Harikathe Alla Girikathe: ಹರಿ ಕಥೆ ಅಲ್ಲ, ಗಿರಿ ಕಥೆ ಸಿನಿಮಾದ ಟ್ರೈಲರ್ ರಿಲೀಸ್, ಈ ಬಾರಿ ಭಯಂಕರ ನಗಿಸ್ತಾರಂತೆ ಶೆಟ್ರು!
ರಿಷಭ್ ಶೆಟ್ಟಿ ಅವರ ಬಹು ನಿರೀಕ್ಷಿತ ಸಿನಿಮಾ ಹರಿಕಥೆ ಅಲ್ಲ ಗಿರಿಕಥೆ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಈ ಚಿತ್ರಕ್ಕೆ ಕರಣ್ ಅನಂತ್ ಮತ್ತು ಅನಿರುದ್ಧ ಇಬ್ಬರು ನಿರ್ದೇಶನ ಮಾಡಿದ್ದಾರೆ. ವಿಭಿನ್ನ ಶೈಲಿಯಲ್ಲಿ ಮೂಡಿಬಂದಿರುವ ಟ್ರೈಲರ್ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.
ಸ್ಯಾಂಡಲ್ವುಡ್ನ (Sandalwood) ಖ್ಯಾತ ನಟ ಹಾಗೂ ನಿರ್ದೇಶಕ ರಿಷಭ್ ಶೆಟ್ಟಿ (Rishab Shetty) ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಅದರಲ್ಲಿಯೂ ಹೊಂಬಾಳೆ ಫಿಲ್ಮ್ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಂತಾರ (Kantara) ಚಿತ್ರದ ಶೂಟಿಂಗ್ ನಲ್ಲಿ ಬ್ಯೂಸಿ ಆಗಿರುವ ರಿಷಭ್, ಇದೀಗ ಕಾಂತಾರ ಚಿತ್ರದ ಬಿಡುಗಡೆ ದಿನಾಂಕವನ್ನೂ ಘೋಷಸಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ಇದರ ನಡುವೆ ರಿಷಭ್ ಅವರ ಇನ್ನೊಂದು ನಿರೀಕ್ಷಿತ ಸಿನಿಮಾ ಸಂದೇಶ್ ನಾಗರಾಜ್ ಅವರ ಬ್ಯಾನರ್ ಅಡಿ ನಿರ್ಮಾಣವಾಗುತ್ತಿರುವ ಹರಿಕಥೆ ಅಲ್ಲ ಗಿರಿಕಥೆ (Harikathe Alla Girikathe) ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಈ ಚಿತ್ರಕ್ಕೆ ಕರಣ್ ಅನಂತ್ ಮತ್ತು ಅನಿರುದ್ಧ ಇಬ್ಬರು ನಿರ್ದೇಶನ ಮಾಡಿದ್ದಾರೆ. ವಿಭಿನ್ನ ಶೈಲಿಯಲ್ಲಿ ಮೂಡಿಬಂದಿರುವ ಟ್ರೈಲರ್ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.
ಟ್ರೈಲರ್ ರಿಲೀಸ್
ರಿಷಭ್ ಶೆಟ್ಟಿ ಅಭಿನಯದ ಹರಿ ಕಥೆ ಅಲ್ಲ ಗಿರಿ ಕಥೆ ಚಿತ್ರದ ಟ್ರೈಲರ್ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ಸಂಜೆ 4 ಗಂಟೆಗೆ ಬಿಡುಗಡೆಯಾಗಿದೆ. ಚಿತ್ರದ ಟ್ರೈಲರ್ ಸಖತ್ ಮಸ್ತ್ ಆಗಿದ್ದು, ನಾಯಕ ಗಿರಿ (ರಿಷಭ್ ಶೆಟ್ಟಿ) ಓರ್ವ ನಿರ್ದೇಶಕನಾಗಬೇಕು ಎಂದು ನಿರ್ಮಾಪಕರಿಗಾಗಿ ಹುಡುಕಾಟ ನಡೆಸುವಾಗ ಅಲ್ಲಿ ಎದುರಾಗುವ ಕೆಲಸ ವಿಚಿತ್ರ ಘಟನೆಗಳೇ ಚಿತ್ರದ ಜೀವಾಳವಾಗಿದ್ದಂತೆ ಟ್ರೈಲರ್ನಲ್ಲಿ ಕಾಣಸಿಗುತ್ತಿದೆ. ಇದೊಂದು ಪಕ್ಕಾ ಕಾಮಿಡಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದೆ. ಚಿತ್ರವು ಇದೇ ಜೂನ್ 23ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಮೋಡಿ ಮಾಡುತ್ತಿದೆ ಜೂ. ಮೊನಾಲಿಸಾ:
ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಜೂ. ಮೊನಾಲಿಸಾ ಲಿರೀಕಲ್ ವಿಡಿಯೋ ಸಾಂಗ್ ಸಖತ್ ಮೋಡಿ ಮಾಡುತ್ತಿದೆ. ತ್ರಿಲೋಕ್ ತ್ರಿವಿಕ್ರಮ್ ಈ ಹಾಡಿಗೆ ಸಾಹಿತ್ಯ ಬರೆದಿದ್ದು, ಸಾಂಗ್ ಕೇಳಲು ವಿಭಿನ್ನವಾಗಿ ಮೂಡಿಬಂದಿದೆ. ಸಿನಿಮಾದ ನಾಯಕಿಯಾಗಿ ಹೊಸ ಪ್ರತಿಭೆ ತಪಸ್ವಿನಿ ಪೂಣಚ್ಚ ಅವರನ್ನು ಆಯ್ಕೆ ಮಾಡಲಾಗಿದೆ. ತಪಸ್ವಿನಿ ಪೂಣಚ್ಚ ಈ ಸಿನಿಮಾದಲ್ಲಿ ರಿಷಭ್ ಶೆಟ್ಟಿ ಅವರಿಗೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಈ ಸಿನಿಮಾದಲ್ಲಿ ಮತ್ತೋರ್ವ ನಾಯಕಿಯೂ ಇದ್ದಾರೆ. ಅವರೇ ಲವ್ ಮಾಕ್ಟೇಲ್ ಸಿನಿಮಾದಲ್ಲಿ ಆದಿತಿ ಪಾತ್ರದಲ್ಲಿ ನಟಿಸಿರುವ ರಚನಾ ಇಂದರ್.
ರಿಷಭ್ ಶೆಟ್ಟಿ ಅಭಿನಯದ ಹರಿಕಥೆ ಅಲ್ಲ ಗಿರಿಕಥೆ ಚಿತ್ರಕ್ಕೆ ಕರಣ್ ಅನಂತ್ ಮತ್ತು ಅನಿರುದ್ಧ ಇಬ್ಬರು ನಿರ್ದೇಶನ ಮಾಡಿದ್ದಾರೆ. ಇನ್ನು, ರಿಷಭ್ ಗೆ ಜೋಡಿಯಾಗಿ ತಪಸ್ವಿನಿ ಪೂಣಚ್ಚ ಮತ್ತು ರಚನಾ ಇಂದರ್ ಕಾಣಿಸಿಕೊಳ್ಳಲಿದ್ದಾರೆ. ಇವರಲ್ಲದೇ ಪ್ರಮೋದ್ ಶೆಟ್ಟಿ ಅಭಿನಯಿಸಿದ್ದು, ಸಂದೇಶ್ ನಾಗರಾಜ್ ಬಂಡವಾಳ ಹೂಡಿದ್ದಾರೆ.
ಸದ್ಯ ನಟ ಮತ್ತು ನಿರ್ದೇಶಕ ರಿಷಭ್ ಶೆಟ್ಟಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅದರಲ್ಲಿಯೂ ಅವರ ಬಹುನಿರೀಕ್ಷಿತ ಹೊಂಬಾಳೆ ಫಿಲ್ಮ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕಾಂತಾರ ಚಿತ್ರದ ಟೀಸರ್ ಈಗಾಗಲೇ ಎಲ್ಲಡೆ ಧೂಳೆಬ್ಬಿಸಿದೆ. ಕೆಲ ದಿನಗಳ ಹಿಂದೆ ಕಾಂತಾರ ಚಿತ್ರದ ಬಿಡುಗಡೆ ದಿನಾಂಕವನ್ನೂ ಚಿತ್ರತಂಡ ತಿಳಿಸಿದ್ದು, ಚಿತ್ರವು ಸೆಪ್ಟೆಂಬರ್ 30ರಂದು ಅಂದರೆ ದಸಾರಾ ಸಮಯದಲ್ಲಿ ಬಿಡುಗಡೆ ಮಾಡಲಿದೆ ಎಂದು ಅಧಿಕೃತವಾಗಿ ತಿಳಸಿದೆ. ಇನ್ನು, ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆ ಅಚ್ಯುತ್ ಕುಮಾರ್, ಪ್ರಮೋದ್ ಶಟ್ಟಿ ಮುಂತಾದವರು ನಟಿಸುತ್ತಿದ್ದು, ರಿಷಬ್ ಅವರ ಬಹುತೇಕ ಚಿತ್ರಗಳಿಗೆ ಸಂಗೀತ ನೀಡಿರುವ ಅಜನೀಶ್ ಲೋಕ್ನಾಥ್ ಈ ಚಿತ್ರಕ್ಕೂ ಸಂಗೀತ ನೀಡಿದ್ದಾರೆ.
Published by:shrikrishna bhat
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ