ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಸೂರೆಗೊಂಡಿರುವ ನಟ ಶಶಿಕುಮಾರ್. ಇಂತಹ ಶಶಿಕುಮಾರ್ ಈ ಮತ್ತೆ ಬಣ್ಣ ಹಚ್ಚುತ್ತಿದ್ದು ತೆರೆಮೇಲೆ ಬರಲು ಸಜ್ಜಾಗಿದ್ದಾರೆ. 'ಶಂಭೋ ಶಿವ ಶಂಕರ' ಚಿತ್ರದಲ್ಲಿಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಶಶಿಕುಮಾರ್ ಕಾಣಿಸಿಕೊಳಲಿದ್ದಾರೆ. ಅಂದಹಾಗೆ ಈ ಚಿತ್ರದಲ್ಲಿ ಶಶಿಕುಮಾರ್ಗೆ ಅವರದು ಮಹತ್ವದ ಪಾತ್ರವಂತೆ.
ಈಗಾಗಲೇ ಶಂಭೋ ಶಿವ ಶಂಕರ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಡಿಸೆಂಬರ್ 9ರಿಂದ ದ್ವಿತೀಯ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಲಿದೆ. ಶಶಿಕುಮಾರ್ ಸೇರಿದಂತೆ ಚಿತ್ರದಲ್ಲಿ ಅಭಿನಯಿಸುವ ಎಲ್ಲಾ ಕಲಾವಿದರು ದ್ವಿತೀಯ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರಂತೆ.
Kajal Aggarwal: ಕಾಜಲ್ ಅಗರ್ವಾಲ್-ಗೌತಮ್ ಕಿಚ್ಲು ವಿವಾಹಕ್ಕೆ ತಿಂಗಳ ಸಂಭ್ರಮ: ಖುಷಿ ಹಂಚಿಕೊಂಡ ನಟಿ..!
ಅಘನ್ಯ ಪಿಕ್ಚರ್ಸ್ ಲಾಂಛನದಲ್ಲಿ ವರ್ತೂರ್ ಮಂಜು ಅವರು ನಿರ್ಮಿಸುತ್ತಿರುವ 'ಶಂಭೋ ಶಿವ ಶಂಕರ' ಚಿತ್ರವನ್ನು ಶಂಕರ್ ಕೋನಮಾನಹಳ್ಳಿ ನಿರ್ದೇಶಿಸುತ್ತಿದ್ದಾರೆ. ಕಿರುತೆರೆಯಲ್ಲಿ ಜನಪ್ರಿಯ ಧಾರಾವಾಹಿಗಳನ್ನು ನಿರ್ದೇಶಿಸಿರುವ ಶಂಕರ್ ಕೋನಮಾನಹಳ್ಳಿ ಅವರಿಗೆ ಬೆಳ್ಳಿತೆರೆಯಲ್ಲಿ ಇದು ಮೊದಲ ಚಿತ್ರ.
Darshan: ದರ್ಶನ್ ಅಭಿನಯದ ರಾಜವೀರ ಮದಕರಿ ನಾಯಕ ಸಿನಿಮಾದ ಎರಡನೇ ಹಂತದ ಚಿತ್ರೀಕರಣ: ಇಲ್ಲಿದೆ ಅಪ್ಡೇಟ್..!
ಕಥೆ, ಚಿತ್ರಕಥೆ, ಸಂಭಾಷಣೆ ಕೂಡ ಶಂಕರ್ ಕೋನಮಾನಹಳ್ಳಿ ಅವರದೆ. ಗೌಸ್ ಫೀರ್ ಹಾಗೂ ಹಿತನ್ ಹಾಸನ್ ಹಾಡುಗಳನ್ನು ಬರೆದಿದ್ದು, ಹಿತನ್ ಹಾಸನ್ ಅವರೆ ಸಂಗೀತ ನೀಡುತ್ತಿದ್ದಾರೆ. ನಟರಾಜ್ ಮುದ್ದಾಲ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ, ವೆಂಕಟೇಶ್ ಯುಡಿವಿ ಸಂಕಲನ ಹಾಗೂ ಅಲ್ಟಿಮೆಟ್ ಶಿವು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಶಂಭೋ ಶಿವ ಶಂಕರ ಮೂರು ನಾಯಕ ಪಾತ್ರಗಳ ಹೆಸರಾಗಿದ್ದು, ಅಭಯ್ ಪುನೀತ್, ರೋಹಿತ್ ಹಾಗೂ ರಕ್ಷಕ್ ಈ ಮೂರು ಪಾತ್ರಗಳಲ್ಲಿ ಕಾಣಿಸಿಕೊಳುತ್ತಿದ್ದಾರೆ. ಈಗಾಗಲೇ ಕನ್ನಡದ ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ಸೋನಾಲ್ ಮಾಂಟೆರೊ ಈ ಚಿತ್ರದ ನಾಯಕಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ