Video: ತಾಳ್ಮೆ ಇರಲಿ ಎಲ್ಲ ಸರಿ ಹೋಗುತ್ತದೆ: ಸೆಲೆಬ್ರಿಟಿ ತಾಯಿ-ಮಗಳ ಹಾಡಿನ ವಿಡಿಯೋ ವೈರಲ್..!
ಸರ್ಕಾರ ಹಾಗೂ ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣದ ಮೂಲಕ ಜನರಲ್ಲಿ ಕೊರೋನ ಕುರಿತಾಗಿ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ. ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು ಹೀಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಾಕಷ್ಟು ವಿಡಿಯೋಗಳನ್ನು ಮಾಡುತ್ತಾ ಜನರಿಗೆ ತಲುಪಿಸುತ್ತಿದ್ದಾರೆ.
ದಿನೇ ದಿನೇ ಹೆಚ್ಚುತ್ತಿರುವ ಕೊರೋನಾ ಸೋಂಕಿನಿಂದಾಗಿ ಎಲ್ಲೆಡೆ ಆತಂಕ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ಸಂಕಷ್ಟದಲ್ಲಿದ್ದಾರೆ. ಜನರು ಕೊರೋನಾ ಭೀತಿಯಿಂದಾಗಿ ಮನೆಗಳಿಂದ ಹೊರ ಬೀಳಲು ಹೆದರುತ್ತಿದ್ದಾರೆ.
ಸರ್ಕಾರ ಹಾಗೂ ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣದ ಮೂಲಕ ಜನರಲ್ಲಿ ಕೊರೋನ ಕುರಿತಾಗಿ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ. ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು ಹೀಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಾಕಷ್ಟು ವಿಡಿಯೋಗಳನ್ನು ಮಾಡುತ್ತಾ ಜನರಿಗೆ ತಲುಪಿಸುತ್ತಿದ್ದಾರೆ.
ಹೀಗಿರುವಾಗಲೇ ಸ್ಯಾಂಡಲ್ವುಡ್ ಸೆಲೆಬ್ರಿಟಿಗಳಾದ ಸುಧಾ ಬೆಳವಾಡಿ ಹಾಗೂ ಅವರ ಮಗಳು ಈ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ. ಕನ್ನಡದ ಹಾಡಿನ ಮೂಲಕ ತಾಳ್ಮೆ ಇರಲಿ ಎಲ್ಲ ಸರಿಹೋಗುತ್ತದೆ ಎಂದು ಸಾರುತ್ತಿದ್ದಾರೆ. ಸುಧಾ ಹಾಗೂ ಅವರ ಮಗಳು ಸಂಯುಕ್ತಾ ಹಾಡಿರುವ ಹಾಡಿನ ವಿಡಿಯೋ ಇಲ್ಲಿದೆ ನೋಡಿ.
ಕಳೆದು ಹೋದುದಕೆ ಕೊರಗುವುದನ್ನು ಬಿಡು ಉಳಿದಿರುವುದನ್ನು ಕಂಡು ಹರುಷ ಪಡು ಎನ್ನುತ್ತಿರುವ ಸುಧಾ ಹಾಗೂ ಸಂಯುಕ್ತಾ ತುಂಬಾ ಚೆನ್ನಾಗಿ ಹಾಡಿದ್ದಾರೆ. ಜೊತೆಗೆ ಈ ವಿಡಿಯೋವನ್ನು ಸಂಯುಕ್ತಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಲಾಕ್ಡೌನ್ನಲ್ಲಿ ಸಂಯುಕ್ತಾ ಬೀದಿ ನಾಯಿಗಳಿಗೆ ಅನ್ನಾಹಾರ ನೀಡಲು ತಮ್ಮದೇ ಆದ ತಂಡವನ್ನು ಕಟ್ಟಿಕೊಂಡು ಕೆಲಸ ಮಾಡುತ್ತಿದ್ದರು. ನಿತ್ಯ ರಾತ್ರಿ ನೂರಾರು ಬೀದಿ ನಾಯಿಗಳಿಗೆ ಆಹಾರ ನೀಡುವ ಕೆಲಸದಲ್ಲಿ ನಿರತರಾಗಿದ್ದರು.
Ramesh Aravind: ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ರಮೇಶ್ ಅರವಿಂದ್ ದಂಪತಿ..!