news18-kannada Updated:August 20, 2020, 10:50 PM IST
ಎಸ್ ಪಿ ಬಾಲಸುಬ್ರಹ್ಮಣ್ಯಂ
ಚೆನ್ನೈ(ಆಗಸ್ಟ್ .20): ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಗಾಯಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಕುರಿತಂತೆ ಇಂದು ಚೆನ್ನೈನ ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದ್ದು, ಎಕ್ಮೋ ಮಷಿನ್, ವೆಂಟಿಲೇಟರ್ನಲ್ಲೇ ಇದ್ದಾರೆ ಎಂದು ತಿಳಿಸಿದೆ. ಇದರ ಜತೆಗೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.
Published by:
G Hareeshkumar
First published:
August 20, 2020, 9:22 PM IST