• ಹೋಂ
  • »
  • ನ್ಯೂಸ್
  • »
  • ಮನರಂಜನೆ
  • »
  • Actress Leelavathi: ಹಿರಿಯ ನಟಿ ಲೀಲಾವತಿಗೆ ತೀವ್ರ ಅನಾರೋಗ್ಯ; ಫಿಲ್ಮ್​ ಚೇಂಬರ್​ ಅಧ್ಯಕ್ಷರಿಂದ ಆರೋಗ್ಯ ವಿಚಾರಣೆ

Actress Leelavathi: ಹಿರಿಯ ನಟಿ ಲೀಲಾವತಿಗೆ ತೀವ್ರ ಅನಾರೋಗ್ಯ; ಫಿಲ್ಮ್​ ಚೇಂಬರ್​ ಅಧ್ಯಕ್ಷರಿಂದ ಆರೋಗ್ಯ ವಿಚಾರಣೆ

ನಟಿ ಲೀಲಾವತಿಗೆ ಅನಾರೋಗ್ಯ

ನಟಿ ಲೀಲಾವತಿಗೆ ಅನಾರೋಗ್ಯ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ಅವರು, ನಟಿ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು. ತಾಯಿಯ ಆರೋಗ್ಯದ ಬಗ್ಗೆ ನಟ ವಿನೋದ್ ರಾಜ್ ಕುಮಾರ್ ಮಾಹಿತಿ ನೀಡಿದರು.

  • Share this:

ಬೆಂಗಳೂರು (ಸೆ.08): ಕನ್ನಡದ ಹಿರಿಯ ನಟಿ ಲೀಲಾವತಿ ( Actress Leelavathi) ಅವರು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಹೀಗಾಗಿ ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಭೇಟಿ ಮಾಡಿ ನೀಡಿ, ಆರೋಗ್ಯ (Health) ವಿಚಾರಿಸಿದರು. ಲೀಲಾವತಿ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ.  ಕೆಲ ದಿನಗಳಿಂದ ಅನಾರೋಗ್ಯದಿಂದ (Illness) ಬಳಲುತ್ತಿರುವಂತ ಕನ್ನಡದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದಾರೆ. ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ನಟಿ ಲೀಲಾವತಿಗೆ ನೀಡಲಾಗುತ್ತಿದೆ.


ಈ ವಿಷಯ ತಿಳಿದಂತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ಅವರು, ನಟಿ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು. ತಾಯಿಯ ಆರೋಗ್ಯದ ಬಗ್ಗೆ ನಟ ವಿನೋದ್ ರಾಜ್ ಕುಮಾರ್ ಮಾಹಿತಿ ನೀಡಿದರು.


ಲೀಲಾವತಿ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದಾರೆ. ಕನ್ನಡದಲ್ಲಿ ಅಷ್ಟೇ ಅಲ್ಲ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600 ಚಿತ್ರಗಳಲ್ಲಿ ನಟಿಸಿದ್ದಾರೆ. ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ ಪ್ರಶಸ್ತಿಯನ್ನು 1999-2000ದ ಸಾಲಿನಲ್ಲಿ ಲೀಲಾವತಿಗೆ ನೀಡಲಾಗಿದೆ. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ನೀಡಲಾಯ್ತು.


Senior Sandalwood actress Leelavathi is seriously ill pvn
ನಟಿ ಲೀಲಾವತಿಗೆ ಅನಾರೋಗ್ಯ


ಲೀಲಾವತಿ ವೈಯಕ್ತಿಕ ವಿವರ


ಲೀಲಾವತಿ ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ. ನಾಟಕ, ರಂಗಭೂಮಿ ಬಗ್ಗೆ ಚಿಕ್ಕವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದರು. ಲೀಲಾ ಅವರು ವೃತ್ತಿಜೀವನ ಆರಂಭಿಸಿದ್ದು ಮೈಸೂರಿನಲ್ಲಿ. ವೃತ್ತಿರಂಗಭೂಮಿಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವ ಮುನ್ನ ಕೆಲವೆಡೆ ಮನೆ ಕೆಲಸ ಮಾಡಿಕೊಂಡು ಜೀವನ ಸಾಗಿಸಿದ್ದಾರೆ.


Babli Bouncer Tamannaah: ಬಬ್ಲಿ ಬೌನ್ಸರ್ ಚಿತ್ರದಲ್ಲಿ ತಮನ್ನಾ ಭಾಟಿಯಾ; ಏನ್ ಸಖತ್ ರಗಢ್ ಗುರೂ!


ಕೃಷಿಯಲ್ಲಿ ಸಕ್ರಿಯರಾದ್ರು ತಾಯಿ-ಮಗ


ಲೀಲಾವತಿ ಅವರ ಮಗ ವಿನೋದ್ ರಾಜ್ ಕನ್ನಡ ಚಿತ್ರರಂಗದ ಖ್ಯಾತ ನಟ. ಪ್ರಸ್ತುತ ತಾಯಿ-ಮಗ ಇಬ್ಬರೂ ತೋಟಗಾರಿಕೆ ಮತ್ತು ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ.


ಲೀಲಾವತಿ ಸಿನಿಮಾಗಳು


ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು.


ಸುಬ್ಬಯ್ಯ ನಾಯ್ಡು ಅವರ ಭಕ್ತ ಪ್ರಹ್ಲಾದದಲ್ಲಿ ಕೂಡಾ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ಅಭಿನಯಿಸಿದರು.ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ಮಾಂಗಲ್ಯ ಯೋಗ. ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ರಣಧೀರ ಕಂಠೀರವ.


ಇದನ್ನೂ ಓದಿ: Actress Leelavathi ಮನೆಗೆ ಭೇಟಿ ಕೊಟ್ಟು ಸಂತೋಷದಿಂದ ಕಾಲ ಕಳೆದ ಭಾರತಿ ವಿಷ್ಣುವರ್ಧನ್​-ಹೇಮಾ ಚೌಧರಿ


ಚಂದನವನದ ಅಂದ ಗೊಂಬೆ


ರಾಣಿ ಹೊನ್ನಮ್ಮ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು. ಕೆಲಚಿತ್ರಗಳಲ್ಲಿ ನಾಯಕನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದರು.


ಪೋಷಕ ಪಾತ್ರಗಳಲ್ಲೂ ಲೀಲಾವತಿ ಅಭಿನಯ

top videos


    70ರ ದಶಕದ ಬಳಿಕ ಪೋಷಕ ಪಾತ್ರಗಳಲ್ಲಿ ಲೀಲಾವತಿಯವರು ತಮ್ಮನ್ನು ತೊಡಗಿಸಿಕೊಂಡರು. ನಾಯಕಿಯಾಗಿ, ಅಮ್ಮನಾಗಿ, ಅಜ್ಜಿಯಾಗಿ ನಾನಾ ಬಗೆಯ ಪೋಷಕಪಾತ್ರಗಳಲ್ಲಿ ನಟಿಸಿದರು. ಅವುಗಳಲ್ಲಿ ಗೆಜ್ಜೆ ಪೂಜೆ, ಸಿಪಾಯಿ ರಾಮು, ನಾಗರಹಾವು, ಭಕ್ತ ಕುಂಬಾರ ಮುಂತಾದ ಚಿತ್ರಗಳು ಪ್ರಮುಖವಾದವು.

    First published: