ಕೃಷಿಕನಾದ ನಿಖಿಲ್ ಕುಮಾರಸ್ವಾಮಿ; ಯುವಕರಿಗೆ ಯುವರಾಜನಿಂದ ಹೀಗೊಂದು ಸಂದೇಶ

Nikhil kumaraswamy: ನಾನು ಸಹಾ ರೈತನ ಮಗನಾಗಿದ್ದು  ನಮ್ಮ ಜಮೀನಿನಲ್ಲಿ ವ್ಯವಸಾಯ ನಡೆಸಬೇಕೆಂದು ನಿರ್ಧರಿಸಿ ನಮ್ಮ ತೋಟದಲ್ಲಿ ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದೇನೆ. ಇದೇ ರೀತಿ‌ ನಗರದಿಂದ ಹಳ್ಳಿಗಳಿಗೆ ಹಿಂತಿರುಗಿ ವ್ಯವಸಾಯದಲ್ಲಿ ತೊಡಗಿರುವ ಎಲ್ಲಾ ರೈತರ ಮಕ್ಕಳಿಗೂ ಯಶಸ್ಸು ಸಿಗಲಿ ಎಂದು ನಿಖಿಲ್​ ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

news18-kannada
Updated:July 1, 2020, 7:43 PM IST
ಕೃಷಿಕನಾದ ನಿಖಿಲ್ ಕುಮಾರಸ್ವಾಮಿ; ಯುವಕರಿಗೆ ಯುವರಾಜನಿಂದ ಹೀಗೊಂದು ಸಂದೇಶ
ನಿಖಿಲ್ ಕುಮಾರಸ್ವಾಮಿ
  • Share this:
ತಾತ ದೊಡ್ಡಗೌಡರಂತೆ ರೈತ ಪರ ಚಿಂತನೆಯುಳ್ಳ ನಿಖಿಲ್ ಕುಮಾರಸ್ವಾಮಿ ಸಹ ಕೃಷಿ ಚಟುವಟಿಕೆಗೆ ಇಳಿದಿದ್ದಾರೆ. ಅದನ್ನ ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಂಡಿರೋ ನಿಖಿಲ್ ತಮ್ಮ ಬರವಣಿಗೆ ಮೂಲಕ ಯುವಕರಿಗೆ ಸ್ಫೂರ್ತಿ ತುಂಬುವ ಕೆಲಸ ಮಾಡಿದ್ದಾರೆ. ನಿಖಿಲ್ ಚಂದವಾಗಿ ಬರೆದಿರೋ ಸಾಲುಗಳು ಇಲ್ಲಿದೆ.. 

ನಮ್ಮ ದೇಶ ಕೃಷಿ ಪ್ರಧಾನವಾದ ದೇಶವಾಗಿದ್ದು, ರೈತ ಈ ದೇಶದ ಬೆನ್ನೆಲುಬು ಎಂದು ಗೌರವ ಸಲ್ಲಿಸುತ್ತೇವೆ. ಆದರೆ ರೈತರ ಮಕ್ಕಳು ರೈತರಾಗಿ ಅವರ ಕೃಷಿಭೂಮಿಯಲ್ಲಿ ದುಡಿಯಲು ಹಿಂಜರಿದು ನಗರದ ಕಡೆಗೆ ವಲಸೆ ಬಂದು ಬದುಕು ಕಟ್ಟಿಕೊಳ್ಳಲು ಹವಣಿಸುವವರ ಸಂಖ್ಯೆಯೇ ಹೆಚ್ಚು. ತಾವು ಕಲಿತ  ವಿದ್ಯಾಭ್ಯಾಸದ ಆಧಾರದ ಮೇಲೆ ನಗರಗಳಲ್ಲಿ ಕೆಲಸ ಮಾಡಿಕೊಂಡು ಸಂಪಾದಿಸಿ ಜೀವನ ನಡೆಸುವವರು ಒಂದು ಕಡೆಯಾದರೆ ಇನ್ನು ಕೆಲವರು ಸ್ವಂತ ಉದ್ಯೋಗ ಅಥವಾ ಕೂಲಿ ಕೆಲಸವನ್ನಾದರೂ ನಗರದಲ್ಲಿ ಮಾಡಿಕೊಂಡು ಜೀವನ ನಡೆಸಲು ನಗರಗಳ ಕಡೆಗೆ ಮುಖಮಾಡುವವರು ಇನ್ನೊಂದು ಕಡೆ. ಇದರ ಪರಿಣಾಮವಾಗಿ ಹಳ್ಳಿಗಳಲ್ಲಿರುವ ಕೃಷಿಭೂಮಿಗಳು ಪಾಲು ಬೀಳುತ್ತಿವೆ. ನಗರದಲ್ಲಿ ವೃತ್ತಿ ಸ್ಪರ್ಧೆ ತಾರಕಕ್ಕೇರಿದೆ.

ಡಾಕ್ಟರ್ ತನ್ನ‌ ಮಗ ಡಾಕ್ಟರ್ ‌ಆಗಲಿ, ಪೊಲೀಸ್ ತನ್ನ ಮಗನೂ ತನ್ನಂತೆಯೇ ಪೊಲೀಸ್ ಆಗಲಿ, ಸರ್ಕಾರಿ‌ ನೌಕರ ತನ್ನ ಮಗನೂ ಸರ್ಕಾರಿ ನೌಕರನಾಗಲಿ ಎಂದು ಆಸೆ ಪಡುತ್ತಾನೆ. ಆದರೆ ನಮ್ಮ ದೇಶದ  ರೈತ ತನ್ನ ಮಗನೂ ರೈತನಾಗಲಿ ಎಂದು ಎಂದೂ ಬಯಸದ ಪರಿಸ್ಥಿತಿ ಇದೆ. ತಾನು ಪಟ್ಟ ಕಷ್ಟ ತನಗೇ ಕೊನೆಯಾಗಲಿ ನನ್ನ ಮಕ್ಕಳಿಗೆ ಈ ಕಷ್ಟ ಬೇಡ ಎಂದು  ಸಾಲ ಮಾಡಿಯಾದರೂ ಮಕ್ಕಳನ್ನು ಓದಿಸಿ ಉದ್ಯೋಗಕ್ಕಾಗಿ ನಗರಗಳಿಗೆ ಕಳುಹಿಸುತ್ತಾರೆ.

ರೈತರಿಗೆ ತಾವು  ಏನೇ ಬೆಳೆದರೂ ಅದಕ್ಕೆ ಬೆಲೆ ನಿಗದಿ ಮಾಡುವ ಅಧಿಕಾರವೂ ಆತನಿಗಿಲ್ಲ. ಜೀವಮಾನವಿಡಿ ದುಡಿದು ಬದುಕುವ ರೈತನಿಗೆ ಈ ದೇಶದ ಮೊದಲ ಗೌರವ ಸಿಗಬೇಕಿದ್ದು  ಸರ್ಕಾರಿ ಅಧಿಕಾರಿಗಳು ಹಾಗೂ ಬ್ಯಾಂಕ್ ನೌಕರರು ರೈತರು ತಮ್ಮ ಕಚೇರಿಗೆ ಬಂದಾಗ ಗೌರವದಿಂದ ನಡೆಸಿಕೊಳ್ಳಬೇಕು. ಜಮೀನಿನಲ್ಲಿ ಮುಳ್ಳು ಚುಚ್ಚಿ ಮಣ್ಣಿಗೆ ರಕ್ತದ ಅಭಿಷೇಕವಾದರೂ ಮರುದಿನ ಅದೇ ಜಮೀನಿನಲ್ಲಿ ಕೆಲಸ ಮಾಡುವ ರೈತನಿಗೆ ಘನತೆಯ ಬದುಕನ್ನು ಕಟ್ಟಿ ಕೊಡಬೇಕಿದೆ. ರೈತರ ಮಕ್ಕಳು ಕೃಷಿಭೂಮಿಯಲ್ಲಿ ಕೆಲಸ ಮಾಡುವುದು ಒಂದು ಗೌರವ ಅನ್ನುವ ಪರಿಸ್ಥಿತಿ ನಿರ್ಮಾಣವಾಗಬೇಕು. ರೈತನಾಗಿ ಬದುಕುವುದು ದೌರ್ಭಾಗ್ಯವಲ್ಲ ಬದಲಾಗಿ ಅದೊಂದು ಸೌಭಾಗ್ಯ ಅನ್ನುವ ಪರಿಸ್ಥಿತಿ ನಿರ್ಮಾಣವಾಗಬೇಕು.

ನಿಖಿಲ್ ಕುಮಾರಸ್ವಾಮಿ


ನಗರದಿಂದ ಮತ್ತೆ ಊರುಗಳಿಗೆ ಹಿಂದಿರುಗಿ ತಮ್ಮ ತಮ್ಮ  ಕೃಷಿಭೂಮಿಗಳಲ್ಲಿ ಕೃಷಿ ಚಟುವಟಿಕೆಗಳನ್ನು ಆರಂಭಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ.  ನಿಮಗೆಲ್ಲರಿಗೂ ಯಶಸ್ಸು ಸಿಗಲಿ. ರೈತನ ಮಗನೆಂದು ಹೆಮ್ಮೆಯಿಂದ ಹೇಳಿ. ವಿದ್ಯಾಭ್ಯಾಸವಿರುವ ಯುವಕರು ವ್ಯವಸಾಯಕ್ಕಾಗಿ ಜಮೀನಿಗಿಳಿದರೆ ಮಧ್ಯವರ್ತಿಗಳ ಮೋಸವೂ ಕಡಿಮೆಯಾಗಲಿದೆ. ಆಧುನಿಕ ತಂತ್ರಜ್ಞಾನವನ್ನು ಕೃಷಿಯಲ್ಲಿ ಬಳಸಿಕೊಳ್ಳುವ ಅವಕಾಶವಿದೆ.‌ ಕೃಷಿಯಲ್ಲೇ ಉನ್ನತ ಪದವಿ ಪಡೆದ ರೈತರ ಮಕ್ಕಳೇ ದೇಶದ ಕೃಷಿ ನೀತಿಯನ್ನು ನಿರ್ಧರಿಸುವಂತಾಗಲಿ. ಇದರ ಜೊತೆಗೆ ಸರ್ಕಾರಗಳು ಸಹಾ ಕೃಷಿ ಚಟುವಟಿಕೆಗಳಿಗೆ ಸೂಕ್ತ ಪ್ರೋತ್ಸಾಹವನ್ನು ನೀಡಿದರೆ ದೇಶದಲ್ಲಿ ರೈತನೆಂದರೆ ಎದ್ದು  ಕೈಮುಗಿಯುವ ದಿನಗಳು ದೂರವಿಲ್ಲ.

ನಾನು ಸಹಾ ರೈತನ ಮಗನಾಗಿದ್ದು  ನಮ್ಮ ಜಮೀನಿನಲ್ಲಿ ವ್ಯವಸಾಯ ನಡೆಸಬೇಕೆಂದು ನಿರ್ಧರಿಸಿ ನಮ್ಮ ತೋಟದಲ್ಲಿ ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದೇನೆ. ಇದೇ ರೀತಿ‌ ನಗರದಿಂದ ಹಳ್ಳಿಗಳಿಗೆ ಹಿಂತಿರುಗಿ ವ್ಯವಸಾಯದಲ್ಲಿ ತೊಡಗಿರುವ ಎಲ್ಲಾ ರೈತರ ಮಕ್ಕಳಿಗೂ ಯಶಸ್ಸು ಸಿಗಲಿ ಎಂದು ನಿಖಿಲ್​ ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.ಮೆಂತ್ಯ ಸೊಪ್ಪೆಂದು ತಿಳಿದು ಗಾಂಜಾ ಸೊಪ್ಪಿನ ಸಬ್ಜಿ ಮಾಡಿದ್ರು; ಮುಂದೇನಾಯ್ತು?
First published: July 1, 2020, 7:36 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading