ಗಾನ ಕೋಗಿಲೆ ಎಸ್​. ಜಾನಕಿ ಹೆಸರಿನಲ್ಲಿ ಸುಳ್ಳು ಸುದ್ದಿ ಹರಿಬಿಟ್ಟ ಕಿಡಿಗೇಡಿಗಳು..!

S. Janaki: 1952 ರಲ್ಲಿ ಅಂದಿನ ಖ್ಯಾತ ಸಂಗೀತ ನಿರ್ದೇಶಕ ಜಿ.ಕೆ. ವೆಂಕಟೇಶ್ ಅವರಿಂದ ಆಯೋಜಿಸಿದ್ದ ಸಂಗೀತ ಸಂಜೆಯಲ್ಲಿ ಪಿ. ಬಿ. ಶ್ರೀನಿವಾಸ್ ಜೊತೆ ಜಾನಕಿಯಮ್ಮ ಮೊದಲ ಬಾರಿ ಸಾರ್ವಜನಿಕವಾಗಿ ಹಾಡಿದ್ದರು.

news18-kannada
Updated:June 28, 2020, 7:31 PM IST
ಗಾನ ಕೋಗಿಲೆ ಎಸ್​. ಜಾನಕಿ ಹೆಸರಿನಲ್ಲಿ ಸುಳ್ಳು ಸುದ್ದಿ ಹರಿಬಿಟ್ಟ ಕಿಡಿಗೇಡಿಗಳು..!
ಎಸ್​ ಜಾನಕಿ
  • Share this:
ಸಂಗೀತ ಲೋಕದ ಸ್ವರ ಸಾಮ್ರಾಜ್ಞಿ, ಗಾನ ಕೋಗಿಲೆ ಹಿರಿಯ ಗಾಯಕಿ ಎಸ್.​ ಜಾನಕಿ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಗ ಮುರಳಿ ಕೃಷ್ಣ, ತಾಯಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅದರಿಂದ ಚೇತರಿಸಿಕೊಳ್ಳುತ್ತಿದ್ದು, ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಹಾಗೆಯೇ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಸುಳ್ಳು ಸುದ್ದಿಯನ್ನು ಹರಿಬಿಡಲಾಗಿದ್ದು, ಜಾನಕಿಯಮ್ಮ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಯಾವುದೇ ಭಯಪಡುವ ಅಗತ್ಯವಿಲ್ಲ ಎಂದು ಕುಟುಂಬಸ್ಧರು ತಿಳಿಸಿದ್ದಾರೆ.

ಮೂರು ವರ್ಷಗಳ ಹಿಂದೆ ಮೈಸೂರಿನಲ್ಲಿ ನಡೆದ `ಎಸ್.ಜಾನಕಿ ಮ್ಯೂಸಿಕಲ್ ನೈಟ್’ ಕಾರ್ಯಕ್ರಮದ ಮೂಲಕ ಸಂಗೀತ ಲೋಕಕ್ಕೆ ಗಾನ ಕೋಗಿಲೆ ವಿದಾಯ ಹೇಳಿದ್ದರು. ಸಾರ್ವಜನಿಕವಾಗಿ ಜಾನಕಿಯಮ್ಮ ಅವರ ಕೊನೆಯ ಹಾಡಿಗೆ ರಾಜವಂಶಸ್ಥೆ ಪ್ರಮೋದಾ ದೇವಿ, ನಟ ರಾಜೇಶ್, ಹಿರಿಯರಾದ ನಟಿ ಜಯಂತಿ, ಭಾರತೀ ವಿಷ್ಣುವರ್ಧನ್, ಹೇಮಾ ಚೌಧರಿ ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾಗಿದ್ದರು.

ಎಸ್. ಜಾನಕಿ ಅವರಿಗೆ ಈಗ ಸುಮಾರು 82 ವರ್ಷ ವಯಸ್ಸಾಗಿದ್ದು, ಸುಮಾರು 17 ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಜೊತೆಗೆ ನಾಲ್ಕು ಬಾರಿ ತಮ್ಮ ಹಾಡಿಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ.

1952 ರಲ್ಲಿ ಅಂದಿನ ಖ್ಯಾತ ಸಂಗೀತ ನಿರ್ದೇಶಕ ಜಿ.ಕೆ. ವೆಂಕಟೇಶ್ ಅವರಿಂದ ಆಯೋಜಿಸಿದ್ದ ಸಂಗೀತ ಸಂಜೆಯಲ್ಲಿ ಪಿ. ಬಿ. ಶ್ರೀನಿವಾಸ್ ಜೊತೆ ಜಾನಕಿಯಮ್ಮ ಮೊದಲ ಬಾರಿ ಸಾರ್ವಜನಿಕವಾಗಿ ಹಾಡಿದ್ದರು. ಹೀಗಾಗಿ ಮೈಸೂರಿಂದ ಪ್ರಾರಂಭವಾದ ಸಂಗೀತ ಪಯಣವನ್ನು ಅರಮನೆ ನಗರಿಯಲ್ಲೇ ಕೊನೆಗೊಳಿಸಿದ್ದರು.
First published:June 28, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading