Meena: ಖ್ಯಾತ ನಟಿ ಮೀನಾ ಬಾಳಲ್ಲಿ ಘೋರ ದುರಂತ, ಶ್ವಾಸಕೋಶದ ಸೋಂಕಿಗೆ ಬಲಿಯಾದ ಪತಿ
ದಕ್ಷಿಣ ಭಾರತದ (South India) ಖ್ಯಾತ ಬಹುಭಾಷಾ ನಟಿ ಮೀನಾ (Meena) ಅವರ ಪತಿ ವಿದ್ಯಾಸಾಗರ್ (Vidyasagar) ಗಂಭೀರ ಶ್ವಾಸಕೋಶದ ಸೋಂಕಿನಿಂದ ನಿಧನರಾಗಿದ್ದಾರೆ (Death) ಎಂದು ತಿಳಿದುಬಂದಿದೆ.
ದಕ್ಷಿಣ ಭಾರತದ (South India) ಖ್ಯಾತ ಬಹುಭಾಷಾ ನಟಿ ಮೀನಾ (Meena) ಅವರ ಪತಿ ವಿದ್ಯಾಸಾಗರ್ (Vidyasagar) ಗಂಭೀರ ಶ್ವಾಸಕೋಶದ ಸೋಂಕಿನಿಂದ ನಿಧನರಾಗಿದ್ದಾರೆ (Death) ಎಂದು ತಿಳಿದುಬಂದಿದೆ. ಅನಾರೋಗ್ಯದ ಹಿನ್ನಲೆ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸದು ಅವರು ಇಹಲೋಕ ತ್ಯಜಿಸಿದ್ದಾರೆ. ಆಸ್ಪತ್ರೆ ಮೂಲಗಳ ಪ್ರಕಾರ ಅವರು ಕೆಲವು ವರ್ಷಗಳಿಂದ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಈ ಸೋಂಕು ಪಾರಿವಾಳದ ಹಿಕ್ಕೆಗಳ ಮೂಲಕ ಸೋಂಕಿತ ಗಾಳಿಯನ್ನು ಉಸಿರಾಡುವ ಮೂಲಕ ಹರಡುವ ಅಲರ್ಜಿಯಾಗಿದೆ. ಇಡೀ ಕುಟುಂಬವು ಕೋವಿಡ್ 19 ಗೆ ಧನಾತ್ಮಕ ಪರೀಕ್ಷೆ ನಡೆಸಿದ ನಂತರ ಈ ವರ್ಷದ ಜನವರಿಯಲ್ಲಿ ಸೋಂಕು ಉಲ್ಬಣಗೊಂಡಿತ್ತು. ಆದರೆ ನಂತರದಲ್ಲಿ ಅವರು ಚೇತರಿಸಿಕೊಂಡಿದ್ದರು. ಆದರೆ ಇದೀಗ ಸೋಂಕು ಹೆಚ್ಚಳವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ವಿದ್ಯಾಸಾಗರ್ ಅಗಲಿಕೆಗೆ ಚಿತ್ರರಂಗದ ಅನೇಕ ಗಣ್ಯರು ಸೇರಿದಂತೆ ಚಿತ್ರರಂಗದ ಅನೇಕರು ಸಂತಾಪ ಸೂಚಿಸಿದ್ದಾರೆ.
ಶ್ವಾಸಕೋಶದ ಸೋಂಕಿಗೆ ತುತ್ತಾಗಿದ್ದ ವಿಧ್ಯಾಸಾಗರ್:
ನಟಿ ಮೀನಾ ಪತಿ ಶ್ವಾಸಕೋಶದ ಸೋಂಕಿಗೆ ತುತ್ತಾಗಿದ್ದರು. ಹೀಗಾಗಿ ಕೆಲವು ವಾರಗಳ ಹಿಂದೆ ವಿದ್ಯಾಸಾಗರ್ ಅವರಿಗೆ ಶ್ವಾಸಕೋಶದ ಸೋಂಕಿನ ಕಸಿ ಮಾಡಿಸಿಕೊಳ್ಳುವಂತೆ ವೈದ್ಯರು ಸೂಚಿಸಿದ್ದರು. ಆದರೆ ಕಸಿ ಮಾಡಿಸಿಕೊಳ್ಳಲು ದಾನಿಗಳು ಸರಿಯಾಗಿ ಸಿಗದ ಕಾರಣ ಅವರು ನಿಧನರಾದರು ಎಂದು ಮೂಲಗಳು ತಿಳಿಸಿವೆ. ಆದರೆ ವೈದ್ಯರು ಔಷಧಿಗಳ ಮೂಲಕ ಪರಿಸ್ಥಿತಿಯನ್ನು ಗುಣಪಡಿಸಲು ಪ್ರಯತ್ನಿಸಿದ್ದರು. ದಕ್ಷಿಣ ಭಾರತದ ಚಿತ್ರರಂಗದ ಹಲವಾರು ಸೆಲೆಬ್ರಿಟಿಗಳು ಮೀನಾ ಮತ್ತು ಅವರ ಮಗಳಿಗೆ ಸಂತಾಪ ಸೂಚಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.
It is shocking to hear the news of the untimely demise of Actor Meena's husband Vidyasagar, our family's heartfelt condolences to Meena and the near and dear of her family, may his soul rest in peace pic.twitter.com/VHJ58o1cwP
ಇನ್ನು, ದಕ್ಷಿಣ ಭಾರತದ ಖ್ಯಾತ ನಟಿ ಮೀನಾ 2009ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮೀನಾ ಅವರು ಬೆಂಗಳೂರು ಮೂಲದ ವಿದ್ಯಾಸಾಗರ್ ಎಂಬುವವರನ್ನು 2009 ರಲ್ಲಿ ಮದುವೆಯಾಗಿದ್ದರು. ಅಲ್ಲದೇ ಈ ದಂಪತಿಗೆ ನೈನಿಕಾ ಎಂಬ ಮಗಳಿದ್ದಾಳೆ, ಅವರು 'ತೇರಿ' ಚಿತ್ರದಲ್ಲಿ ದಳಪತಿ ವಿಜಯ್ ಅವರ ಮಗಳಾಗಿ ನಟಿಸಿದ್ದಾರೆ. ಇನ್ನು, ವಿದ್ಯಾ ಸಾಗರ್ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದು, ಮದುವೆಯ ನಂತರ ಈ ಜೋಡಿ ಚೆನ್ನೈನಲ್ಲಿ ವಾಸಿಸುತ್ತಿದ್ದರು.
ದಕ್ಷಿಣ ಭಾರತದ ಖ್ಯಾತ ನಟಿ ಮೀನಾ 1982 ರಲ್ಲಿ ನೆಂಜಂಗಲ್ ಚಿತ್ರದಲ್ಲಿ ಬಾಲ ಕಲಾವಿದೆಯಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ನಂತರ ಸಾಲು ಸಾಲು ಸಿನಿಮಾಗಳಲ್ಲಿ ಇವರು ಬಾಲ ನಟಿಯಾಗಿ ಅಭಿನಯಿಸಿ ಮೆಚ್ಚುಗೆ ಪಡೆದರು. ಬಳಿಕ ನವಯುಗಂ ಎಂಬ ತೆಲುಗು ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕಿಯಾಗಿ ಪರಿಚಿತರಾದರು. ಇದಾದ ನಂತರ ಅವರ ನಟನೆಯಿಂದ ಸಾಲು ಸಾಲು ಸಿನಿಮಾಗಳು ಅವರನ್ನು ಅರಸಿ ಬಂದವು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ಇವರು ನಟಿಸಿದ್ದಾರೆ.
ಇದಲ್ಲದೇ ಮೀನಾ ರಜನೀಕಾಂತ್, ಮುಮ್ಮುಟಿ, ಸುದೀಪ್, ವಿಷ್ಣುವರ್ಧನ್, ರವಿಚಂದ್ರನ್ ಅಂತಹ ಸ್ಟಾರ್ ನಟರುಗಳ ಜೊತೆ ತೆರೆಹಂಚಿಕೊಂಡಿದ್ದಾರೆ. ಇವರು ಪುಟ್ನಂಜ ಚಿತ್ರದ ಮೂಲಕ ಸ್ಯಾಂಡಲ್ವುಡ್ ಪ್ರವೇಶಿಸಿದರು. ಬಳಿಕ ಸ್ವಾತಿಮುತ್ತು, ಚೆಲುವ, ಮೊಮ್ಮಗ, ಶ್ರೀ ಮಂಜುನಾಥ್, ಗ್ರಾಮ ದೇವತೆ, ಸಿಂಹಾದ್ರಿಯ ಸಿಂಹ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.
Published by:shrikrishna bhat
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ