Kichcha Sudeep: ಅಪ್ಪು ಹಾದಿಯಲ್ಲಿ ಕಿಚ್ಚ ಸುದೀಪ್​; ಅಭಿನಯ ಚಕ್ರವರ್ತಿ ಇದೀಗ ಪುಣ್ಯಕೋಟಿ ರಾಯಭಾರಿ

ಸುದೀಪ್​ ಅವರನ್ನು ಪಶು ಸಂಗೋಪನೆ ಇಲಾಖೆಯ ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಸುದೀಪ್ ಅವರು ಯಾವುದೇ ಸಂಭಾವನೆ ಇಲ್ಲದೆ ಈ ಕೆಲಸವನ್ನು ನಿರ್ವಹಿಸುವುದಾಗಿ ಒಪ್ಪಿಕೊಂಡಿದ್ದಾರೆ.

ನಟ ಸುದೀಪ್

ನಟ ಸುದೀಪ್

  • Share this:
ಬೆಂಗಳೂರು (ಸೆ.02): ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ಕರುನಾಡ ಚಕ್ರವರ್ತಿ  ಕಿಚ್ಚ ಸುದೀಪ್ (Kichcha Sudeep) ಅವರನ್ನು ನೇಮಿಸಲಾಗಿದೆ. ಈ ಬಗ್ಗೆ ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ (Prabhu B.Chavan) ತಿಳಿಸಿದ್ದಾರೆ. ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಪ್ರಭು ಚವ್ಹಾಣ್, ತಾವು ಈ ಸತ್ಕಾರ್ಯದಲ್ಲಿ ಭಾಗಿಯಾಗಿ ಗೋ ಸಂಪತ್ತಿನ ಸಂರಕ್ಷಣೆಗೆ ಸರ್ಕಾರ ತೊಟ್ಟಿರುವ ಸಂಕಲ್ಪಕ್ಕೆ ಕೈ ಜೋಡಿಸಿ, ಗೋಮಾತಾ ರಕ್ಷಣೆಯಲ್ಲಿ (Protection Of Cows) ನಾವೆಲ್ಲರೂ ಭಾಗಿಯಾಗೋಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸುದೀಪ್ ಪುಣ್ಯಕೋಟಿ ರಾಯಭಾರಿ​​ 

ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲಾಗಿದೆ. ಹೈನುಗಾರಿಕೆಗೆ ಉತ್ತೇಜನ,  ಜಾನುವಾರುಗಳ ಸಂರಕ್ಷಣೆ, ಪಾಲನೆ, ಪೋಷಣೆ ಮಾಡುತ್ತಿರುವ ಸರ್ಕಾರದೊಂದಿಗೆ ಕೈ ಜೋಡಿಸಿ, ಸಾರ್ವಜನಿಕರಲ್ಲಿ ಸ್ಫೂರ್ತಿ ತುಂಬಲು ತಮ್ಮನ್ನು ಪುಣ್ಯಕೋಟಿ ರಾಯಭಾರಿ​​ಯಾಗಿ ನೇಮಿಸಲಾಗಿದೆ. ತಮ್ಮ ಜನ್ಮದಿನದ ಈ ಶುಭ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ.



ಮಾಹಿತಿ ಹಂಚಿಕೊಂಡ ಪ್ರಭು ಚವ್ಹಾಣ್ 

ಸುದೀಪ್​ ಅವರನ್ನು ಪಶು ಸಂಗೋಪನೆ ಇಲಾಖೆಯ ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಸುದೀಪ್ ಅವರು ಯಾವುದೇ ಸಂಭಾವನೆ ಇಲ್ಲದೆ ಈ ಕೆಲಸವನ್ನು ನಿರ್ವಹಿಸುವುದಾಗಿ ಒಪ್ಪಿಕೊಂಡಿದ್ದಾರೆ. ಎಂದು ಪ್ರಭು ಚವ್ಹಾಣ್ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Kichcha Sudeep: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಕಿಚ್ಚ ಸುದೀಪ್

ರಾಯಭಾರಿಯಾಗುವಂತೆ ಕೋರಿದ್ದ ಸರ್ಕಾರ

ಈ ಹಿಂದೆ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ನಟ ಸುದೀಪ್‌ ಅವರಿಗೆ ಪತ್ರ ಬರೆದು, ಪುಣ್ಯಕೋಟಿ ರಾಯಭಾರಿಯಾಗುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ನಟ ಸುದೀಪ್‌ ಪಶು ಸಂಗೋಪನೆ ಇಲಾಖೆಯ ರಾಯಭಾರಿ ಕೆಲಸ ನಿರ್ವಹಿಸಲು ಒಪ್ಪಿಕೊಂಡಿದ್ದಾರೆ.

ಯಾವುದೇ ಸಂಭಾವನೆ ಪಡೆದಿಲ್ಲ

ಇಂದು ಅವರ ಜನ್ಮದಿನದ ಅಂಗವಾಗಿ ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಿರುವ ಕುರಿತು ಅಧಿಕೃತವಾಗಿ ಪತ್ರ ಬರೆಯಲಾಗಿದೆ. ಸುದೀಪ್ ಈ ಕೆಲಸಕ್ಕ ಯಾವುದೇ ಸಂಭಾವನೆ ಪಡೆಯದೇ ಗೋಸಂಪತ್ತಿನ ಸಂರಕ್ಷಣೆಗೆ ತಮ್ಮ ಸಣ್ಣದೊಂದು ಅಳಿಲು ಸೇವೆ ಸಲ್ಲಿಸುವುದಾಗಿ ತಿಳಿಸಿರುವುದಾಗಿ ಪ್ರಭು ಚವ್ಹಾಣ್ ವಿವರಿಸಿ, ಜನ್ಮದಿನಕ್ಕೆ ಶುಭ ಕೋರಿದ್ದಾರೆ. ಪುನೀತ್​ ರಾಜ್ ಕುಮಾರ್ ಅವರು ಸಹ ಸಾಮಾಜಿಕ ಕಳಕಳಿಯ ಸರ್ಕಾರದ ಕೆಲಸಕ್ಕೆ ಜಾಹಿರಾತು ನೀಡಲು ಸಹ ಯಾವುದೇ ಸಂಭಾವನೆ ಪಡೆಯುತ್ತಿರಲಿಲ್ಲ.



ಗೋಹತ್ಯೆ ನಿಷೇಧ ಕಾಯ್ದೆ

ರಾಜ್ಯದಲ್ಲಿ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ, ಪ್ರಾಣಿ ಕಲ್ಯಾಣ ಮಂಡಳಿ, ಪ್ರಾಣಿ ಸಹಾಯವಾಣಿ, 100 ಸರ್ಕಾರಿ ಗೋ ಶಾಲೆಗಳು, ಪಶು ಸಂಜೀವಿನಿ ಆ್ಯಂಬುಲೆನ್ಸ್, ಗೋಮಾತಾ ಸಹಕಾರ ಸಂಘ, ಆತ್ಮನಿರ್ಭರ ಗೋ ಶಾಲೆ, ಸಂಚಾರಿ ಪಶು ಚಿಕಿತ್ಸಾ ವಾಹನಗಳು, ಪಶು ಜಿಲ್ಲಾಸ್ಪತ್ರೆಗಳ ನಿರ್ಮಾಣ , ಸ್ಪೇಷಲ್, ಸೂಪರ್ ಸ್ಪೇಷಾಲಿಟಿ ಹಾಗೂ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಗಳು, 100 ಪಶು ಚಿಕಿತ್ಸಾಲಯಗಳು, 400 ಪಶು ವೈದ್ಯರ ನೇಮಕಾತಿ, 250 ಕಿರಿಯ ಪಶು ವೈದ್ಯಕೀಯ ಸಹಾಯಕರ ನೇಮಕಾತಿ, ಪುಣ್ಯಕೋಟಿ ದತ್ತು ಯೋಜನೆ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದೀಗ ಕಿಚ್ಚ ಸುದೀಪ್ ರಾಯಭಾರಿಯಾಗಲು ಒಪ್ಪಿರುವುದು ಗೋಸೇವೆಯಲ್ಲಿ ತೊಡಗಿರುವ ನಮಗೆ ಆನೆ ಬಲ ಬಂದಂತಾಗಿದೆ ಎಂದು ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Kiccha Sudeep Birthday: ಇಂದು 49ನೇ ವಸಂತಕ್ಕೆ ಕಾಲಿಟ್ಟ ಕಿಚ್ಚ ಸುದೀಪ್​, ಐರನ್​ ಲೆಗ್​ ಟು ಗೋಲ್ಡನ್​ ಮ್ಯಾನ್​!

ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಣೆ
ಸುದೀಪ್ ಚಾರಿಟಬಲ್ ಟ್ರಸ್ಟ್ ಮೂಲಕ ಕಾಲು ಇಲ್ಲದ ಇಬ್ಬರಿಗೆ ಕೃತಕ ಕಾಲು ಜೋಡಿಸೋ ಮೂಲಕ ಇಬ್ಬರ ಬಾಳಲ್ಲಿ ಕಿಚ್ಚ ಸುದೀಪ್​ ಬೆಳಕಾಗಿದ್ದಾರೆ. ಕಿಚ್ಚ ಚಾರಿಟಬಲ್ ಟ್ರಸ್ಟ್ ಮೂಲಕ ಈಗಾಗಲೇ ಸಾಕಷ್ಟು ಸಮಾಜ ಸೇವೆ ಮಾಡಿರೋ ಸುದೀಪ್​, ಇದೀಗ ಪುಟ್ಟ ಬಾಲಕ ಹಾಗೂ ಯುವಕನೋರ್ವನಿಗೆ ಕೃತಕ ಕಾಲು ಜೋಡಿಸಲು ನೆರವಾಗಿದ್ದಾರೆ.
Published by:Pavana HS
First published: