲ್ಮಶ ಪ್ರೀತಿಭರಿತ ಅಭಿಮಾನಕ್ಕೆ ನಾನು ಸದಾ ಖುಣಿ.

ನನ್ನ ಹುಟ್ಟುಹಬ್ಬದ ನೆಪದಲ್ಲಾದರೂ ನಾನು ನಿಮ್ಮನ್ನೆಲ್ಲಾ ವೈಯಕ್ತಿಕವಾಗಿ ಭೇಟಿ ಮಾಡಿ, ನಿಮ್ಮೆಲ್ಲರ ಪ್ರೀತಿಯನ್ನು ಅಸ್ವಾದಿಸುತ್ತಾ ನಿಮ್ಮೊಡನೆಯೇ ಸಂಭ್ರಮಿಸಿ, ನಿಮ್ಮ ಅಭಿಮಾನದ ಸವಿಯನ್ನು ಇಡೀ ದಿನ ಖುಷಿಯಿಂದ ಸವಿಯುವ ಹಂಬಲ ನನಗೂ ಇದೆ. ಆದರೆ ಕಳೆದ ಬಾರಿಯಂತೆ ಈ ಬಾರಿಯೂ ಸಹ ಸಮಯ ಅದಕ್ಕೆ ಅವಕಾಶ ಮಾಡಿಕೊಡುತ್ತಿಲ್ಲ. ಕೆಲ ಅನಿವಾರ್ಯ ಕಾರಣಗಳಿಂದಾಗಿ ನಾನು ನನ್ನ ಹುಟ್ಟಿದ ದಿನದಂದು, ಅಂದರೆ ಜುಲೈ 2ರಂದು ಮನೆಯಲ್ಲಿರಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ನಿಮ್ಮೆಲ್ಲರ ಕ್ಷಮೆ ಕೋರುತ್ತೇನೆ.

ಇದನ್ನೂ ಓದಿ: Golden Star Ganesh: ಹೊಸ ರಿಯಾಲಿಟಿ ಶೋ ಮೂಲಕ ಮತ್ತೆ ಕಿರುತೆರೆಯತ್ತ ಮುಖ ಮಾಡಿದ ಗೋಲ್ಡನ್ ಸ್ಟಾರ್ ಗಣೇಶ್

ನೀವೆಲ್ಲರೂ ಅಭಿಮಾನದಿಂದ ಪ್ರತೀ ಬಾರಿ ನನಗಾಗಿ ತರುವ ಹಾರ, ತುರಾಯಿ, ಕೇಕ್‌ ಇತ್ಯಾದಿಗಳ ಬದಲಿಗೆ, ಅಗತ್ಯವಿರುವ ಕಡೆ ನಿಮ್ಮ ಕೈಲಾದಷ್ಟು ನೆರವು ನೀಡುವ ಮೂಲಕ ನಿಮ್ಮೆಲ್ಲರ ಅಕ್ಕರೆಯ ಹಾರೈಕೆಗಳನ್ನು ನನಗೆ ತಲುಪಿಸಿಬಿಡಿ' ಎಂದು ನಟ ಗಣೇಶ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಕಿರುತೆರೆಗೆ ಮರಳಿದ್ದಾರೆ ಗಣೇಶ್:

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಇಸ್ಮಾರ್ಟ್ ಜೋಡಿ ಎಂಬ ಹೊಸ ಶೋ ಆರಂಭವಾಗುತ್ತಿದ್ದು ಈ ಕಾರ್ಯಕ್ರಮದ ಸಾರಥ್ಯವನ್ನು ಗೋಲ್ಡನ್ ಸ್ಟಾರ್ ಗಣೇಶ್ ಅವರು ವಹಿಸಿಕೊಳ್ಳಲಿದ್ದಾರೆ. 10 ಸೆಲೆಬ್ರಿಟಿ ರೋಮ್ಯಾಂಟಿಕ್ ಜೋಡಿಗಳ ಜೊತೆ ಮನರಂಜನೆಯ ಹಬ್ಬ ನೀಡಲಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್. ಈಗಾಗಲೇ ವಾಹಿನಿಯು ಇದರ ಪ್ರೋಮೊವನ್ನು ಹರಿ ಬಿಟ್ಟಿದ್ದು ಅದರಲ್ಲಿ ಗಣೇಶ್ ಕೂಡ ಕಾಣಿಸಿಕೊಂಡಿದ್ದಾರೆ.
Published by:shrikrishna bhat
First published: