ಹೊಸವರ್ಷವನ್ನು ಜಗತ್ತಿನಾದ್ಯಂತ ಬಹಳ ವಿಜೃಂಭಣೆಯಿಂದ ಬರಮಾಡಿಕೊಳ್ಳಲಾಗಿದೆ. ಬೆಂಗಳೂರಿನಲ್ಲೂ ಮೋಜು-ಮಸ್ತಿ ಮಾಡಿ, ಕೇಕ್ ಕತ್ತರಿಸಿ ಹೊಸ ವರ್ಷವನ್ನು ಸಂಭ್ರಮಿಸಲಾಗಿದೆ. ಸ್ಯಾಂಡಲ್ವುಡ್ ಸೆಲೆಬ್ರಿಟಿಗಳು ಕೂಡ ಇದಕ್ಕೆ ಹೊರತಾಗಿಲ್ಲ. ಸ್ನೇಹಿತರು, ಕುಟುಂಬದವರ ಜೊತೆ ಹೊಸ ವರ್ಷಾಚರಣೆ ನಡೆಸಿರುವ ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.
ಸ್ಯಾಂಡಲ್ವುಡ್ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕೂಡ ತಮ್ಮ ಅಭಿಮಾನಿಗಳಿಗೆ ವಿಶೇಷವಾಗಿ ಶುಭಾಶಯ ಕೋರಿದ್ದಾರೆ. ಅಪ್ಪ, ಅಮ್ಮ, ಹೆಂಡತಿ ಪ್ರಿಯಾ, ಮಗಳು ಮತ್ತಿತರ ಕುಟುಂಬದ ಸದಸ್ಯರೊಂದಿಗೆ ಕುಳಿತು ವಿಡಿಯೋ ಮೂಲಕ ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ನಿನ್ನೆ ಮಧ್ಯರಾತ್ರಿ ಸುದೀಪ್ ಟ್ವೀಟ್ ಮಾಡಿರುವ ಈ ವಿಡಿಯೋಗೆ ಅಭಿಮಾನಿಗಳು ಖುಷಿಯಾಗಿದ್ದಾರೆ.
Happy 2020.... 🥰 pic.twitter.com/24stfkHLeV
— Kichcha Sudeepa (@KicchaSudeep) December 31, 2019
(1/3)
2020ಗೆ ಹೆಜ್ಜೆಯಿಡುವ ಮುನ್ನ ಈ ವರ್ಷದ ನಿಮ್ಮ ಹೆಜ್ಜೆಗುರುತುಗಳತ್ತ ಒಮ್ಮೆ ಕಣ್ಣಾಯಿಸಿ ನೋಡಿ. ಈ ವರ್ಷದಲ್ಲಿ ನೀವು ಕಳೆದ ಅಮೂಲ್ಯ ಕ್ಷಣಗಳು ಮತ್ತು ಜೊತೆಯಾದ ವ್ಯಕ್ತಿಗಳು! ನೀವು ಕ್ಷಮೆ ಕೇಳಬೇಕಾದವರು ಮತ್ತು ನಿಮ್ಮಿಂದ ಕ್ಷಮೆಗೆ ಕಾದಿರುವವರು.
ಬೇರೆಯವರಿಂದ ನಿಮಗೆ ಸಿಕ್ಕ ಒಳ್ಳೆಯದು ಮತ್ತು ನಿಮ್ಮಿಂದ ಬೇರೆಯವರಿಗಾದ ಒಳ್ಳೆಯದು!
— Kichcha Sudeepa (@KicchaSudeep) December 31, 2019
(2/3)
ಮುಂತಾದುವುಗಳನ್ನು ಸೂಕ್ಷ್ಮವಾಗಿ ಅವಲೋಕಿಸಿಕೊಂಡರೆ ನೀವು ನಡೆದು ಬಂದ ಹಾದಿ ಬಗ್ಗೆ ಸ್ಪಷ್ಟತೆಗಳು ಸಿಕ್ಕಿಬಿಡುತ್ತವೆ.
ಆ ಸ್ಪಷ್ಟತೆಗಳ ಆಧಾರದ ಮೇಲೆ ಈ ವರ್ಷ ಮಾಡಬೇಕಾದ್ದೇನು? ಮಾಡಬಾರದ್ದೇನು? ನೀ ಬದಲಾಗಬೇಕಾದ್ದು ಎಲ್ಲಿ? ಸ್ಥಿರತೆ ಕಾಪಾಡಿಕೊಳ್ಳಬೇಕಾದ್ದು ಎಲ್ಲಿ ?
— Kichcha Sudeepa (@KicchaSudeep) December 31, 2019
(3/3)
ಎಂಬುವುಗಳ ಬಗ್ಗೆ ದಿಟ್ಟ ನಿರ್ಧಾರ ಹೊಂದಿ 2020ನೇ ವರ್ಷಕ್ಕೆ ಹೆಜ್ಜೆಯಿಡೋಣ. 2020 ಅನ್ನು ಅತ್ಯಂತ ಹರ್ಷದಿಂದ ಸ್ವಾಗತಿಸಿ, ಹೆಚ್ಚು ಸಾರ್ಥಕವಾಗಿ ಕಳೆಯೋಣ.
Happy 2020 to All.
🤗🤗🤗🤗🤗🌠🌠
— Kichcha Sudeepa (@KicchaSudeep) December 31, 2019
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ