30 ಲಕ್ಷ ವೆಚ್ಚದಲ್ಲಿ ನೋಡು ಶಿವ ಆಲ್ಬಂ ಹಾಡು!

ಕನ್ನಡದಲ್ಲಿ ಇಲ್ಲಿಯವರೆಗೂ ಯಾರೂ ಮಾಡದ ಅದ್ಧೂರಿಯಾದ ಪ್ರಯತ್ನ ಇದಾಗಲಿದ್ದು, ಆಲ್ಬಂ ಹಾಡಿನ ವಿಚಾರದಲ್ಲಿ ಕನ್ನಡದಲ್ಲಿ ಈ ಹಿಂದೆಂದೂ ಆಗದ ಒಂದು ಹೊಸತನವನ್ನು ಈ ಹಾಡಿನಲ್ಲಿ ತೋರಿಸಲಿಗ್ತಾ ಇದೆಯಂತೆ.

ಮೇಘನಾ ಶೆಟ್ಟಿ-ಚಂದನ್​ ಶೆಟ್ಟಿ

ಮೇಘನಾ ಶೆಟ್ಟಿ-ಚಂದನ್​ ಶೆಟ್ಟಿ

  • Share this:
ಮೋನಿಕಾ ಕಲ್ಲೂರಿ ಆರ್ಟ್ಸ್​ ಪ್ರೊಡಕ್ಷನ್​ ಬ್ಯಾನರ್​ನಲ್ಲಿ ಇದೀಗ ಆಲ್ಬಂ ಸಾಂಗ್​ವೊಂದು ಸಿದ್ಧವಾಗುತ್ತಿದೆ. ‘ನೋಡು ಶಿವ ’ ಶೀರ್ಷಿಕೆಯ ಈ ಹಾಡಿಗೆ ಚಂದನ್ ಶೆಟ್ಟಿ ಸಂಗೀತ ನೀಡಿ ಅವರೇ ಹಾಡನ್ನೂ ಹಾಡಿದ್ದಾರೆ. ಸುಮೀತ್ ಎಂ.ಕೆ ಈ ಹಾಡಿಗೆ ಸಾಹಿತ್ಯ ಬರೆದಿದ್ದು, ಪರಿಕಲ್ಪನೆ ಮತ್ತು ನಿರ್ದೇಶನ ಮಾಡುವುದರ ಜತೆಗೆ ಹಾಡಿನಲ್ಲಿಯೂ ಲೀಡ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಏನೆಂದರೆ, ಈ ಹಾಡಿನಲ್ಲಿ ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ ಗ್ಲಾಮರಸ್​​ ಆಗಿ ಹೆಜ್ಜೆ ಹಾಕಲಿದ್ದಾರೆ. ಸ್ಪೇಷಲ್ ಅಪೀಯರೆನ್ಸ್ ಆಗಿ ಚಂದನ್ ಶೆಟ್ಟಿ ಸಹ ಇರಲಿದ್ದಾರೆ.

‘ನೋಡು ಶಿವ ಎಂದೇ ಹಾಡು ಶುರುವಾಗಲಿದೆ. ಎಷ್ಟೋ ಜನ ಜೀವನದಲ್ಲಿ ಅಂದುಕೊಂಡಿದ್ದು ಏನೂ ಆಗಿಲ್ಲವಲ್ಲ ಎಂದು ತಮ್ಮನ್ನೇ ತಾವೇ ಶಪಿಸಿಕೊಳ್ಳುತ್ತಿರುತ್ತಾರೆ. ಎಷ್ಟೇ ಶ್ರಮ ಪಟ್ಟರೂ ಅದು ಈಡೇರುವುದಿಲ್ಲ. ಅಂದುಕೊಂಡ ಯಶಸ್ಸು ಸಿಕ್ಕಿರುವುದಿಲ್ಲ. ಈ ಥರದ ಹುಡುಗ ದೇವರ ಹತ್ತಿರ ಹೇಗೆ ಸಂಭಾಷಣೆ ಮಾಡುತ್ತಾನೆ. ತನ್ನ ಗೋಳನ್ನು ಹೇಗೆ ಹೇಳಿಕೊಳ್ಳುತ್ತಾನೆ ಎಂಬುದನ್ನು ಫನ್ನಿಯಾಗಿ ಹಾಡಿನಲ್ಲಿ ತೋರಿಸಲಾಗುತ್ತಿದೆಯಂತೆ.

ಕನ್ನಡದಲ್ಲಿ ಇಲ್ಲಿಯವರೆಗೂ ಯಾರೂ ಮಾಡದ ಅದ್ಧೂರಿಯಾದ ಪ್ರಯತ್ನ ಇದಾಗಲಿದ್ದು, ಆಲ್ಬಂ ಹಾಡಿನ ವಿಚಾರದಲ್ಲಿ ಕನ್ನಡದಲ್ಲಿ ಈ ಹಿಂದೆಂದೂ ಆಗದ ಒಂದು ಹೊಸತನವನ್ನು ಈ ಹಾಡಿನಲ್ಲಿ ತೋರಿಸಲಿಗ್ತಾ ಇದೆಯಂತೆ. ಅದ್ಧೂರಿ ವೆಚ್ಚದಲ್ಲಿ ಸಿದ್ಧವಾಗಲಿರುವ ಈ ಹಾಡು, ಪರಭಾಷಿಕರಿಗೂ ವಿಶೇಷ ಎನಿಸೋ ಸಾಧ್ಯತೆ ಇದೆ.

ಸರಿಸುಮಾರು 30ಲಕ್ಷ ಬಜೆಟ್ ನಲ್ಲಿ ಈ ಹಾಡು ಸಿದ್ದವಾಗಲಿದೆಯಂತೆ. ಹಾಡಿನ ಸಾಹಿತ್ಯ ಕೇಳಿ ಇಷ್ಟಪಟ್ಟು ಕೇವಲ ಎರಡೇ ತಾಸಿನಲ್ಲಿ ಚಂದನ್​ ಶೆಟ್ಟಿ ಕಂಪೋಸ್ ಮಾಡಿ, ಧ್ವನಿಯನ್ನೂ ನೀಡಿದ್ದಾರೆ. ಕಳೆದೊಂದು ತಿಂಗಳಿಂದ ಈ ಹಾಡಿನ ತಯಾರಿ ಕೆಲಸ ಶುರುವಾಗಿದ್ದು, 200 ಜನ ಈ ಹಾಡಿಗೆ ಕೆಲಸ ಮಾಡುತ್ತಿದ್ದಾರೆ. 60 ವೃತ್ತಿಪರ ಡಾನ್ಸರ್​ಗಳು ಹೆಜ್ಜೆ ಹಾಕಲಿದ್ದಾರೆ. ಮೂರು ದಿನಗಳಲ್ಲಿ ಎಎಂಸಿ ಕಾಲೇಜು ಕ್ಯಾಂಪಸ್​ನಲ್ಲಿಯೇ ಶೂಟಿಂಗ್​ ಮುಗಿಸಿಕೊಳ್ಳುವ ಪ್ಲಾನ್​ ತಂಡದ್ದಾಗಿದ್ದು, ಮೋಹನ್ ಮಾಸ್ಟರ್ ನೃತ್ಯ ನಿರ್ದೇಶನ ಮಾಡಲಿದ್ದಾರೆ.

ಇನ್ನು ವಿದೇಶದಲ್ಲಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾಭ್ಯಾಸ ಮಾಡಿರುವ ನಿರ್ಮಾಪಕಿ ಮೋನಿಕಾ, ಮೊದಲಿಂದಲೂ ಕಲೆಯತ್ತ ಆಸಕ್ತಿ. ಜಾಗೃತಿ ಮೂಡಿಸುವ ಕೆಲಸವನ್ನು ಏಕಕಾಲದಲ್ಲಿ ದೊಡ್ಡ ಸಮುದಾಯಕ್ಕೆ ತೋರಿಸುವ ಆಕ್ತಿ ಸಿನಿಮಾ ಕ್ಷೇತ್ರಕ್ಕಿದೆ. ಆ ಒಂದು ಕಾರಣಕ್ಕೆ ಸಿನಿಮಾ ಕ್ಷೇತ್ರವನ್ನು ಆಯ್ದುಕೊಂಡಿದ್ದು, ಮುಂದಿನ ವರ್ಷ ಹೊಸ ಸಿನಿಮಾ ನಿರ್ಮಾಣ ಮಾಡುವ ಬಗ್ಗೆಯೂ ಕನಸು ಕಟ್ಟಿಕೊಂಡಿದ್ದಾರೆ.
Published by:Harshith AS
First published: