ಸ್ಯಾಂಡಲ್ವುಡ್ನ ಕಿಚ್ಚ ಸುದೀಪ್ (Kiccha Sudeep) ಅಭಿನಯದ ಬಹುನಿರೀಕ್ಷಿತ ವಿಕ್ರಾಂತ್ ರೋಣ (Vikrant Rona) ಸಿನಿಮಾದ ಟ್ರೈಲರ್ (Trailer) ಈಗಾಗಲೇ ಬಿಡುಗಡೆ ಆಗಿದ್ದು, ಎಲ್ಲಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದರ ನಡುವೆ ಚಿತ್ರತಂಡ ದೇಶದಾದ್ಯಂತ ಪ್ರಚಾರ ಕಾರ್ಯ ಆರಂಭಿಸಿದ್ದು, ಈಗಾಗಲೇ ಚಿತ್ರವು ಎಷ್ಟು ಸ್ಕ್ರೀನ್ ಗಳಲ್ಲಿ ಬಿಡುಗಡೆ ಆಗಲಿದೆ ಎಂಬ ಮಾಹಿತಿಯನ್ನೂ ಚಿತ್ರತಂಡ ತಿಳಿಸಿದೆ. ಆದರೆ ಕಿಚ್ಚನ ಅಭಿಮಾನಿಗಳು ಆದಷ್ಟು ಬೇಗ ಅಡ್ವಾನ್ಸ್ ಬುಕಿಂಗ್ (Advance Booking) ಪ್ರಾರಂಭಿಸಿ ಎಂದು ಒತ್ತಾಯಿಸುತ್ತಿದ್ದರು. ಹೀಗಾಗಿ ಚಿತ್ರತಂಡ ಸಿನಿಮಾ ಬಿಡುಗಡೆಗೆ ಇನ್ನೂ 4 ದಿನ ಬಾಕಿ ಇರುವಂತೆಯೇ ಅಡ್ವಾನ್ಸ್ ಬುಕಿಂಗ್ ಓಪನ್ ಮಾಡಿದೆ. ಜೊತೆಗೆ ಚಿತ್ರದಲ್ಲಿ NFT ಅನ್ನು ಅಳವಡಿಸಿಕೊಳ್ಳಲು ಚಿತ್ರತಂಡ ಮುಂದಾಗಿದೆ.
ವಿಕ್ರಾಂತ್ ರೋಣ ಅಡ್ವಾನ್ಸ್ ಬುಕಿಂಗ್ ಆರಂಭ:
ಹೌದು, ಇಂದಿನಿಂದ ವಿಕ್ರಾಂತ್ ರೋಣ ಸಿನಿಮಾದ ಕನ್ನಡ ಅವತರಣಿಕೆಯ ಅಡ್ವಾನ್ಸ್ ಬುಕಿಂಗ್ ಪ್ರಾರಂಭವಾಗಿದೆ. ಈ ಕುರಿತು ಸ್ವತಃ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ. 'ವಿಕ್ರಾಂತ್ ರೋಣ' ಬಿಡುಗಡೆಗೆ ಕ್ಷಣಗಣನೆ ಶುರುವಾಗಿದ್ದು, ಚಿತ್ರವು ಜುಲೈ 28ರಂದು 5 ಭಾಷೆಗಳಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ. ಅಲ್ಲದೇ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಹಲವು ಕಡೆ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದ್ದು, ಹೈದರಾಬಾದ್ ನಲ್ಲಿಯೂ ಸಹ ಬುಕಿಂಗ್ ಶುರುವಾಗಿದೆ. ಬುಕ್ ಮೈ ಶೋ ಆ್ಯಪ್ ಮೂಲಕ ನೀವು ಸಿನಿಮಾವನ್ನು ಬುಕ್ ಮಾಡಬಹುದಾಗಿದೆ. ಆದರೆ ಉಳಿದಂತೆ ತಮಿಳುನಾಡು, ಆಂದ್ರ ಪ್ರದೇಶ, ಕೇರಳ ಕಡೆ ಇನ್ನಷ್ಟೇ ಬುಕಿಂಗ್ ಆರಂಭವಾಗಬೇಕಿದೆ.
ADVANCE BOOKING for #VikrantRona (Kannada) ,OPENS TODAY 12noon 🥂❤️#VRonJuly28 @anupsbhandari @JackManjunath @Asli_Jacqueline #VRin3D #VikrantRona pic.twitter.com/EuGS2TuBIc
— Kichcha Sudeepa (@KicchaSudeep) July 24, 2022
ಹೌದು, 'ವಿಕ್ರಾಂತ್ ರೋಣ' ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ದೊಡ್ಡದಾಗಿ ತೆರೆಕಾಣುತ್ತಿರುವ ಕನ್ನಡದ ಸಿನಿಮಾ. ಹೀಗಾಗಿ ಈ ಸಿನಿಮಾ ದೇಶದಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಒಂದು ಮಾಹಿತಿ ಪ್ರಕಾರ ಚಿತ್ರವು ಈವರೆಗಿನ ಲೆಕ್ಕಾಚಾರದ ಪ್ರಕಾರ ಬರೋಬ್ಬರಿ 3500 ಸ್ಕ್ರೀನ್ ಗಳಲ್ಲಿ ತೆರೆಕಾಣಲಿದೆ.
ಇದನ್ನೂ ಓದಿ: Vikrant Rona: ಕಿಚ್ಚನ ಅಭಿಮಾನಿಗಳಿಗೆ ಸಂತಸದ ಸುದ್ದಿ, NFT ಗೆ ಎಂಟ್ರಿ ಕೊಟ್ಟ ವಿಕ್ರಾಂತ್ ರೋಣ
ಕನ್ನಡದಲ್ಲಿ ಅಂದರೆ ಕರ್ನಾಟಕದಲ್ಲಿ 450 ಸ್ಕ್ರೀನ್ ಗಳಲ್ಲಿ ಸಿನಿಮಾ ರಿಲೀಸ್ ಆದರೆ ಉಳಿದಂತೆ ಆಂದ್ರ ಪ್ರದೇಶ, ತಮಿಳುನಾಡು ಮತ್ತು ಕೇರಳ ಹಾಗೂ ಉತ್ತರ ಭಾರತದಲ್ಲಿ ಎಷ್ಟು ಚಿತ್ರಮಂದಿರಗಳಲ್ಲಿ ಚಿತ್ರ ರಿಲೀಸ್ ಆಗಲಿದೆ ಎಂಬ ಮಾಹಿತಿ ಹೊರಬಿದ್ದಿದೆ. ಲಭ್ಯ ಮಾಹಿತಿ ಪ್ರಕಾರ ಸದ್ಯ, ವಿಕ್ರಾಂತ್ ರೋಣ ಚಿತ್ರ, ಆಂದ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯದಲ್ಲಿ 450 ಸ್ಕ್ರೀನ್, ತಮಿಳುನಾಡಿನಲ್ಲಿ 200 ಸ್ಕ್ರೀನ್ ಮತ್ತು ಕೇರಳದಲ್ಲಿ 150 ಸ್ಕ್ರೀನ್ ಗಳಲ್ಲಿ ಗುಮ್ಮನ ಅಬ್ಬರ ಪ್ರಾರಂಭವಾಗಲಿದೆ. ಆದರೆ ಹಿಂದಿಯಲ್ಲಿ ಅಂದರೆ ಉತ್ತರ ಭಾರತ ಭಾಗದಲ್ಲಿ ಬರೋಬ್ಬರಿ 1000 ಸ್ಕ್ರೀನ್ ಗಳಲ್ಲಿ ಚಿತ್ರ ಬಿಡುಗಡೆ ಆಗಲಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: Adah Sharma: ತರಕಾರಿ ಮಾರುತ್ತಾಳೆ, ಎಲೆಯಲ್ಲೇ ಮೈ ಮುಚ್ಚಿಕೊಂಡಿದ್ದಾಳೆ! ಪುನೀತ್ ಜೊತೆ ನಟಿಸಿದ್ದ ಈ ನಟಿಗೆ ಅದೇನಾಯ್ತಪ್ಪಾ?
ಜುಲೈ 28ಕ್ಕೆ ಸಿನಿಮಾ ರಿಲೀಸ್:
ವಿಕ್ರಾಂತ್ ರೋಣ ಈ ಸಿನಿಮಾವನ್ನು ಅನೂಪ್ ಭಂಡಾರಿಯವರು ನಿರ್ದೇಶನ ಮಾಡುತ್ತಿದ್ದು ಈಗಾಗಲೇ ಈ ಚಿತ್ರದ ರಾ ರಾ ರಕ್ಕಮ್ಮ ಹಾಡು ಹಾಗೂ ಟ್ರೈಲರ್ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನವನ್ನು ಕಾಣುತ್ತಿದೆ. ಜುಲೈ 28ಕ್ಕೆ ಈ ಸಿನಿಮಾ ಬಿಡುಗಡೆಯಾಗುತ್ತಿದ್ದು, ಕಿಚ್ಚನ ಫ್ಯಾನ್ಸ್ ಕಾತರದಿಂದ ಕಾಯುತ್ತಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ